ಪ್ರಜ್ವಲ್ ರಾಜಕೀಯ ಭವಿಷ್ಯದ ಬಗ್ಗೆ ಸುಳಿವು ಕೊಟ್ಟ ದೇವೇಗೌಡ

Posted By: ಹಾಸನ ಪ್ರತಿನಿಧಿ
Subscribe to Oneindia Kannada

ಹಾಸನ, ನವೆಂಬರ್ 30: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಎಚ್. ಡಿ. ದೇವೇಗೌಡರು ಏಕೆ ನಿರಾಕರಿಸುತ್ತಿದ್ದಾರೆ ಎನ್ನುವ ಹಲವರ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಪಕ್ಷದ ಹೊಸ ಜವಾಬ್ದಾರಿ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದು ಹೀಗೆ

ಹಾಸನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು ಮುಂದಿನ ಲೋಕಸಭೆ ಚುನಾವಣೆಗೆ ಹಾಸನದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಸುವ ಬಗ್ಗೆ ಸುಳಿವು ನೀಡಿದರು.

JDS chief Deve Gowda hinted out on political future of Prajwal Revanna

"ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಆಸಕ್ತಿಯಿಲ್ಲ. ನನಗೂ 86 ವರ್ಷ ವಯಸ್ಸಾಗಿದೆ. ಆದ್ದರಿಂದ ಪ್ರಜ್ವಲ್ ಕಣಕ್ಕಿಳಿಸುವ ಬಗ್ಗೆ ಯೋಚನೆ ಇದೆ," ಎಂದು ಅವರು ಹೇಳಿದರು.

ಹಲವು ವದಂತಿಗಳಿಗೆ ತೆರೆ ಎಳೆದ ದೇವೇಗೌಡರು!

ಈ ಮೂಲಕ ಪ್ರಜ್ವಲ್ ರೇವಣ್ಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಕ್ಕೆ ದೇವೇಗೌಡರು ಏಕೆ ಮನಸ್ಸು ಮಾಡುತ್ತಿಲ್ಲ ಎನ್ನುವುದಕ್ಕೆ ಉತ್ತರ ಸಿಕ್ಕಂತಾಗಿದೆ.

ಇದೇ ವೇಳೆ ಅವರು ತಮ್ಮ ಕುಟುಂಬದವರಿಗೆ ಟಿಕೆಟ್ ಕೊಡಬೇಕೆನ್ನುವ ಕಾರಣದಿಂದ ರೇವಣ್ಣ ಕಣಕ್ಕಿಳಿಸುತ್ತಿಲ್ಲ, ಯಾರಾದರೂ ಸೂಕ್ತ ಅಭ್ಯರ್ಥಿ ಇದ್ದರೆ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Speaking to reporters on Thursday in Hassan, Deve Gowda hinted that Prajwal Revanna would be fielding in Hassan for the next Lok Sabha election.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ