Prajwal Ravanna: ವಿದೇಶದಲ್ಲಿ ಪ್ರಜ್ವಲ್ ರೇವಣ್ಣಗೆ ಸಹಾಯ ಮಾಡಿದ್ಯಾರು ಗೊತ್ತಾ?-ಪ್ರೇಯಸಿ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ
Prajwal Ravanna: ವಿದೇಶದವರೆಗೂ ಸದ್ದು ಮಾಡಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲಿದೆ. ಇನ್ನು ಪ್ರಜ್ವಲ್ ರೇವಣ್ಣ ಎಸ್‌ಐಟಿ ಬಲೆಯಲ್ಲಿದ್ದು, ಇದೀಗ ಎಸ್‌ಐಟಿ ಮಾಜಿ ಸಂಸದರ ಪ್ರೇಯಸಿಗೂ ನೋಟಿಸ್ ನೀಡಿದೆ ಅಂತಾ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಅವರು ಯಾರು ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವನ್ನು ರಚನೆ ಮಾಡಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದರು. ಇನ್ನು ವಿದೇಶದಲ್ಲಿ ತಲೆ ಮರೆಸಿಕೊಳ್ಳುವುದಕ್ಕೆ ಸಹಾಯ ಮಾಡಿದ ಆರೋಪದಡಿಯಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಪ್ರೇಯಸಿಗೂ ಎಸ್‍ಐಟಿ ನೋಟಿಸ್ ನೀಡಿದೆ ಎನ್ನುವ ಅಂತಾ ಕನ್ನಡ ನ್ಯೂಸ್ ವೆಬ್‌ಸೈಟ್ ವರದಿ ಮಾಡಿದೆ.

ಪ್ರಕರಣ ಬಯಲಾದ ಬಳಿಕ ಪ್ರಜಲ್ವ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದು, ಹಲವು ಬಾರಿ ಎಸ್‌ಐಟಿ ನೋಟಿಸ್ ನೀಡಿದ್ದರೂ ಕೂಡ ಅವರು ವಿಚಾರಣೆಗೆ ಬಂದಿರಲಿಲ್ಲ. ಇದು ತನಿಖಾಧೀಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು.
ಇದ ನಡುವೆ ಪ್ರಜ್ವಲ್‍ಗೆ ವಿದೇಶದಲ್ಲಿ ಇರುವಾಗ ಪ್ರೇಯಸ್ಸಿ ಸಹಾಯ ಮಾಡಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳು ಕೆಲೆ ಹಾಕಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆ ಆಕೆಗೂ ನೋಟಿಸ್ ನೀಡಿ ವಿವರವನ್ನು ಕೋರಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಮೂಲಗಳ ಪ್ರಕಾರ, ಆಕೆ ಹಣದ ಸಹಾಯವನ್ನು ಮಾಡಿರುವ ಶಂಕೆ ಕೂಡ ಇದೆ ಎನ್ನುವ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.
ಬರೀ ಬ್ರೌನ್ ಕಲರ್ ಲೆಗಳು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೇ ವಿದೇಶದಲ್ಲಿಯೂ ಸದ್ದು ಮಾಡಿದ್ದು, ಈ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಇದೀಗ ಒಂದೊಂದೇ ಹಂತದಲ್ಲಿ ಎಸ್‌ಐಟಿ ತನಿಖೆಯನ್ನು ನಡೆಸುತ್ತಿದ್ದು, ಬೆಡ್‌ರೂಂಗೆ ಸಂಬಂಧಪಟ್ಟಂತೆ ಕೆಲವು ವಿಚಾರಗಳನ್ನು ಬಯಲಿಗೆಳೆಯುವ ಕೆಲಸವನ್ನು ಮಾಡುತ್ತಿದೆ. ಹಾಗಾದರೆ ಈ ಬಗ್ಗೆ ಪ್ರಕರಣದಲ್ಲಿ ಆರೋಪಿಯಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
ಮೇ 29ರಂದು ಬಸವನಗುಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮನೆಯನ್ನು ಕೋರ್ಟ್‌ನಲ್ಲಿ ಸರ್ಚ್ ವಾರೆಂಟ್ ಪಡೆದು ಎಸ್‌ಐಟಿ ಶೋಧಕ್ಕೊಳಪಡಿಸಿತ್ತು. ಪ್ರಜ್ವಲ್ ಆಗಮನಕ್ಕೂ ಒಂದು ದಿನದ ಮೊದಲೇ ನಡೆಸಲಾದ ಈ ತಪಾಸಣೆಯ ವೇಳೆ ಅನುಮಾನದ ಹಿನ್ನೆಲೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಲವು ವಸ್ತುಗಳನ್ನು ಕೊಂಡೊಯ್ಯಲಾಗಿದ್ದು, ಈ ವೇಳೆ ಪತ್ತೆಯಾದ ವಸ್ತುಗಳ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ. ಹಾಗಾದರೆ ಬೆಡ್‌ರೂಂನಲ್ಲಿ ಇನ್ನು ಏನೆಲ್ಲಾ ಎಸ್‌ಐಟಿ ಕಣ್ಣಿಗೆ ಬಿದ್ದಿದೆ ಎಂದು ಇಲ್ಲಿ ತಿಳಿಯಿರಿ.
ಎಚ್.ಡಿ.ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧಕಾರ್ಯ ನಡೆಸಿದ್ದು, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಈ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್ ಕಂಡುಬಂದಿದ್ದು, ಈ ಕಲೆಗಳನ್ನು ಪ್ರಜ್ವಲ್ ಮುಂದೆ ಹಿಡಿದು ಪ್ರಶ್ನಿಸಲಾಗಿದೆ. ಈ ವೇಳೆ ಅವರು, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಒನ್ ಸೈಟ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದು, ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಕಲರ್‌ವುಳ್ಳ ವಾಲ್ ಪೇಪರ್ ತುಣುಕು ಸಿಕ್ಕಿದೆ. ಸದ್ಯ ಇದೀಗ ಎಸ್‌ಐಟಿ ಅಧಿಕಾರಿಗಳು ಇವುಗಳನ್ನು ವಶಪಡಿಸಿಕೊಂಡಿದ್ದು, ಇವುಗಳನ್ನು ತಜ್ಞರ ಪರೀಕ್ಷೆಗೆ ಕಳುಹಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಲ್ಲದೆ ಅಶ್ಲೀಲ ವಿಡಿಯೋವನ್ನು ಮಾಡಿಕೊಂಡಿರುವ ಎನ್ನಲಾದ ಮೊಬೈಲ್ ಸಹ ಪ್ರಜ್ವಲ್ ಬಳಿ ಸಿಕ್ಕಿಲ್ಲ. ಈ ಬಗ್ಗೆ ಪ್ರಶ್ನಿ ಕೇಳಿದಾಗ, ಅದು ಒಂದು ವರ್ಷದ ಹಿಂದೆಯೇ ಕಳೆದುಹೋಗಿದೆ. ಈ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ ಎಂದು ಪ್ರಜ್ವಲ್ ರೇವಣ್ಣ ಅವರು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂಬಂಧ ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿರುವ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಪಾಲ್ಗೊಂಡಿರಬಹುದಾದ ಕೃತ್ಯದ ಸಂಬಂಧ ತಾಂತ್ರಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಸಂಗ್ರಹ ಮಾಡುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರನ್ನು ಪುರುಷತ್ವ ಪರೀಕ್ಷೆಗೂ ಕೂಡ ಕೋರ್ಟ್ ಒಪ್ಪಿಗೆ ನೀಡಿದ್ದು, ಆದ್ದರಿಂದ ಎಸ್ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸಿದ್ದರು.












Click it and Unblock the Notifications