ಗ್ಯಾಸ್ ಪೈಪ್‍ಲೈನ್; ಭೂಮಿ ಕಳೆದುಕೊಂಡವರಿಗೆ ಸಿಹಿ ಸುದ್ದಿ

ಹಾಸನ, ಅಕ್ಟೋಬರ್ 29 : ಹಾಸನ ಜಿಲ್ಲೆಯಲ್ಲಿ ಹೆ. ಪಿ. ಸಿ. ಎಲ್. ಗ್ಯಾಸ್ ಪೈಪ್‍ಲೈನ್ ಯೋಜನೆಗೆ ಭೂಮಿ ನೀಡಿದ ರೈತರಿಗೆ ಒಂದು ತಿಂಗಳಿನಲ್ಲಿ ಪರಿಹಾರ ತಲುಪಲಿದೆ. ಜಮೀನು ಹಾಗೂ ಬೆಳೆಹಾನಿಗೆ ಸರ್ಕಾರದ ನಿರ್ದೇಶನದಂತೆ ಬೆಲೆ ನಿಗದಿಪಡಿಸಿ ಒಂದು ತಿಂಗಳಲ್ಲಿ ಪರಿಹಾರ ನೀಡಲು ಸೂಚನೆ ನೀಡಲಾಗಿದೆ.

ಜಿಲ್ಲಾಧಿಕಾರಿ ಆರ್. ಗಿರೀಶ್ ಅವರ ನೇತೃತ್ವದಲ್ಲಿ ಹೆ. ಪಿ. ಸಿ. ಎಲ್. ಗ್ಯಾಸ್ ಪೈಪ್‍ಲೈನ್‍ಗೆ ಒಳಪಡುವ ರೈತರ ಜಮೀನಿನ ಬೆಲೆ ನಿಗದಿ ಕುರಿತು ಸಭೆ ನಡೆಯಿತು. ಹಾಸನ ಹಾಗೂ ಅರಸೀಕೆರೆ ತಾಲೂಕಿನಲ್ಲಿ ಈ ಯೋಜನೆಗೆ ಒಳಪಡುವ ಜಮೀನು ಹಾಗೂ ಬೆಳೆಗೆ ನಿಯಮಾನುಸಾರ ಪರಿಹಾರ ನೀಡುವಂತೆ ಭೂಸ್ವಾಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಹೆಚ್‌. ಪಿ. ಸಿ. ಎಲ್ ಕೇಂದ್ರ ಸರ್ಕಾರದ ಗ್ಯಾಸ್ ಪೈಪ್‌ಲೈನ್ ಯೋಜನೆಯಾಗಿದೆ. ಹಾಸನ ತಾಲೂಕಿನಲ್ಲಿ 25 ಕಿ. ಮೀ. ಹಾಗೂ ಅರಸೀಕೆರೆ ತಾಲೂಕಿನಲ್ಲಿ 25 ಕಿ. ಮೀ. ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 50 ಕಿ. ಮೀ. ಪೈಲ್ ಲೈನ್ ಹಾದು ಹೋಗಿದೆ.

HPCL Gas Pipeline Project Farmers To Get Compensation In November

ಯೋಜನೆಯಿಂದ ಆಗಿರುವ ಬೆಳೆಹಾನಿ, ತೋಟಗಾರಿಕೆಗೆ ಬೆಳೆ ಹಾನಿ ಮುಂತಾದವುಗಳನ್ನು ಗುರುತಿಸಿ ಪ್ರತಿಯೊಬ್ಬ ರೈತರಿಗೂ ಸರ್ಕಾರದ ಮಾರ್ಗಸೂಚಿ ಹಾಗೂ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಹಾರ ನೀಡಲಾಗುತ್ತದೆ.

ನವೆಂಬರ್ ಮೊದಲ ವಾರದಲ್ಲಿ ಪಂಚನಾಮೆಯನ್ನು ಪೂರ್ಣಗೊಳಿಸಿ ರೈತರಿಗೆ ಪರಿಹಾರ ವಿತರಣೆ ಮಾಡಲಾಗುತ್ತದೆ. ಬಳಿಕ ಕಾಮಗಾರಿ ಆರಂಭ ಮಾಡಲಾಗುತ್ತದೆ. ರೈತರಿಗೆ ಪರಿಹಾರ ನಿಗದಿ ಮಾಡಲು ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಜಿ. ಎನ್. ಮಂಜುನಾಥ್ ನೇಮಕಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮಗಳು ಹಾಗೂ ಇತರ ಗ್ರಾಮಗಳ ರೈತರ ಜಮೀನಿಗೆ ಸರ್ಕಾರದ ನಡಾವಳಿಯನ್ನು ಅನುಸರಿಸಿ ಬೆಲೆ ನಿಗದಿ ಪಡಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+