ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

10 ಲಕ್ಷ ಹಣ ಟೇಬಲ್ ಮೇಲಿಟ್ಟು ಪತ್ರಿಕಾಗೋಷ್ಠಿ ನಡೆಸಿದ ರೇವಣ್ಣ!

|
Google Oneindia Kannada News

ಹಾಸನ, ಜೂನ್ 25; ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಅದರಲ್ಲೇನು ವಿಶೇಷ ಎನ್ನಬೇಡಿ, ಟೇಬಲ್ ಮೇಲೆ 10 ಲಕ್ಷ ರೂಪಾಯಿ ಹಣವನ್ನು ಇಟ್ಟುಕೊಂಡು ಮಾಧ್ಯಮಗಳ ಜೊತೆ ಮಾತನಾಡಿದರು.

ಹಾಸನದಲ್ಲಿ ಶುಕ್ರವಾರ ರೇವಣ್ಣ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಜೊತೆ ಪತ್ರಿಕಾಗೋಷ್ಠಿ ನಡೆಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಆರೋಪಗಳನ್ನು ಮಾಡಿದರು.

ತುಮಕೂರು-ಅರಸೀಕೆರೆ ಜೋಡಿ ಮಾರ್ಗ; ಮಹತ್ವದ ಮೈಲುಗಲ್ಲು ತುಮಕೂರು-ಅರಸೀಕೆರೆ ಜೋಡಿ ಮಾರ್ಗ; ಮಹತ್ವದ ಮೈಲುಗಲ್ಲು

ಅರಸೀಕೆರೆಯ ನಗರಸಭೆ ಸದಸ್ಯರಿಗೆ ಬಿಜೆಪಿ ಸೇರಲು ಸಂತೋಷ್ 10 ಲಕ್ಷ ಹಣದ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದ ರೇವಣ್ಣ, ಅದಕ್ಕಾಗಿಯೇ 10 ಲಕ್ಷ ಹಣವನ್ನು ಪತ್ರಿಕಾಗೋಷ್ಠಿಗೆ ತಂದಿದ್ದರು.

ಅರ್ಜಿ ಹಿಡಿದು ಸ್ನೇಹಿತನನ್ನು ಭೇಟಿ ಮಾಡಿದ ಎಚ್. ಡಿ. ರೇವಣ್ಣ! ಅರ್ಜಿ ಹಿಡಿದು ಸ್ನೇಹಿತನನ್ನು ಭೇಟಿ ಮಾಡಿದ ಎಚ್. ಡಿ. ರೇವಣ್ಣ!

HD Revanna Press Conference With 10 Lakhs Money

"ನಗರಸಭೆ ಸದಸ್ಯರಿಗೆ ಹಣದ ಆಮಿಷವೊಡ್ಡಿದ ಬಗ್ಗೆ ನಾವು ಪೊಲೀಸರಿಗೆ ದೂರು ಕೊಡುತ್ತೇವೆ. ಈ ಬಗ್ಗೆ ಸಿಬಿಐ ತನಿಖೆ ಆಗಬೇಕು. ಸುಪ್ರೀಂಕೋರ್ಟ್ ತನಕ ನಾವು ಹೋಗುತ್ತೇವೆ" ಎಂದು ಎಚ್. ಡಿ. ರೇವಣ್ಣ ಹೇಳಿದರು.

ಹಾಸನ ವಿಮಾನ ನಿಲ್ದಾಣ ಯೋಜನೆಗೆ ಅನುದಾನ ಕೊಟ್ಟ ಸರ್ಕಾರಹಾಸನ ವಿಮಾನ ನಿಲ್ದಾಣ ಯೋಜನೆಗೆ ಅನುದಾನ ಕೊಟ್ಟ ಸರ್ಕಾರ

"4-5 ತಿಂಗಳಿನಿಂದ ಜೆಡಿಎಸ್ ಸದಸ್ಯರಿಗೆ ಧಮ್ಕಿ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ನಿಮ್ಮನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಇಲ್ಲ, ಅಧಿಕಾರಕ್ಕಾಗಿ ಏನೂ ಬೇಕಾದರೂ ಮಾಡುತ್ತಾರೆ" ಎಂದು ದೂರಿದರು.

"ಬಿಜೆಪಿ ಸೇರಲು ಆಮಿಷವೊಡ್ಡಿದ ಬಗ್ಗೆ ತನಿಖೆಯಾಗಬೇಕು. ಅವರ ದೂರವಾಣಿ ಕರೆಗಳ ಮಾಹಿತಿ ಸಂಗ್ರಹ ಮಾಡಬೇಕು. ಇದಕ್ಕೆಲ್ಲಾ ಮುಖ್ಯಮಂತ್ರಿಗಳು ನೇರ ಹೊಣೆ" ಎಂದು ರೇವಣ್ಣ ಆರೋಪಿಸಿದರು.

ಅರಸೀಕರೆ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಬಹುದೊಡ್ಡ ಪಕ್ಷ ಹೊರಹೊಮ್ಮಿತ್ತು. ಆದರೆ ಮೀಸಲಾತಿ ಬದಲಾವಣೆ ಮಾಡಿಕೊಂಡು ಬಿಜೆಪಿ ಅಧಿಕಾರಕ್ಕೆ ಬಂದಿದೆ.

Recommended Video

ನಿಮಗೆ ಗೊತ್ತಿರದ ಹೊಯ್ಸಳ ಸಾಮ್ರಾಜ್ಯದ ಸತ್ಯ!! | Oneindia Kannada

ಜೆಡಿಎಸ್‌ನ 7 ಸದಸ್ಯರು ಪಕ್ಷ ತೊರೆದು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅವರಿಗೆಲ್ಲ ಹಣ ನೀಡಲಾಗಿದೆ ಎಂದು ಶಾಸಕ ಶಿವಲಿಂಗೇಗೌಡ ಮತ್ತು ರೇವಣ್ಣ ಆರೋಪಿಸಿದರು.

English summary
JD(S) leader H. D. Revanna and Arasikere JD(S) MLA Shivalinge Gowda press conference in Hassan with money of 10 lakhs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X