ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ; ಹಾಸನದಲ್ಲಿ ಮಳೆ ಅಬ್ಬರ, ರಸ್ತೆ ಸಂಚಾರ ಬಂದ್

By ಹಾಸನ ಪ್ರತಿನಿಧಿ
|
Google Oneindia Kannada News

ಹಾಸನ, ಅಕ್ಟೋಬರ್ 06; ಹಾಸನ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಆರಂಭವಾದ ಮಳೆ ಜನರಿಗೆ ಸಂಕಷ್ಟ ತಂದಿದೆ. ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಂಗಳವಾರ ತಡರಾತ್ರಿಯಿಂದ ಹಾಸನ, ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಕಲಗೂಡು ತಾಲ್ಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಮತ್ತೊಂದು ಕಡೆ ಮಳೆ ಹಲವು ಕಡೆ ಹಾನಿಯನ್ನು ಮಾಡಿದೆ.

 ಮಲೆನಾಡಾದ ಬೆಂಗಳೂರು; ರಾತ್ರಿಯಿಂದ ಸುರಿಯುತ್ತಿರುವ ಮಳೆ! ಮಲೆನಾಡಾದ ಬೆಂಗಳೂರು; ರಾತ್ರಿಯಿಂದ ಸುರಿಯುತ್ತಿರುವ ಮಳೆ!

ಅರಕಲಗೂಡು ತಾಲ್ಲೂಕಿನ ಶಿರದನಹಳ್ಳಿ ಬಳಿ ರಸ್ತೆ ಸಂಚಾರ ಬಂದ್ ಆಗಿದೆ. ಅರಕಲಗೂಡು-ಕೇರಳಾಪುರ ನಡುವೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ. ವಾಹನ ಸಂಚಾರ ಬಂದ್ ಆಗಿದ್ದು, ಸವಾರರು ಪರದಾಡುವಂತಾಗಿದೆ.

 1997ರ ನಂತರ ಅಕ್ಟೋಬರ್‌ ತಿಂಗಳಿನ ಗರಿಷ್ಠ ಮಳೆ ದಾಖಲಿಸಿದ ಬೆಂಗಳೂರು 1997ರ ನಂತರ ಅಕ್ಟೋಬರ್‌ ತಿಂಗಳಿನ ಗರಿಷ್ಠ ಮಳೆ ದಾಖಲಿಸಿದ ಬೆಂಗಳೂರು

 Heavy Rain Fallen Tree Disrupts Traffic In Hassan

ಮರ ತೆರವುಗೊಳಿಸಲು ಕಂದಾಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ಥಳಕ್ಕೆ ಆರ್‌ಐ ಸ್ವಾಮಿ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮರ ತೆರವುಗೊಳಿಸುವ ಕಾರ್ಯಾಚರಣೆ ಕೆಲವು ಗಂಟೆಗಳ ತನಕ ನಡೆಯಲಿದೆ.

 ಶಾಹೀನ್ ಚಂಡಮಾರುತ; ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ಶಾಹೀನ್ ಚಂಡಮಾರುತ; ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಇನ್ನು ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿಯಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಕೊಚ್ಚಿ ಹೋಗಿದೆ. ಕಾಳೇನಹಳ್ಳಿ ಗ್ರಾಮದಲ್ಲಿ ರಸ್ತೆಗೆ ಹಾನಿಯಾಗಿದ್ದು, ಇದರಿಂದ ಕೆರಳಾಪುರ ಹಾಗೂ ರಾಮನಾಥಪುರಕ್ಕೆ ಸಂಚರಿಸಲು ತೊಂದರೆ ಉಂಟಾಗಿದೆ.

ಮಳೆಯಿಂದಾಗಿ ಆಂಜನೇಯ ಹೊಸಹಳ್ಳಿ ಕೆರೆ ಕೋಡಿ ಬಿದ್ದಿದೆ. ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹಾಗೂ ಬಸವಾಪಟ್ಟಣ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದು, ಎರಡೂ ಗ್ರಾಮದಲ್ಲಿ ನೂರಾರು ಮನೆಗಳಿಗೆ ಮಳೆ ನೀರು ನುಗ್ಗಿದೆ.

ಬಸವಾಪಟ್ಟಣ ವ್ಯಾಪ್ತಿಯಲ್ಲಿ 80 ಮಿ. ಮೀ. ಮಳೆ ಸುರಿದಿದೆ. ಮನೆಯೊಳಗೆ ನೀರು ನುಗ್ಗಿ ಅಹಾರ ಧಾನ್ಯ, ಎಲೆಕ್ಟ್ರಾನಿಕ್ ಸಾಮಾಗ್ರಿಗಳಿಗೆ ಹಾನಿ ಉಂಟಾಗಿದೆ. ಮಳೆಯಿಂದ ಹಾನಿಗೊಳಗಾದ ‌ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಕಂದಾಯ ನಿರೀಕ್ಷಕ ಸ್ವಾಮಿ, ಗ್ರಾಮ ಲೆಕ್ಕಿಗರಾದ ಮದನ್, ಯಾದವ್, ಉಮೇಶ್, ಪೂಜಾರಿ ಮತ್ತು ತಂಡದಿಂದ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

Recommended Video

ಇಂಜುರಿಯಿಂದ ಬಳಲ್ಲುತಿರುವ CSK ಆಟಗಾರ | Oneindia Kannada

English summary
Fallen tree disrupts traffic at Arkalgud-Keralapura state high way at Hassan district. Due to heavy rain tree fallen on road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X