ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ಕೊರೊನಾ ಸೋಂಕಿನ ಭೀತಿ?

|
Google Oneindia Kannada News

ಹಾಸನ, ಜೂನ್ 30 : ಮಾಜಿ ಸಚಿವ, ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್. ಡಿ. ರೇವಣ್ಣಗೆ ಕೊರನಾ ವೈರಸ್ ಸೋಂಕಿನ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಇರುವ ಅವರಿಗೆ ಸ್ವ್ಯಾಬ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Recommended Video

SSLC and PUC Result dates finalized,ಫಲಿತಾಂಶ ದಿನಾಂಕ ಹೇಳಿದ ಶಿಕ್ಷಣ ಸಚಿವರು | Oneindia Kannada

ಎಚ್. ಡಿ. ರೇವಣ್ಣ ಅವರ ನಾಲ್ವರು ಭದ್ರತಾ ಸಿಬ್ಭಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ರೇವಣ್ಣ ಎಸ್ಕಾರ್ಟ್ ವಾಹನದಲ್ಲಿ ಕಾರ್ಯ ನಿರ್ವಹಣೆ ಮಾಡುವ ಸಿಬ್ಬಂದಿಗಳಲ್ಲಿ ಬೆಂಗಳೂರು ಮೂಲದ ಮೂವರು ಮತ್ತು ಹಾಸನದ ಒಬ್ಬರಿಗೆ ಸೋಂಕು ತಗುಲಿದೆ.

ಹಾಸನ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಹಾಸನ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಸ್ತುತ ಎಚ್. ಡಿ. ರೇವಣ್ಣ ಬೆಂಗಳೂರಿನ ನಿವಾಸದಲ್ಲಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅವರಿಗೆ ಸ್ವ್ಯಾಬ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಪೊಲೀಸರಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಆಗ ನಾಲ್ವರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು.

'ಮರ್ಯಾದೆ ಕೊಡಿ': ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಕ್ರೋಶ'ಮರ್ಯಾದೆ ಕೊಡಿ': ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಕ್ರೋಶ

HD Revannas Gunmen Tested Positive For Coronavirus

ಎಚ್. ಡಿ. ರೇವಣ್ಣ ಇಬ್ಬರು ಆಪ್ತ ಸಹಾಯಕರಿಗೆ ಈಗಾಗಲೇ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ಮಾಡಲಾಗಿದ್ದು, ವರದಿ ನೆಗೆಟೀವ್ ಬಂದಿದೆ. ರೇವಣ್ಣ ಗಂಟಲು ದ್ರವದ ಮಾದರಿ ನೀಡಿ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ.

ಬ್ರೇಕಿಂಗ್ ನ್ಯೂಸ್ ಕೊಟ್ಟ ಹಾಸನ ಸಂಸದ ಪ್ರಜ್ವಲ್ ರೇವಣ್ಣ! ಬ್ರೇಕಿಂಗ್ ನ್ಯೂಸ್ ಕೊಟ್ಟ ಹಾಸನ ಸಂಸದ ಪ್ರಜ್ವಲ್ ರೇವಣ್ಣ!

ಕೊರೊನಾ ವೈರಸ್ ಸೋಂಕು ಹಾಸನ ಜಿಲ್ಲೆಯಲ್ಲಿಯೂ ಆತಂಕ ಮೂಡಿಸಿದೆ. ಸೋಮವಾರ ಜಿಲ್ಲೆಯಲ್ಲಿ 22 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 381ಕ್ಕೆ ಏರಿಕೆಯಾಗಿದೆ. ಇವುಗಳಲ್ಲಿ ಸಕ್ರಿಯ ಪ್ರಕರಣಗಳು 140.

English summary
Health department officials advised former minister and JD(S) leader H. D. Revanna for a swab test. H. D. Revanna escort vehicle 4 police personals tested positive for the Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X