Prashant Murder Case: ಹಾಸನದಲ್ಲಿ ಜೆಡಿಎಸ್‌ ಮುಖಂಡ, ನಗರಸಭೆ ಸದಸ್ಯನ ಹತ್ಯೆ

ಹಾಸನ, ಜೂನ್ 1: ಹಾಸನ ನಗರದಲ್ಲಿ ಮತ್ತೆ ಲಾಂಗು, ಮಚ್ಚುಗಳು ಜಳಪಿಸಿವೆ. ಜೆಡಿಎಸ್‌ ಮುಖಂಡ, ನಗರಸಭೆ ಸದಸ್ಯ ಪ್ರಶಾಂತ್‌ ಎಂಬುವವರನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಲಕ್ಷ್ಮೀಪುರ ಬಡಾವಣೆಯಲ್ಲಿ ನಡೆದಿದೆ.

ಪ್ರಶಾಂತ್‌ ಬುಧವಾರ ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುವಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಪ್ರಶಾಂತ್‌ ಹಾಸನ ನಗರದ 16ನೇ ವಾರ್ಡ್‌ನಿಂದ ಜೆಡಿಎಸ್‌ ಪಕ್ಷದಿಂದ ನಗರಸಭೆಗೆ ಆಯ್ಕೆಯಾಗಿದ್ದರು.

ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪ್ರಶಾಂತ್‌ ಬೆಂಬಲಿಗರು ಮತ್ತು ಜೆಡಿಎಸ್‌ ಕಾರ್ಯಕರ್ತರು ದೌಡಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

JDS leader and Municipal Council member murder in Hassan

ಪ್ರಶಾಂತ್‌ ಕೊಲೆಗೆ ಕಾರಣವೇನು? ಎಂಬುದು ಇನ್ನೂ ನಿಗೂಢವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+