ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ: ಮಾಜಿ ಸಚಿವ ಎಚ್. ಡಿ. ರೇವಣ್ಣ ಹೇಳುವುದೇನು?
ಹಾಸನ, ಡಿಸೆಂಬರ್ 04: ಹಾಸನದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಈ ಸಮಾವೇಶ ಕುತೂಹಲಕ್ಕೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯ ಅಭಿಮಾನಿ ಬಳಗದ 'ಸ್ವಾಭಿಮಾನಿ ಸಮಾವೇಶ' ಎಂದು ಇದನ್ನು ಕರೆಯಲಾಗಿತ್ತು. ಬಳಿಕ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಇದನ್ನು 'ಜನಕಲ್ಯಾಣ ಸಮಾವೇಶ' ಎಂದು ಬದಲಾಯಿಸಿದ್ದಾರೆ. ಇದು ಪಕ್ಷದ ಕಾರ್ಯಕ್ರಮ ಎಂದು ಘೋಷಣೆ ಮಾಡಿದ್ದಾರೆ.
ಗುರುವಾರ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕಾಂಗ್ರೆಸ್ ನಾಯಕರ ದಂಡು ಸೇರಲಿದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಮನಗರ ಜಿಲ್ಲೆಯನ್ನು ಜೆಡಿಎಸ್ ಮುಕ್ತ ಮಾಡಿದೆ ಕಾಂಗ್ರೆಸ್. ಈಗ ಏಕೆ ಹಾಸನದಲ್ಲಿ ಸಮಾವೇಶ ಮಾಡಲಾಗುತ್ತಿದೆ?. ಈ ಮೂಲಕ ಜೆಡಿಎಸ್‌ಗೆ ನೀಡಲಿರುವ ಸಂದೇಶ ಏನು? ಎಂಬುದು ಚರ್ಚೆಯ ವಿಚಾರ.

ಎಚ್. ಡಿ. ರೇವಣ್ಣ ಪ್ರತಿಕ್ರಿಯೆ: ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಗುರುವಾರ ಹಾಸನದಲ್ಲಿ ನಡೆಯಲಿರುವ 'ಜನಕಲ್ಯಾಣ ಸಮಾವೇಶ'ದ ಕುರಿತು ಮಾತನಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಅದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಮಾಡಲಿ ಜಿಲ್ಲೆಯ ಅಭಿವೃದ್ಧಿ ಮಾಡಲಿ" ಎಂದು ಹೇಳಿದರು.
"ಸಮಾವೇಶದ ಬಗ್ಗೆ ಗಾಬರಿ ಆಗುವ ಸನ್ನಿವೇಶ ಇಲ್ಲ. ಮುಗಿಸುವುದು ದೇವರಿಗೆ ಸಂಬಂಧಪಟ್ಟಿದ್ದು, ವಿಧಾನಸಭೆ ಚುನಾವಣೆ ನಡೆದ ಒಂದೇ ವರ್ಷಕ್ಕೆ ಲೋಕಸಭೆ ಚುನಾವಣೆ ನಡೆಯಿತು, ಏನಾಯಿತು?" ಎಂದು ಎಚ್. ಡಿ. ರೇವಣ್ಣ ಪ್ರಶ್ನೆ ಮಾಡಿದರು.
"ನಾವೆಲ್ಲ ಸೋಲು ಗೆಲುವು ನೋಡಿರುವವರು. ಸಮಾವೇಶಕ್ಕೆಲ್ಲ ದೃತಿಗೆಡುವುದಿಲ್ಲ" ಎಂದು ಹೊಳೆನರಸೀಪುರದ ಶಾಸಕರಾದ ಎಚ್. ಡಿ. ರೇವಣ್ಣ ಸ್ಪಷ್ಟಪಡಿಸಿದರು.
ಜೆಡಿಎಸ್ ಭದ್ರಕೋಟೆ ಛಿದ್ರ: ಹಾಸನ ಜಿಲ್ಲೆಯ ಜೆಡಿಎಸ್ ಭದ್ರಕೋಟೆ. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದಾರೆ. ಈ ಮೂಲಕ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ವಶಕ್ಕೆ ಪಡೆದುಕೊಂಡಿದೆ.
ಚುನಾವಣೆಯಲ್ಲಿ ಬಿಜೆಪಿ 19, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷವಾದ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲು ವಿಫಲವಾಗಿದೆ. ಆದರೆ ಹಾಸನದಲ್ಲಿ ಗೆಲುವು ಸಾಧಿಸುವ ಮೂಲಕ ಜೆಡಿಎಸ್‌ಗೆ ಬಿಸಿ ಮುಟ್ಟಿಸಿದೆ.
ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ 6,72,988 ಮತಗಳನ್ನು ಪಡೆದು 42,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎದುರಾಳಿಯಾಗಿದ್ದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 6,30,339 ಮತಗಳನ್ನು ಪಡೆದು ಸೋಲು ಕಂಡರು. ಈ ಮೂಲಕ 2019ರ ಚುನಾವಣೆಯಲ್ಲಿ ಗೆದ್ದಿದ್ದ ಕ್ಷೇತ್ರವನ್ನು 2024ರಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್ ಬಿಟ್ಟುಕೊಟ್ಟಿದೆ.
ಹಾಸನ ಸಮಾವೇಶವನ್ನು ಮೊದಲು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಬಿಂಬಿಸಲಾಗಿತ್ತು. ಸಿದ್ದರಾಮಯ್ಯ ಆಪ್ತರಾದ ಕೆಲವು ಸಚಿವರು ಈ ಸಮಾವೇಶದ ಸಿದ್ಧತೆಯನ್ನು ಪ್ರಾರಂಭಿಸಿದ್ದರು. ಆದರೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ದೆಹಲಿ ಭೇಟಿ ಬಳಿಕ ಸಮಾವೇಶದ ಚಿತ್ರಣ ಬದಲಾಯಿತು. ಈಗ ಪಕ್ಷದ ಕಾರ್ಯಕ್ರಮವಾಗಿ ಸಮಾವೇಶನ್ನು ನಡೆಸಲಾಗುತ್ತಿದ್ದು, ರಾಷ್ಟ್ರೀಯ ನಾಯಕರಿಗೆ ಸಹ ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ.
-
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications