Exit Poll Result 2024: ಹಾಸನದಲ್ಲಿ ಅಚ್ಚರಿ ಫಲಿತಾಂಶ!
ಹಾಸನ, ಜೂನ್ 02; ಲೋಕಸಭೆ ಚುನಾವಣೆ 2024ರ ಜೂನ್ 1ರ ಶನಿವಾರ ಮುಕ್ತಾಯವಾಗಿದೆ. ಜೂನ್ 4ರ ಮಂಗಳವಾರ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. ಎನ್‌ಡಿಎ ಮೈತ್ರಿಕೂಟ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ.
India Today-Axis My India ನಡೆಸಿದ ಲೋಕಸಭೆ ಚುನಾವಣೆ 2024ರ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಕರ್ನಾಟಕದ 28 ಸೀಟುಗಳ ಪೈಕಿ ಸಮೀಕ್ಷೆ ಪ್ರಕಾರ ಬಿಜೆಪಿ 20-22, ಜೆಡಿಎಸ್ 3, ಕಾಂಗ್ರೆಸ್ 3-5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ.

ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಮಣಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿವೆ. ಜೆಡಿಎಸ್ ಮಂಡ್ಯ, ಕೋಲಾರ ಮತ್ತು ಹಾಸನ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಹಾಸನದಲ್ಲಿ ಪ್ರಜ್ವಲ್ ಗೆಲುವು?; India Today-Axis My India ಚುನಾವಣೋತ್ತರ ಸಮೀಕ್ಷೆ ಪ್ರಕಾರ ಹಾಸನದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಲಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್.
ಹಾಸನದ ಹಾಲಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅವರು ಮೇ 31ರಂದು ರಾಜ್ಯಕ್ಕೆ ವಾಪಸ್ ಆಗಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಿದ್ದು, ಜೂನ್ 6ರ ತನಕ ಅವರು ಎಸ್‌ಐಟಿ ವಶದಲ್ಲಿ ಇರಲಿದ್ದಾರೆ.
ಹಾಸನ ಕ್ಷೇತ್ರದ 2024ರ ಲೋಕಸಭೆ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಮತದಾನಕ್ಕೆ ಎರಡು ದಿನ ಬಾಕಿ ಇರುವಾಗ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಏಪ್ರಿಲ್ 26ರಂದು ಮತದಾನ ಮಾಡಿದ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು.
ಹಾಸನದ ಚುನಾವಣೆ ಎಂದರೆ ಅದು ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಹೋರಾಟ. ಎಂ. ಶ್ರೇಯಸ್ ಪಟೇಲ್ ಈ ಬಾರಿ ಪ್ರಜ್ವಲ್ ರೇವಣ್ಣಗೆ ಭಾರೀ ಪೈಪೋಟಿ ನೀಡಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಯಾರಿಗೆ ಗೆಲುವು? ಎಂಬುದು ತಿಳಿಯಲಿದೆ.
ಜೆಡಿಎಸ್ ಪಕ್ಷ ಹಾಸನದಲ್ಲಿ ಪ್ರಭಾವ ಹೊಂದಿದೆ. ಜೊತೆಗೆ ಬಿಜೆಪಿಯ ಮೈತ್ರಿ ಕಾರಣಕ್ಕೆ ಬಲ ಹೆಚ್ಚಾಗಿದೆ. 2019ರ ಚುನಾವಣೆಯನ್ನು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಎದುರಿಸಿದ್ದವು. ಮೊದಲ ಚುನಾವಣೆ ಎದುರಿಸಿದ್ದ ಪ್ರಜ್ವಲ್ ರೇವಣ್ಣ 1,41,224 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಕರ್ನಾಟಕದಲ್ಲಿ ಜೆಡಿಎಸ್ ಕಳೆದ ಚುನಾವಣೆಯಲ್ಲಿ ಗೆದ್ದಿದ್ದ ಸ್ಥಾನ ಕೇವಲ ಒಂದು. ಅದು ಹಾಸನವಾಗಿತ್ತು. 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎ. ಮಂಜು 409,379 ಮತಗಳನ್ನು ಪಡೆದು, ಜೆಡಿಎಸ್‌ನ ಎಚ್. ಡಿ. ದೇವೇಗೌಡ ವಿರುದ್ದ (509,841 ಮತ) ಸೋತಿದ್ದರು.
2009ರಲ್ಲಿ ಕಾಂಗ್ರೆಸ್‌ನ ಬಿ. ಶಿವರಾಮು 201,147 ಮತಗಳನ್ನು ಪಡೆದು ದೇವೇಗೌಡರ ವಿರುದ್ಧ ಸೋಲು ಕಂಡಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಬಿಜೆಪಿ ನಾಯಕರ ವಿರೋಧವಿತ್ತು ಎಂಬ ಮಾತು ಕೇಳಿ ಬಂದಿತ್ತು. ಆದರೆ ಬಿಜೆಪಿ ನಾಯಕರು ಬಳಿಕ ಪ್ರಜ್ವಲ್ ರೇವಣ್ಣ ಪರವಾಗಿ ಸಕ್ರಿಯವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications