ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೇಮಾವತಿ ಬಲದಂಡೆ ನಾಲೆಗೆ ಶೀಘ್ರವೇ ನೀರು: ಸಚಿವ ಗೋಪಾಲಯ್ಯ

|
Google Oneindia Kannada News

ಹಾಸನ,ಆ.12: ಹೇಮಾವತಿ ಅಣೆಕಟ್ಟೆ ತುಂಬುತ್ತಿದ್ದು ರೈತರಿಗೆ ಅನುಕೂಲವಾಗುವಂತೆ ಬಲದಂಡೆ ನಾಲೆಗೆ ನೀರು ಬಿಡಲು ತೀರ್ಮಾನಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

ಜಿಲ್ಲೆಯ ಹೊಳೆನರಸೀಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ, ಬಲದಂಡೆ ನಾಲೆಗೆ ನೀರು ಹರಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ಬಂದಿದ್ದೇನೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಪುನರಾವರ್ತನೆ ಆಗುತ್ತಿರುವ ಹಿನ್ನೆಲೆಯಲ್ಲಿ ಎಸ್.ಪಿ ಸೇರಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ರಾಜಕಾರಣಿಗಳು ಯಾರೂ ಒತ್ತಡ ಹಾಕುವ ಪ್ರಶ್ನೆ ಇಲ್ಲ. ನಿರ್ಭಯವಾಗಿ ಕೆಲಸಮಾಡಿ. ಕಾನೂನು ಪ್ರಕಾರ ಏನು ಕೆಲಸ ಮಾಡಬೇಕೋ ಅದನ್ನು ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ. ಪಿಎಸ್‍ಐ ಕಿರಣ ಕುಮಾರ್ ಆತ್ಮಹತ್ಯೆ ಪ್ರಕರಣ ಎಸ್‍ಪಿ ನೇತೃತ್ವದಲ್ಲಿ ತನಿಖೆಯಾಗುತ್ತಿದ್ದು, ತನಿಖೆ ನಂತರ ಅದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಹಾಸನ ಜಿಲ್ಲೆಯ ಹೋಬಳಿವಾರು ಮಳೆ ವರದಿಹಾಸನ ಜಿಲ್ಲೆಯ ಹೋಬಳಿವಾರು ಮಳೆ ವರದಿ

ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಇದರಿಂದ ಹತಾಶೆಗೊಂಡ ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡುತ್ತಿವೆ, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

Hemavathi right bank canal to get Water Inflow soon: Minister Gopalaiah

ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹ ಸಚಿವರಿಗೆ ದಕ್ಷತೆಯಿದ್ದು ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಸಂಘಟನೆಗಳ ಸದಸ್ಯರ ಕೈವಾಡ ಇರುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆದರೆ ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

Hemavathi right bank canal to get Water Inflow soon: Minister Gopalaiah

ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಸಮುದಾಯದ ಮೇಲೆ ಗಲಾಟೆ ಆಗಿಲ್ಲ. ಕೆಲವು ದುಷ್ಟ ಶಕ್ತಿಗಳು ಸರ್ಕಾಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ಸಮರ್ಥವಾಗಿ ಗೃಹ ಸಚಿವರು ನಿಭಾಯಿಸುತ್ತಾರೆ. ಸರ್ಕಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಇಂತಹವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.(ಮಾಹಿತಿ ಕೃಪೆ: ವಾರ್ತಾ ಇಲಾಖೆ)

English summary
Hemavathi right bank canal to get Water Inflow soon said Hassan district in charge Minister Gopalaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X