ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನದ ಪ್ರತಿ ಕ್ಷೇತ್ರಕ್ಕೂ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸುತ್ತೇನೆ: ಎಚ್‌.ಡಿ. ದೇವೇಗೌಡ

By ಹಾಸನ ಪ್ರತಿನಿಧಿ
|
Google Oneindia Kannada News

ಹಾಸನ, ನವೆಂಬರ್ 14: ಜಿಲ್ಲೆಯಲ್ಲಿ ಮುಂಬರುವ ವಾರದಲ್ಲಿ ಪ್ರವಾಸ ಕೈಗೊಳ್ಳಲಿದ್ದೇನೆ, ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡಿ ಪಕ್ಷ ಸಂಘಟಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.

ಕಾರ್ತಿಕ ಸೋಮವಾರ ಹುಟ್ಟೂರಾದ ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಲು ಹಾಸನಕ್ಕೆ ಆಗಮಿಸಿದ್ದರು. ದೇವೇಗೌಡರ ಜೊತೆಗೆ ಪತ್ನಿ ಚನ್ನಮ್ಮ, ಮಗ ಎಚ್‌ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ, ಸೊಸೆ ಭವಾನಿ ರೇವಣ್ಣ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಹಾಸನ ಪ್ರವಾಸ ಆರಂಭಿಸುವ ಬಗ್ಗೆ ಮಾಹಿತಿ ನೀಡಿದರು.

Breaking; ಕೆಂಪೇಗೌಡ ಪ್ರತಿಮೆ ಅನಾವರಣ, ದೇವೇಗೌಡರ ಮೊದಲ ಪ್ರತಿಕ್ರಿಯೆBreaking; ಕೆಂಪೇಗೌಡ ಪ್ರತಿಮೆ ಅನಾವರಣ, ದೇವೇಗೌಡರ ಮೊದಲ ಪ್ರತಿಕ್ರಿಯೆ

ಹಾಸನ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಕೈಗೊಂಡು, ಹಾಸನದಲ್ಲಿ ಜೆಡಿಎಸ್‌ ಭದ್ರಕೋಟೆಯನ್ನು ಮತ್ತಷ್ಟು ಬಲಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ ದೇವೇಗೌಡರು, ಹಾಸನ ಪ್ರವಾಸ ಮುಗಿದ ಮೇಲೆ ರಾಜ್ಯ ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ ಯಾವುದೇ ಕ್ಷೇತ್ರವನ್ನು ಮರೆಯಲ್ಲ, ಪ್ರವಾಸ ಮುಗಿಸಿ ಪಾರ್ಲಿಮೆಂಟ್‌ಗೂ ಹೋಗುತ್ತೇನೆ ಎಂದು ಹೇಳುವ ಮೂಲಕ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವ, ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ದವಿದ್ದೇನೆ ಎಂದು ಸಂದೇಶವನ್ನು ಎದುರಾಳಿಗೆ ಪಕ್ಷಗಳಿಗೆ ರವಾನಿಸಿದರು.

I will soon Travel all constituency in hassan district HD Devegowda

ಇನ್ನು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸುವ ವಿಚಾರದಲ್ಲಿ ನಡೆಯುತ್ತಿರುವ ಚರ್ಚೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತಾನಾಡಿದ ಅವರು, ನಾನು ಈ ವಿಚಾರದಲ್ಲಿ ಏನೂ ಮಾತನಾಡಲ್ಲ, ಯಾರಾರು ಏನೇನು ಮಾಡಿದರು ಎಂದು ವಿಶ್ಲೇಷಣೆ ಮಾಡಲ್ಲ, ಪತ್ರಕರ್ತ ಸುಗತ ಶ್ರೀನಿವಾಸ ಒಂದು ಟ್ವೀಟ್ ಮಾಡಿದ್ದಾರೆ, ಅದು ದೇಶದಾದ್ಯಂತ ಚರ್ಚೆ ಆಗಿದೆ, ಅದಕ್ಕಿಂತ ಹೆಚ್ಚಿಗೆ ನಾನು ಏನೂ ಹೇಳೋದಿಲ್ಲ ಎಂದು ತಿಳಿಸಿದರು.

ಬಿಜೆಪಿ ನಡೆಗೆ ಜೆಡಿಎಸ್ ಆಕ್ರೋಶ

ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ್ದ ಏಕೈಕ ಕನ್ನಡಿಗರಾದ ಎಚ್‌ಡಿ ದೇವೇಗೌಡರನ್ನು ಆಹ್ವಾನ ನೀಡಿಲ್ಲ ಎಂದು ಜೆಡಿಎಸ್‌ ಟ್ವಿಟರ್‌ನಲ್ಲಿ ತರಾಟೆಗೆ ತೆಗೆದುಕೊಂಡಿತ್ತು. ಆದರೆ ಇದಕ್ಕೆ ಉತ್ತರವಾಗಿ ಬಿಜೆಪಿ ಆಹ್ವಾನ ಪತ್ರಿಕೆ ನೀಡಿದ್ದನ್ನು ಟ್ವೀಟ್ ಮಾಡಿ ತಿರುಗೇಟು ನೀಡಿತ್ತು. ಆದರೆ ಕುಮಾರಸ್ವಾಮಿ ಕೂಡ ದೇವೇಗೌಡರಿಗೆ ಗೌರವಯುತವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ, ಕಾಟಾಚಾರ ಕಾರ್ಯಕ್ರಮದ ಹಿಂದಿನ ದಿನ ಕರೆದಿದ್ದಾರೆ. ನಾಗರೀಕತೆಯಲ್ಲದವರು ಎಂದು ಆಕ್ರೋಶ ಹೊರ ಹಾಕಿದ್ದರು.

English summary
Former Prime Minister and JD(S) national president H.D. Deve Gowda has said he will travel across the Hassan ditrict soon to strengthen the party
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X