ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ; ಯಡಿಯೂರಪ್ಪ

|
Google Oneindia Kannada News

ಹಾಸನ, ಜೂನ್ 11: ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಈಚೆಗೆ ಭಾರಿ ಸದ್ದು ಮಾಡಿದ್ದ ನಾಯಕತ್ವ ಬದಲಾವಣೆ ಕುರಿತ ಮಾತುಗಳಿಗೆ ಉತ್ತರ ನೀಡಿದ್ದಾರೆ.

Recommended Video

Yeddiyurappa : ನನ್ನ ಕೆಳಗೆ ಇಳಿಸೋದು ಅಷ್ಟು ಸುಲಭ ಅಲ್ಲಾ | Oneindia Kannada

ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿದ ಅವರು, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಕೊಡುವೆ" ಎಂದು ಹೇಳಿದ್ದಾರೆ.

I Will Remain As CM For Next 2 Years Says Yediyurappa

"ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ, ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಇಂಥ ಮಾತುಗಳಿಂದ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ" ಎಂದಿದ್ದಾರೆ.

ಕರ್ನಾಟಕ ಬಿಜೆಪಿಯಲ್ಲಿ ಪರ್ಯಾಯ ನಾಯಕನದ್ದೇ ಚಿಂತೆ!ಕರ್ನಾಟಕ ಬಿಜೆಪಿಯಲ್ಲಿ ಪರ್ಯಾಯ ನಾಯಕನದ್ದೇ ಚಿಂತೆ!

"ನನ್ನ ಮೇಲೆ ಪ್ರಧಾನಿ, ಅಮಿತ್ ಶಾ ಅವರು ಇಟ್ಟುಕೊಂಡಿರುವ ಪ್ರೀತಿ ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ" ಎಂದು ನಾಯಕತ್ವ ಬದಲಾವಣೆ ಕುರಿತು ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಗೊಂದಲ ಮತ್ತೆ ಉದ್ಭವಿಸದು ಎಂದಿದ್ದಾರೆ.

English summary
I will remain as chief minister for next two years said CM Yediyurappa in hasan
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X