• search
ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗಾಂಧಿ ಚಿಂತನೆ ಸಾಕಾರಗೊಳಿಸುವತ್ತ ಸಮ್ಮಿಶ್ರ ಸರ್ಕಾರ: ಎಚ್ ಡಿ ರೇವಣ್ಣ

|

ಹಾಸನ ಅ.2: ಗ್ರಾಮ ಸ್ವರಾಜ್ಯದ ಕನಸು ಕಂಡ ಮಹಾನ್ ಪುರುಷ, ಮಹಾತ್ಮ ಗಾಂಧಿಯವರ ಚಿಂತನೆಗಳನ್ನು ಸಾಕಾರಗೊಳಿಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ ರೇವಣ್ಣ ತಿಳಿಸಿದರು.

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಹಾಸನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ದಿ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೀ, ಕರೆದರೂ ಏಕೆ ಬರಲಿಲ್ಲ?':ಬಿಜೆಪಿ ಶಾಸಕನಿಗೆ ರೇವಣ್ಣ ತರಾಟೆ

ಅಹಿಂಸೆ, ಸತ್ಯಾಗ್ರಹ ಮತ್ತು ಹೋರಾಟದ ಮೂಲಕ ಜಗತ್ತನ್ನು ಗೆದ್ದ ಮಹಾನ್ ಪುರುಷ ಮಹಾತ್ಮ ಗಾಂಧಿಯವರು ಇಡೀ ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ್ದಾರೆ ಅವರ ತತ್ವಾದರ್ಶಗಳನ್ನು ಪಾಲಿಸೋಣ ಎಂದರು.

ಹಳ್ಳಿಗಳ ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮಹಾತ್ಮ ಗಾಂಧಿಯವರು ಗುಡಿ ಕೈಗಾರಿಕೆ, ಸ್ವಯಂ ಉದ್ಯೋಗಕ್ಕೆ ಹೆಚ್ಚು ಒತ್ತು ನೀಡಿದ್ದರು. ಈ ನಿಟ್ಟಿನಲ್ಲಿ ಗ್ರಾಮಗಳ ವಿಕಾಸಕ್ಕೆ ಮುತುವರ್ಜಿ ವಹಿಸಿ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಸಚಿವರು ತಿಳಿಸಿದರು.

ಶಾಸಕರಾದ ಪ್ರೀತಂ ಜೆ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಹಿಂಸಾ ಮಾರ್ಗದಲ್ಲಿ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯವರ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಹಾಸನ: ಮಂತ್ರಿ ರೇವಣ್ಣ ಪತ್ನಿ, ಮಾಜಿ ಮಂತ್ರಿ ಎ.ಮಂಜು ಮಗನ ನಡುವೆ ಜಟಾಪಟಿ

ಮಹಾತ್ಮ ಗಾಂಧಿಯವರು ಬಡತನವನ್ನು ಕಣ್ಣಾರೆ ಕಂಡು ತಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಂಡರು ಮಹಾತ್ಮ ಗಾಂಧಿಯವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕರೆ ನೀಡಿದವರು ರೈತರ ಏಳಿಗೆಗೆ ಗ್ರಾಮಗಳ ಅಭಿವೃದ್ಧಿಯಾಗಬೇಕು ಎಂದು ಕನಸು ಕಂಡವರು.

ಸ್ವಚ್ಛ ಭಾರತ ಪರಿಕಲ್ಪನೆ ಹೊಂದಿದ್ದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪಾಕಿಸ್ತಾನದ ವಿರುದ್ಧ ಹೋರಾಡಲು ಸೈನಿಕರಿಗೆ ಆತ್ಮಸ್ಥೈರ್ಯ ತುಂಬಿದವರು ದೇಶಕ್ಕೋಸ್ಕರ ತಮ್ಮನ್ನು ತಾವು ಅರ್ಪಿಸಿಕೊಂಡ ಅವರ ಕನಸಿನ ದೇಶವನ್ನು ಕಟ್ಟಲು ಎಲ್ಲರೂ ಕೈಜೋಡಿಸಬೇಕು ಎಂದರು.

ಸ್ವದೇಶಿ ವಸ್ತು ಬಳಕೆ ಹೆಚ್ಚಲಿ

ಸ್ವದೇಶಿ ವಸ್ತು ಬಳಕೆ ಹೆಚ್ಚಲಿ

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ಮಾತನಾಡಿ, ಸ್ವಾತಂತ್ರ್ಯಕ್ಕೋಸ್ಕರ ತಮ್ಮದೇ ಆದ ಅಸ್ತ್ರವನ್ನು ಬಳಸಿ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟಂತಹ ಮಹಾತ್ಮ ಗಾಂಧಿ ಅವರ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಹಳ್ಳಿಗಳ ಉದ್ಧಾರವಾದರೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಸ್ವದೇಶಿ ವಸ್ತುಗಳ ಬಳಕೆಗೆ ಹೆಚ್ಚು ಒತ್ತು ನೀಡಿದ್ದರು. ಈ ನಿಟ್ಟಿನಲ್ಲಿ ಸ್ವದೇಶಿ ವಸ್ತುಗಳ ಬಳಕೆಗೆ ಮುಂದಾಗಬೇಕು ಎಂದು ಹೇಳಿದರು.

ವಿದ್ಯಾರ್ಥಿ ಜೀವನದಲ್ಲಿಯೇ ಮಹಾತ್ಮ ಗಾಂಧಿಯವರ ಮೌಲ್ಯವನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದರು.

ಆಕರ್ಷಿಸಿದ ಚಿಣ್ಣರು

ಆಕರ್ಷಿಸಿದ ಚಿಣ್ಣರು

ಮಹಾತ್ಮ ಗಾಂಧಿಯವರ 150ನೇ ಜಯಂತಿಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಚಿಣ್ಣರು ಜನರನ್ನು ಆಕರ್ಷಿಸಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಗಣ್ಯರು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಬಿ.ಟಿ. ಸತೀಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಪ್ರಕಾಶ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ಪುಟ್ಟಸ್ವಾಮಿ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಪ್ರಿಯಾಂಕ, ಎಂ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಆರ್.ಉದಯಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ ಅವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ಮಹಾತ್ಮ ಮಾಡಿದ್ದು ಹತ್ತು ನಿಮಿಷದ ಭಾಷಣ! ಹಳ್ಳಿಗರು ನೀಡಿದ್ದು ಬುಟ್ಟಿಗಟ್ಟಲೆ ದೇಣಿಗೆ!

ಧರ್ಮಗುರುಗಳ ಸಂದೇಶ

ಧರ್ಮಗುರುಗಳ ಸಂದೇಶ

ಹಿಂದೂ ಧರ್ಮ ಗುರುಗಳಾದ ಪರಮೇಶ್ ಭಟ್, ಮುಸ್ಲೀಮ್ ಧರ್ಮ ಗುರುಗಳಾದ ಶ್ರೀ ಮುಕ್ತಿ ಆಸಿಮ್ ಮುಸ್ತಾಫ್ ಸಾಹೇಬ್, ಕ್ರಿಷ್ಚಿಯನ್ ಧರ್ಮ ಗುರುಗಳಾದ ಶ್ರೀ ರೋನಾಲ್ಡ್ ಕಾರ್ಡೋಜ, ಫಾದರ್, ಬೌಧ ಧರ್ಮಗುರುಗಳಾದ ಶ್ರೀ ಬಸವರಾಜು ದಮ್ಮಾಚಾರಿ, ಜೈನ ಧರ್ಮಗುರುಗಳಾದ ಶ್ರೀ ಜೀನರಾಜ್ ಇವರು ಸರ್ವಧರ್ಮ ಪ್ರಾರ್ಥನೆ ನಡೆಸಿಕೊಟ್ಟರು.

ಪುಸ್ತಕ ಬಿಡುಗಡೆ

ಪುಸ್ತಕ ಬಿಡುಗಡೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ಅವರ ಕುರಿತು ಹೊರತರಲಾದ ವಿಶೇಷ ಸಂಚಿಕೆಗಳು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಮ್ಮ ಬಾಪು ಪುಸ್ತಕ ಬಿಡುಗಡೆ ಮಾಡಲಾಯಿತು.

ಭಜನಾ ಕಾರ್ಯಕ್ರಮ: ಕೇಂದ್ರಿಯ ವಿದ್ಯಾಲಯ ಶಾಲಾ ಮಕ್ಕಳು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು.

ಸ್ವಚ್ಛತೆಯೇ ಮಹಾತ್ಮಾ ಗಾಂಧಿಗೆ ನೀಡುವ ನಿಜವಾದ ಗೌರವ: ಮೋದಿ

ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ಗಾಂಧೀಜಿಯವರ ಕುರಿತು ಏರ್ಪಡಿಸಲಾಗಿದ್ದ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ.ರೇವಣ್ಣ, ಶಾಸಕರಾದ ಪ್ರೀತಂ ಜೆ.ಗೌಡ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್, ಜಿಲ್ಲಾಧಿಕಾರಿಗಳು ಮತ್ತಿತರರು ಹಾಜರಿದ್ದರು.

ಕಿರುಚಿತ್ರ ಪ್ರದರ್ಶನ

ಕಿರುಚಿತ್ರ ಪ್ರದರ್ಶನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಎಲ್.ಇ.ಡಿ ಪರದೆ ಅಳವಡಿಸಿ ಬಾಪೂಜಿ ರವರ ಜೀವನ ಚರಿತ್ರೆ ಕುರಿತ ಕಿರುಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.

ಕಿರು ನಾಟಕ ಚಂದ್ರಕಾಂತ ಪಡೆಸೂರು ರವರ ನಿರ್ದೇಶನದಲ್ಲಿ ಮಹಾತ್ಮ ಗಾಂಧೀಜಿಯವರು ಬಾಲ್ಯ, ಆಫ್ರಿಕಾದಲ್ಲಿ ಅವರಿಗಾದ ಕಹಿ ಅನುಭವ, ಭಾರತಕ್ಕೆ ಆಗಮನ, ಅರೆಬೆತ್ತಲೆ ಫಕೀರನಾದ ಘಟನೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅವರ ಪ್ರವೇಶ, ಸ್ವದೇಶಿ ವಸ್ತು ಚಳುವಳಿ ಅಸಹಕಾರ, ಉಪವಾಸ ಮತ್ತು ಸತ್ಯಾಗ್ರಹಗಳಂತ ಅಹಿಂಸಾತ್ಮಕ ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಕೊಡಿಸಿದ ಬಗ್ಗೆ ಸ್ವಾತಂತ್ರ್ಯಾನಂತರದ ಅವರ ಅಂತ್ಯ ಹಾಗೂ ಲಾಲ್‍ಬಹುದ್ದೂರ್ ಶಾಸ್ತ್ರಿಯವರ ಆಗಮನ ಜೈಜವಾನ್ ಜೈ ಕಿಸಾನ್ ಯೋಜನೆ ವಾರದ ಒಂದು ದಿನದ ಉಪವಾಸ, ನಿರಾಶ್ರಿತರಿಗೆ ಮನೆ ನೀಡುವಿಕೆ ಸಂಬಳ ಹೆಚ್ಚು ಎಂದು ದೇಶಕ್ಕೆ ಮರಳಿ ನೀಡಿದ ಘಟನೆಗಳನ್ನು 15 ನಿಮಿಷಗಳ ಕಿರು ನಾಟಕದ ಮೂಲಕ ಪ್ರಸ್ತುತ ಪಡಿಸಲಾಯಿತು.

ಬಹುಮಾನ ವಿತರಣೆ

ಬಹುಮಾನ ವಿತರಣೆ

ಗಾಂಧಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಭಾರತೀಯ ಸೇವಾದಳದ ವತಿಯಿಂದ ಆಯೋಜಿಸಿದ್ದ ಚಿತ್ರ ರಚನಾ ಸ್ಪರ್ಧೆ ಮತ್ತು ವೇಷ ಭೂಷಣ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು.

ಬೀದಿ ನಾಟಕಕ್ಕೆ ಚಾಲನೆ

ಬೀದಿ ನಾಟಕಕ್ಕೆ ಚಾಲನೆ

ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಬಾಪೂ 150ನೇ ವರ್ಷಾಚರಣೆ ಅಂಗವಾಗಿ ಏರ್ಪಡಿಸಿರುವ ಬೀದಿ ನಾಟಕಗಳ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Minister HD Revanna said that the state government is committed to implement Mahatma Gandhi's thoughts in its every work.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more