ಅರಸೀಕೆರೆ: ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿ, ಬೈಕ್ ಸವಾರ ಸಾವು
ಸಚಿವ ಆರಗ ಜ್ಞಾನೇಂದ್ರ ಅವರು ಮೈಸೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ವಾಹನ ದ್ವಿಚಕ್ರ ವಾಹನಕ್ಕೆ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ.
ಹಾಸನ, ಮಾರ್ಚ್ 03: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಬಳಿ ಬುಧವಾರ ರಾತ್ರಿ ನಡೆದಿದೆ. ಐಸ್ ಕ್ರೀಮ್ ಮಾರಾಟ ಮಾಡುತ್ತಿದ್ದ, ಚಿಕ್ಕಗಂಡಸಿ ಗ್ರಾಮದ 42 ವರ್ಷದ ರಮೇಶ್ ಮೃತ ವ್ಯಕ್ತಿ.
ಸಚಿವ ಆರಗ ಜ್ಞಾನೇಂದ್ರ ಅವರು ಮೈಸೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ವಾಹನ ದ್ವಿಚಕ್ರ ವಾಹನಕ್ಕೆ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಮೇಶ್ ಅವರನ್ನು ಗಂಡಸಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಸಚಿವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಸ್ಥಳದಿಂದ 300 ಮೀಟರ್ ದೂರದಲ್ಲಿತ್ತು. ಸಚಿವರಿಗೆ ತೀರ್ಥಹಳ್ಳಿಗೆ ತಲುಪುವವರೆಗೂ ಅವಘಡದ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ. ಮೃತ ರಮೇಶ್ ಅವರ ಪತ್ನಿ ನೀಡಿದ ದೂರಿನ ಮೇರೆಗೆ ಬೆಂಗಾವಲು ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಇದೇ ವೇಳೆ ಮೃತದೇಹವನ್ನು ಗ್ರಾಮಕ್ಕೆ ತಂದಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಪರಿಹಾರ ನೀಡುವಂತೆ ಒತ್ತಾಯಿಸಿದರು. ರಮೇಶ್ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನೆ ಬೆನ್ನಲ್ಲೇ ಅಪಘಾತವಾದರೂ ವಾಹನ ನಿಲ್ಲಿಸದೆ ಗೃಹಸಚಿವರು ತೆರಳಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಬೈಕ್ ಸವಾರ ಪ್ರಾಣ ಕಳೆದುಕೊಂಡರೂ ಗೃಹಸಚಿವರು ಮಾನವೀಯತೆ ಮರೆತು ತೆರಳಿದ್ದಾರೆ ಎಂದು ಆರೋಪಿಸಲಾಗಿದೆ.

ಕಾಂಗ್ರೆಸ್ ಕೂಡ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿತ್ತು. "ಹಾಸನದಲ್ಲಿ ಗೃಹಸಚಿವರ ಬೆಂಗಾವಲು ವಾಹನ ಗುದ್ದಿ ಮೃತಪಟ್ಟ ಬೈಕ್ ಸವಾರನನ್ನು ಆರಗ ಜ್ಞಾನೇಂದ್ರ ಅವರು ವಾಹನ ನಿಲ್ಲಿಸದೆ, ತಿರುಗಿಯೂ ನೋಡದಂತೆ ಕಾಲ್ಕಿತ್ತಿದ್ದಾರೆ. ಇಂತಹ ಅಮಾನವೀಯ ನಡವಳಿಕೆಯ ಗೃಹಸಚಿವರಿಂದ ಬೇರೇನು ನಿರೀಕ್ಷೆ ಮಾಡಬಹುದು? ಸರ್ಕಾರ ಕೂಡಲೇ ಮೃತನ ಕುಟುಂಬಕ್ಕೆ ಪರಿಹಾರ ನೀಡಿ ಪ್ರಕರಣದ ಪ್ರಾಮಾಣಿಕ ತನಿಖೆ ನಡೆಸಬೇಕು" ಎಂದು ಆಗ್ರಹಿಸಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಆರಗ ಜ್ಞಾನಂದ್ರ, "ವಾಸ್ತವ ತಿಳಿಯಲು ಯಾವುದೇ ಪ್ರಯತ್ನ ಮಾಡದೆ, ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, "ಆತುರಗಾರನಿಗೆ ಬುದ್ದಿ ಮಟ್ಟ" ಎಂಬ ಗಾದೆ ಮಾತನ್ನು ನೆನಪಿಸುತ್ತದೆ. ಘಟನೆಯ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಹಾಗೂ ನಮ್ಮ ಕಚೇರಿಯಿಂದ ನೀಡಿದ ಸ್ಪಷ್ಟೀಕರಣವನ್ನಾದರೂ ಪರಾಮರ್ಶೆ ಮಾಡುವ ವ್ಯವಧಾನವೂ ಅವರಿಗಿಲ್ಲ. ಘಟನೆ ನಡೆದಾಗ, ನನ್ನ ವಾಹನ 300 ಮೀಟರ್ ಮುಂದಿದ್ದು, ತಕ್ಷಣ ಮಾಹಿತಿ ದೊರಕಿರಲಿಲ್ಲ. ಘಟನೆಯ ಕುರಿತು ಮಾಹಿತಿಯನ್ನು ನಾನು ತೀರ್ಥಹಳ್ಳಿ ತಲುಪಿದ ನಂತರ ನನಗೆ ನೀಡಲಾಗಿದೆ" ಎಂದಿದ್ದಾರೆ.
ಘಟನೆ ನಡೆದಾಗ, ನನ್ನ ವಾಹನ 300 ಮೀಟರ್ ಮುಂದಿದ್ದು, ತಕ್ಷಣ ಮಾಹಿತಿ ದೊರಕಿರಲಿಲ್ಲ. ಘಟನೆಯ ಕುರಿತು ಮಾಹಿತಿಯನ್ನು ನಾನು ತೀರ್ಥಹಳ್ಳಿ ತಲುಪಿದ ನಂತರ ನನಗೆ ನೀಡಲಾಗಿದೆ. ಈ ಮಧ್ಯೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಇದ್ದುದರಿಂದ ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಗಂಡಸಿ ಆಸ್ಪತ್ರೆಗೆ ಒಯ್ದಿದ್ದಾರೆ. (2/3)
— Araga Jnanendra (@JnanendraAraga) March 2, 2023
ಮುಂದುವರಿದು, "ಈ ಮಧ್ಯೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಇದ್ದುದರಿಂದ ಅಪಘಾತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಗಂಡಸಿ ಆಸ್ಪತ್ರೆಗೆ ಒಯ್ದಿದ್ದಾರೆ.
ಮೃತರ ಪತ್ನಿಯ ದೂರಿನ ಅನ್ವಯ ಚಾಲಕನ ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದವರು ಪ್ರಚಾರಕ್ಕಾಗಿ ಸುಳ್ಳು ಆರೋಪ ಮಾಡಿ ಜನರ ದಾರಿ ತಪ್ಪಿಸುವ ನೀಚ ಪ್ರವೃತ್ತಿ ಮುಂದುವರೆಸದೆ, ಘಟನೆಯ ವಾಸ್ತವಗಳನ್ನು ಅರಿತು ಪ್ರತಿಕ್ರಿಯೆ ನೀಡಿದರೆ ಒಳಿತು. ರಾಜ್ಯದ ಜನತೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.
ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ರಾಜ್ಯ ಸರಕಾರದಿಂದ 4 ಲಕ್ಷ ಪರಿಹಾರದ ಜತೆಗೆ ರಮೇಶ್ ಕುಟುಂಬಕ್ಕೆ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಪರಿಹಾರ ನಿಡುವುದಾಗಿ ತಿಳಿಸಿದ್ದಾರೆ. ಇನ್ನು, ಗೃಹ ಸಚಿವರು ಶೀಘ್ರವೇ ಮೃತರ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಇನ್ನು, ಮಾನವೀಯತೆ ಮರೆತ ಸಚಿವರು ಎಂಬ ಆರೋಪದ ನಡುವೆಯೇ ಆರಗ ಜ್ಞಾನೇಂದ್ರ ಅವರು ಅಪಘಾತಕ್ಕೀಡಾದ ಯುವಕನಿಗೆ ಸಹಾಯ ಮಾಡಿರುವ ಘಟನೆ ವರದಿಯಾಗಿದೆ. "ಗುಡ್ಡೇಕೊಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ, ಬೇಗುವಳ್ಳಿ ಸಮೀಪ ಹಸು ಅಡ್ಡ ಬಂದು ಸಿಂಗನಬಿದರೆ ಹಳಗದ ಯುವಕನೊಬ್ಬ ಅಪಘಾತಕ್ಕೀಡಾಗಿರುವುದು ಕಂಡು ಬಂತು. ಕೂಡಲೇ ಯುವಕನನ್ನು ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಗುಡ್ಡೇಕೊಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ, ಬೇಗುವಳ್ಳಿ ಸಮೀಪ ಹಸು ಅಡ್ಡ ಬಂದು ಸಿಂಗನಬಿದರೆ ಹಳಗದ ಯುವಕನೊಬ್ಬ ಅಪಘಾತಕ್ಕೀಡಾಗಿರುವುದು ಕಂಡು ಬಂತು. ಕೂಡಲೇ ಯುವಕನನ್ನು ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. pic.twitter.com/gJaMaEPdHK
— Araga Jnanendra (@JnanendraAraga) March 3, 2023
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications