ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಹೈಕೋರ್ಟ್
ಸಂಸದ ಸ್ಥಾನದಿಂದ ಅನರ್ಹತೆ ತಡೆಗೆ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಹೈಕೋರ್ಟ್ ವಜಾಗೊಳಿಸಿದ್ದು ಪ್ರಜ್ವಲ್ ರೇವಣ್ಣನಿಗೆ ನಿರಾಸೆಯಾಗಿದೆ. ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಕೆ.ನಟರಾಜನ್ ಅವರು ಪ್ರಜ್ವಲ್ ರೇವಣ್ಣ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ಕೆ.ನಟರಾಜನ್ ಅವರು ಆ ತೀರ್ಪು ಅನ್ನು ಪ್ರಕಟಿಸಿದ್ದಾರೆ. ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಅನರ್ಹತೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಅಕ್ರಮದ ಆಧಾರದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ ಒಂದರಂದು ಹೈಕೋರ್ಟ್ ತೀರ್ಪು ನೀಡಿದೆ.
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳ್ಳಲು ಕಾರಣವೇನು?
ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಘೋಷಿಸಿದೆ. ಪ್ರಜ್ವಲ್ ರೇವಣ್ಣ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಅವರ ಮೊಮ್ಮಗನಾಗಿದ್ದು, ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪಾರದರ್ಶಕ ರೀತಿಯಲ್ಲಿ ನಾಮಪತ್ರ ಸಲ್ಲಿಸಿಲ್ಲ, ಚುನಾವಣಾ ಅಕ್ರಮ ಎಸಗಿದ್ದಾರೆ, ಹೀಗಾಗಿ ಅವರ ಆಯ್ಕೆ ಅಸಿಂದು ಎಂದು ಹೇಳಿದೆ.
2019 ರ ಏಪ್ರಿಲ್ 18ರಂದು ಪ್ರಜ್ವಲ್ ಅವರ ಸಂಸದ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿಯಿಂದ ಸೋತ ಅಭ್ಯರ್ಥಿ ಎ ಮಂಜು ಮತ್ತು ಕ್ಷೇತ್ರದ ಮತದಾರರಾದ ಜಿ ದೇವರಾಜೇಗೌಡ ಅವರು ಸಲ್ಲಿಸಿದ ಎರಡು ಅರ್ಜಿಗಳ ಸರಣಿ ವಿಚಾರಣೆಯ ನಂತರ ನ್ಯಾಯಮೂರ್ತಿ ಕೆ ನಟರಾಜನ್ ಅವರು ಈ ಆದೇಶವನ್ನು ಪ್ರಕಟಿಸಿದ್ದರು.
ನಾಮಪತ್ರ ಸಲ್ಲಿಸುವಾಗ ಭಾರತೀಯ ಚುನಾವಣಾ ಆಯೋಗವು ಸೂಚಿಸಿದ ಮಾದರಿಯಲ್ಲಿ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಬಹಿರಂಗಪಡಿಸದಿರುವ ಆಧಾರದ ಮೇಲೆ ಪ್ರಜ್ವಲ್ ಅವರ ಆಯ್ಕೆಯನ್ನು ಅರ್ಜಿದಾರರು ಪ್ರಶ್ನಿಸಿದ್ದರು. ಇದು ಭ್ರಷ್ಠಚಾರದಲ್ಲಿ ತೊಡಗುವಿಕೆಗೆ ಸಮಾನವಾಗಿದೆ ಎಂದು ಆಕ್ಷೇಪ ಎತ್ತಿದ್ದರು.
ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು, ಪ್ರಜ್ವಲ್ ರೇವಣ್ಣ ಅವರು ತಮ್ಮ ಮಾಲೀಕತ್ವದ ಜಮೀನು, ಬ್ಯಾಂಕ್ ಖಾತೆಗಳು, ಪಾಲುದಾರಿಕೆ ಸಂಸ್ಥೆಯ ನಿರ್ದೇಶಕರು, ನಿಶ್ಚಿತ ಠೇವಣಿ, ಹೆಚ್ಚುವರಿ ಖರ್ಚು ಸೇರಿದಂತೆ ಹಲವು ವಿವರಗಳನ್ನು ಅಫಿಡವಿಟ್ ಸಲ್ಲಿಸುವಾಗ ನಿಜ ವಿವರ ನೀಡದೆ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ವಾದಿಸಿದ್ದರು. ಆದ್ದರಿಂದ ನ್ಯಾಯಾಲಯ ಅವರ ಚುನಾವಣೆ ಪ್ರಕ್ರಿಯೆ ಮತ್ತು ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿತ್ತು.












Click it and Unblock the Notifications