ಹಾಸನದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಆಪ್ತನ ಭೀಕರ ಹತ್ಯೆ
ಹಾಸನ, ಆಗಸ್ಟ್, 09: ಹಾಸನ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ದುಷ್ಕರ್ಮಿಗಳು ಗ್ರ್ಯಾನೈಟ್ ಉದ್ಯಮಿ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಆಪ್ತನನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕೃಷ್ಣೇಗೌಡ (53) ಕೊಲೆಯಾದ ಉದ್ಯಮಿ. ಹಾಸನದ ಹೊರವಲಯದಲ್ಲಿರುವ ತಮ್ಮ ಗ್ರ್ಯಾನೈಟ್ ಫ್ಯಾಕ್ಟರಿಯ ಎದುರಲ್ಲೇ ಉದ್ಯಮಿ ಕೃಷ್ಣೇಗೌಡ ಅವನ್ನು ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ಧಾರೆ. ನಂತರ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಎಸ್‌ಪಿ ಹರಿರಾಮ್ ಶಂಕರ್ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದೀಗ ಪೊಲೀಸರು ಕೊಲೆಗಾರರಿಗೆ ಬಲೆ ಬೀಸಿದ್ದಾರೆ.
ಆರೋಪಿ ವಿರುದ್ಧ ಎಫ್‌ಐಆರ್ ದಾಖಲು
ಇತ್ತೀಚೆಗಷ್ಟೇ ಉಜಿರೆಯಲ್ಲಿ ಧರ್ಮಸ್ಥಳ ಭಕ್ತರು ನಡೆಸಿದ ಪ್ರತಿಭಟನೆ ವೇಳೆ ಸೌಜನ್ಯ ಪೋಷಕರ ಮೇಲೆ ಹಲ್ಲೆಗೆ ಯತ್ನ ನಡೆಸಿದ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಸೌಜನ್ಯಳ ತಾಯಿ ಕುಸುಮಾವತಿ ಅವರನ್ನು ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಲ್ಲದೇ ಮಗನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೌಜನ್ಯಳ ತಾಯಿ ಕುಸುಮಾವತಿ ದೂರು ನೀಡಿದ್ದರು.
ಕುಸುಮಾವತಿ ದೂರಿನ ಹಿನ್ನೆಲೆಯಲ್ಲಿ ಐಪಿಸಿ 1860, 341, 354, 323, 34 ಸೆಕ್ಷನ್ ಗಳಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸೌಜನ್ಯಾ ಕೊಲೆ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅವಹೇಳನಕ್ಕೆ ಕ್ಷೇತ್ರದ ಭಕ್ತರಿಂದ ಬೃಹತ್ ಸಭೆ ನಡೆದಿದೆ. ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಪಟ್ಟ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಸದಸ್ಯರು, ಭಕ್ತರು ಸೇರಿ ಬೃಹತ್ ಹಕ್ಕೊತ್ತಾಯ ಸಭೆ ನಡೆಸಿದ್ದು, ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡುವುದನ್ನು ಖಂಡಿಸಿದ್ದರು.
ಈ ವೇಳೆ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರು ಸಮಾವೇಶಕ್ಕೆ ಆಗಮಿಸಿದ್ದರು. ಈ ವೇಳೆ ಸಮಾವೇಶದ ಆಯೋಜಕರು ಹಾಗೂ ಪೊಲೀಸರು ವೇದಿಕೆ ಹತ್ತದಂತೆ ತಡೆದಿದ್ದಾರೆ. ಈ ವೇಳೆ ಮಹಾವೀರ್ ಜೈನ್ ಎನ್ನುವಾತ ಸೌಜನ್ಯ ಸಹೋದರ ಜಯರಾಮ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.
ಇನ್ನು ನಿನ್ನೆ( ಆಗಸ್ಟ್ 04) ಸೌಜನ್ಯಾ ಹತ್ಯೆ ಪ್ರಕರಣದ ನೆಪದಲ್ಲಿ ಧರ್ಮಸ್ಥಳ ಕ್ಷೇತ್ರದ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಆರೋಪ ಮಾಡುವುದನ್ನು ವಿರೋಧಿಸಿ ಸಾವಿರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಬಳಿಯಿಂದ ಪ್ರತಿಭಟನಾ ಸಭೆಯ ಉದ್ಘಾಟನೆ ನಡೆದು ಬಳಿಕ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಬಳಿಗೆ ಭಕ್ತರು ಕಾಲ್ನಡಿಗೆ ಜಾಥಾ ನಡೆಸಿದರು. ಧರ್ಮಸ್ಥಳ ಕ್ಷೇತ್ರದ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಸಂಘದ ಸದಸ್ಯರು, ರಾಜ್ಯದ ವಿವಿಧೆಡೆಯಿಂದ ಬಂದ ಕ್ಷೇತ್ರದ ಭಕ್ತರು ವೀರೇಂದ್ರ ಹೆಗ್ಗಡೆ ಪರವಾಗಿ ಒಕ್ಕೊರಳ ಧ್ವನಿ ಎತ್ತಿದ್ದಾರೆ. ವಿನಾಕಾರಣ ಅಪಪ್ರಚಾರ, ಆರೋಪ ಮಾಡಿದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications