ಹಾಸನ: ಕಿಡಿಗೇಡಿಗಳಿಂದ ಮಾಲೆಕಲ್ಲು ತಿರುಪತಿ ದೇವಾಲಯ ವಿಗ್ರಹ ವಿರೂಪ
ಹಾಸನ, ಮೇ 31 : ರಾಜ್ಯದಲ್ಲಿ ಧರ್ಮ ದಂಗಲ್ ವಿವಾದ ನಡೆಯುತ್ತಿರುವ ಬೆನ್ನಲ್ಲೇ ಹಾಸನದಲ್ಲಿ ಕೂಡ ದೇವಾಲಯದ ವಸ್ತುಸಂಗ್ರಹಾಲಯದಲ್ಲಿ ಇದ್ದ ದೇವರ ವಿಗ್ರಹಗಳನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ಲು ತಿರುಪತಿ ಬೆಟ್ಟದ ಮೇಲಿನ ದೇವಾಲಯದ ವಸ್ತುಸಂಗ್ರಹಾಲಯದಲ್ಲಿದ್ದ ಹಿಂದೂ ದೇವತೆಗಳ 10ಕ್ಕೂ ಹೆಚ್ಚು ವಿಗ್ರಹಗಳನ್ನು ಮೇ 30ರ ಮಧ್ಯಾಹ್ನ 4 ಮಂದಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಈಗ ಮತ್ತೆ ಧರ್ಮ ದಂಗಲ್ ಯುದ್ಧ ತಾರಕಕ್ಕೆ ಏರುವ ಸಾಧ್ಯತೆ ಇದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ಪುರಾತನ ಕಾಲದ ಸಾಕಷ್ಟು ದೇವಸ್ಥಾನಗಳಿವೆ. ಹೊಯ್ಸಳ ಕಾಲದ ಶಿವಾಲಯ, ಯಾದಾಪುರ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಬೆಟ್ಟ, ಮಲ್ಲೇಶ್ವರ ಬೆಟ್ಟ, ಗರುಡನಗಿರಿ ಹಾರನಹಳ್ಳಿಯ ಕೋಡಿಮಠ, ಅರಕೆರೆಯ ಚನ್ನಕೇಶವ ಮತ್ತು ರಾಮೇಶ್ವರ ದೇವಾಲಯ, ಲಕ್ಷ್ಮಿಪುರದ ಮಹಾಗಣಪತಿ ದೇವಾಲಯ, ಮಾಡಾಳು ಗೌರಮ್ಮ ಸೇರಿದಂತೆ ಮಾಲೆಕಲ್ಲು ತಿರುಪತಿ ದೇವಾಲಯ ಕೂಡ ಒಂದು.
ಇದರ ಜೊತೆಗೆ ಅರಸೀಕೆರೆ ಪಟ್ಟಣದಿಂದ 11 ಕಿಲೋಮೀಟರ್ ದೂರದಲ್ಲಿರುವ ನಾಗಪುರಿ ಕೋಟೆಯಲ್ಲಿನ ಹೈದರಾಲಿ ಕಟ್ಟಿದ ಕೋಟೆಯ ಅವಶೇಷವಿದೆ. ಹೀಗಾಗಿ ಅರಸೀಕೆರೆ ರಾಜ್ಯದಲ್ಲಿ ತನ್ನದೇ ಆದ ವಿಶೇಷ ಸ್ಥಾನ ಹೊಂದಿದೆ.

ವಸ್ತುಸಂಗ್ರಹಾಲಯದ ಮೂರ್ತಿಗಳು ಧ್ವಂಸ
ಮೇ 30ರ ಮಧ್ಯಾಹ್ನ 4 ಮಂದಿ ದುಷ್ಕರ್ಮಿಗಳು ತಿರುಪತಿ ದೇವಾಲಯಕ್ಕೆ ಆಗಮಿಸಿ ಕಲ್ಯಾಣಿಯಲ್ಲಿ ಈಜಿ ಬಿಸಿಲಿನ ತಾಪವನ್ನು ತಣಿಸಿಕೊಂಡಿದ್ದಾರೆ. ಅದಲ್ಲದೆ ದೇವಾಲಯದ ಆವರಣದಲ್ಲಿಯೇ ಧೂಮಪಾನ ಮಾಡಿ ಅಪವಿತ್ರ ಮಾಡಿದ್ದಲ್ಲದೆ, ಇದನ್ನ ಪ್ರಶ್ನೆ ಮಾಡಿದ ದೇವಾಲಯದ ಅವರಣದಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಕೂಲಿ ಕಾರ್ಮಿಕರನ್ನು ಹೆದರಿಸಿ ಅಲ್ಲಿಂದ ಓಡಿಸಿದ್ದಾರೆ. ಬಳಿಕ ದೇವಾಲಯದ ವಸ್ತುಸಂಗ್ರಹಾಲಯಕ್ಕೆ ಹೋದ ಈ ನಾಲ್ಕು ಮಂದಿ ದುಷ್ಕರ್ಮಿಗಳು, ವಸ್ತುಸಂಗ್ರಹಾಲಯದಲ್ಲಿ ನಿರ್ಮಾಣವಾಗಿದ್ದ ಕೆಲವು ಹಿಂದೂ ದೇವಾನುದೇವತೆಗಳ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಮೂರ್ತಿಗಳನ್ನ ಧ್ವಂಸ ಮಾಡುವ ವೇಳೆ ಅಲ್ಲಿಯೇ ಇದ್ದ ಕೆಲವರು ಇದನ್ನು ನೋಡುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ
ಈ ಮಾಲೆಕಲ್ಲು ತಿರುಪತಿ ಬೆಟ್ಟ ಅರಸೀಕೆರೆಯಿಂದ 2 ಕಿಲೋಮೀಟರ್ ದೂರದಲ್ಲಿದೆ . ಇದನ್ನ ಚಿಕ್ಕತಿರುಪತಿ ಎಂತಲೂ ಕರೆಯಲಾಗುತ್ತದೆ. ಸುಮಾರು 300 ವರ್ಷಗಳ ಇತಿಹಾಸ ಇರುವ ಈ ದೇವಾಲಯದಲ್ಲಿ ಬೆಟ್ಟದ ಕೆಳಗಡೆಯೂ ಸವಿಸ್ತಾರವಾದ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಇದೆ. ಪ್ರತಿವರ್ಷ ಇಲ್ಲಿ ಜಾತ್ರಾ ಮಹೋತ್ಸವ ಜರುಗುವ ಮೂಲಕ ಲಕ್ಷಾಂತರ ಭಕ್ತರು ಆಗಮಿಸಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ದೇವಾಲಯದ ಆವರಣದಲ್ಲಿಯೇ ಇತಿಹಾಸದಲ್ಲಿಯೇ ಬತ್ತದಿರುವ ಕಲ್ಯಾಣಿಯಿದೆ.

ಬಿಗಿ ಪೊಲೀಸ್ ಬಂದೋಬಸ್ತ್
ಪ್ರಕರಣದ ಕುರಿತು ಹಾಸನದ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸಗೌಡ, ಡಿವೈಎಸ್‌ಪಿ ಅಶೋಕ್, ವೃತ್ತ ನಿರೀಕ್ಷಕ ವಸಂತ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಪರಿಶೀಲನೆ ಮಾಡಿದ್ದು, ದುಷ್ಕರ್ಮಿಗಳು ಸ್ಥಳದಲ್ಲಿ ಬಿಟ್ಟು ಹೋಗಿದ್ದ ಕೆಲವು ಕುರುಹುಗಳನ್ನು ಕಲೆಹಾಕಿದ್ದಾರೆ. ಇನ್ನು ಈ ವಿಚಾರ ತಿಳಿಯುತ್ತಿದ್ದಂತೆ ಅರಸೀಕೆರೆ ನಗರದ ಹಿಂದೂ ಸಂಘಟನೆಗಳು, ಸ್ಥಳೀಯರು ಸೇರಿದಂತೆ ದೇವಸ್ಥಾನದ ಆವರಣದಲ್ಲಿ ನಡೆದಿದ್ದ ಕೃತ್ಯ ನೋಡಲು ಆಗಮಿಸಿದ್ದರು. ಜನಸಂದಣಿ ಹೆಚ್ಚಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.

ತಹಶಿಲ್ದಾರ್ ಭೇಟಿ
ಹಲವು ಹಿಂದೂ ದೇವತೆಗಳ ಮೂರ್ತಿಗಳವಿಗ್ರಹ ವಿರೂಪಗೊಳಿಸಿದ ಹಿನ್ನೆಲೆ, ಸಾಕಷ್ಟು ಜನ ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಧರ್ಮದ ವಿವಾದ ಹೆಚ್ಚಾಗುತ್ತಿವೆ, ಹಾಗಾಗಿ ಸ್ಥಳಕ್ಕೆ ಅರಸೀಕೆರೆ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚರಿಕೆ ಕ್ರಮವಹಿಸಿಲು ಪೊಲೀಸರಿಗೆ ಸೂಚಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications