ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಿ. ಟಿ. ದೇವೇಗೌಡ ಬಿಜೆಪಿಗೆ; ದೇವೇಗೌಡರು ಹೇಳಿದ್ದೇನು?

|
Google Oneindia Kannada News

ಹಾಸನ, ಮಾರ್ಚ್ 02 : "ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ ಪಕ್ಷ ಬಿಟ್ಟು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ" ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದ್ದಾರೆ. ಜಿ. ಟಿ. ದೇವೇಗೌಡ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಹಾಸನದಲ್ಲಿ ಮಾತನಾಡಿದ ದೇವೇಗೌಡರು, "ಯಾರೋ ಒಬ್ಬರು ಹೋಗುತ್ತಾರೆ ಎಂದ ಮಾತ್ರಕ್ಕೆ ಪಕ್ಷ ಮುಳುಗುವುದಿಲ್ಲ. ಈ ಹಿಂದೆಯೂ ಜಿ. ಟಿ. ದೇವೇಗೌಡ ಬಿಜೆಪಿಗೆ ಹೋಗಿ ಅಲ್ಲಿ ಅಧಿಕಾರ ಅನುಭವಿಸಿದ್ದರು" ಎಂದು ಹೇಳಿದರು.

ಜಿಟಿ ದೇವೇಗೌಡ ಮಗನಿಗೆ ಬಿಜೆಪಿಯಿಂದ ಟಿಕೆಟ್? ಜಿಟಿ ದೇವೇಗೌಡ ಮಗನಿಗೆ ಬಿಜೆಪಿಯಿಂದ ಟಿಕೆಟ್?

"ಜಿ. ಟಿ. ದೇವೇಗೌಡರು ಬಿಜೆಪಿಯಲ್ಲಿ ಅಧಿಕಾರ ಅನುಭವಿಸಿ ಆ ಪಕ್ಷ ಬಿಟ್ಟು ಜೆಡಿಎಸ್‌ಗೆ ವಾಪಸ್ ಆದರು. ಮತ್ತೆ ಹೋಗಬಹುದು. ಅದಕ್ಕೆ ಹೆದರುವುದಿಲ್ಲ. ನನಗೆ 87 ವರ್ಷವಾಗಿದ್ದರೂ ಉತ್ಸಾಹ ಕಡಿಮೆ ಆಗಿಲ್ಲ. ಎದುರಾಳಿಗಳು ಅಪಹಾಸ್ಯ ಮಾಡಿದರೂ ತಲೆ ಕೆಡಿಸಿಕೊಳ್ಳಲ್ಲ" ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

ಪರಿಷತ್ ಚುನಾವಣೆ; ಜೆಡಿಎಸ್‌ ಶಾಸಕನಿಂದ ಬಿಜೆಪಿ ಅಭ್ಯರ್ಥಿಗೆ ಮತ! ಪರಿಷತ್ ಚುನಾವಣೆ; ಜೆಡಿಎಸ್‌ ಶಾಸಕನಿಂದ ಬಿಜೆಪಿ ಅಭ್ಯರ್ಥಿಗೆ ಮತ!

2018ರ ವಿಧಾನಸಭೆ ಚುನಾವಣೆಯಲ್ಲಿ ಜಿ. ಟಿ. ದೇವೇಗೌಡ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮ್ಯಯರನ್ನು ಸೋಲಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರೂ ಆಗಿದ್ದರು. ಆದರೆ, ಬಳಿಕ ಜೆಡಿಎಸ್ ಚಟುವಟಿಕೆಗಳಿಂದ ದೂರವಾಗಿದ್ದಾರೆ.

ಜೆಡಿಎಸ್ ನ ಪ್ರಭಾವಿ ನಾಯಕ ಜಿಟಿ ದೇವೇಗೌಡ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆಜೆಡಿಎಸ್ ನ ಪ್ರಭಾವಿ ನಾಯಕ ಜಿಟಿ ದೇವೇಗೌಡ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ

ಜೆಡಿಎಸ್ ರಾಜ್ಯಾಧ್ಯಕ್ಷರ ಅಸಮಾಧಾನ

ಜೆಡಿಎಸ್ ರಾಜ್ಯಾಧ್ಯಕ್ಷರ ಅಸಮಾಧಾನ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ ಸಹ ಜಿ. ಟಿ. ದೇವೇಗೌಡರ ಪರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. "ಜೆಡಿಎಸ್ ಪರ ಜಿ. ಟಿ. ದೇವೇಗೌಡರು ದ್ವಂದ ನಿಲುವು ತಳೆದಿದ್ದಾರೆ. ಇಲ್ಲೂ ಇದ್ದು, ಅಲ್ಲೂ ಇರುವ ಕೆಲಸ ಮಾಡುತ್ತಿದ್ದಾರೆ. ಇದು ಅಶಿಸ್ತಿನ ಪರಮಾವಧಿ" ಎಂದು ಹೇಳಿದ್ದರು.

ಯಡಿಯೂರಪ್ಪ ಭೇಟಿ ಮಾಡಿದ್ದರು

ಯಡಿಯೂರಪ್ಪ ಭೇಟಿ ಮಾಡಿದ್ದರು

ಕೆಲವು ದಿನಗಳ ಹಿಂದೆ ಜಿ. ಟಿ. ದೇವೇಗೌಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದ್ದರು. ಬಳಿಕ ಮಾತನಾಡಿದ್ದ ಅವರು, "ಕ್ಷೇತ್ರದ ಗ್ರಾಮೀಣ ರಸ್ತೆಗಳ ಕಾಮಗಾರಿಗೆ ತಡೆ ಆಗಿದೆ. ಟೆಂಡರ್ ಆಗಿದ್ದರೂ ಕಾಮಗಾರಿ ನಡೆಯುತ್ತಿಲ್ಲ. ಆದ್ದರಿಂದ, ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದೆ" ಎಂದು ಸ್ಪಷ್ಟನೆ ನೀಡಿದ್ದರು.

ಬಿಜೆಪಿಗೆ ಹೋಗುವುದಿಲ್ಲ

ಬಿಜೆಪಿಗೆ ಹೋಗುವುದಿಲ್ಲ

ಮಾಧ್ಯಮಗಳ ಜೊತೆ ಮಾತನಾಡಿದ್ದ ಜಿ. ಟಿ. ದೇವೇಗೌಡರು, "ನಾನು ಬಿಜೆಪಿಗೆ ಹೋಗುವುದಿಲ್ಲ. ಆದರೆ, ರಾಜಕೀಯದಲ್ಲಿ ಏನಾದರೂ ಆಗಬಹುದು" ಎಂದು ಹೇಳಿಕೆ ನೀಡಿದ್ದರು. ಬಿಜೆಪಿಗೆ ಹೋಗುವ ಕುರಿತು ಅವರು ಸ್ಪಷ್ಟವಾದ ಹೇಳಿಕೆ ನೀಡಿಲ್ಲ.

ಜೆಡಿಎಸ್ ಪಕ್ಷದಿಂದ ಉಚ್ಛಾಟನೆ?

ಜೆಡಿಎಸ್ ಪಕ್ಷದಿಂದ ಉಚ್ಛಾಟನೆ?

ಶಾಸಕ ಜಿ. ಟಿ. ದೇವೇಗೌಡ ನಡೆಗೆ ಪಕ್ಷದ ವರಿಷ್ಠರು ಅಸಮಾಧಾನಗೊಂಡಿದ್ದಾರೆ. ಪಕ್ಷದ ಚಟುವಟಿಕೆಗಳಿಂದ ದೂರವಾಗಿರುವ ಜಿ. ಟಿ. ದೇವೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಎಚ್. ಡಿ. ಕುಮಾರಸ್ವಾಮಿ ಹಲವು ಬಾರಿ ಜಿ. ಟಿ. ದೇವೇಗೌಡರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

English summary
JD(S) supremo H.D.Deve Gowda said that he will not brother if Chamundeshwari MLA G. T. Deve Gowda wish to join BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X