Suraj Revanna: ಸೂರಜ್ ರೇವಣ್ಣ ವಿರುದ್ಧ ದೂರು ಕೊಟ್ಟ ಸಂತ್ರಸ್ತನ ವಿರುದ್ಧವೇ ದೂರು ಕೊಟ್ಟ ಸೂರಜ್ ಆಪ್ತ
ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‌ಡ್ರೈವ್ ಪ್ರಕರಣವೇ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ, ಇಡೀ ಕುಟುಂಬವೇ ಈಗ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತಲೆಕೆಡಿಸಿಕೊಂಡಿದೆ. ಈ ಬೆನ್ನಲ್ಲೇ ಪ್ರಜ್ವಲ್ ಸಹೋದರ, ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಕೂಡ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.
ಜೆಡಿಎಸ್ ಕಾರ್ಯಕರ್ತನೊಬ್ಬ ದೂರು ನಿಡಿದ್ದು, ಸೂರಜ್ ರೇವಣ್ಣ ನನ್ನ ಮೇಲೆ ಸಲಿಂಗ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲಾಗಿದೆ.

ಡಾ. ಸೂರಜ್ ವಿರುದ್ದ ಬೆಂಗಳೂರಿನಲ್ಲಿ ದೂರು ನೀಡಿದ ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲಿಸಲಾಗಿದ್ದು, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಸೂರಜ್ ಆಪ್ತ ಶಿವಕುಮಾರ್ ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಐದು ಕೋಟಿ ರೂಪಾಯಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪ ಮಾಡಿ ದೂರು ಕೊಡಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರೊ ಬಗ್ಗೆ ಉಲ್ಲೇಖಿಸಿ ದೂರು ಕೊಡಲಾಗಿದ್ದು, ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಿಸಲಾಗಿದೆ.
ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ, ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.
ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ಥ ಹೋಗಿದ್ದ, ಕೆಲಸ ಕೇಳಿ ವಾಪಸ್ಸು ಬಂದ ಬಳಿಕ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ, ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು, ನೀನು ನಿಮ್ಮ ಬಾಸ್ ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ದ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ದಾಗಿ ಶಿವಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.
ಆತ ಬೆದರಿಕೆ ಹಾಕಿದ ವಿಚಾರವನ್ನು ನಮ್ಮ ಬಾಸ್ ಗೆ ತಿಳಿಸಿದೆ, ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು, ನಾನೇನು ತಪ್ಪು ಮಾಡಿಲ್ಲ ಯಾಕೆ ಹಣ ಕೊಡಬೇಕು ಎಂದು ಸೂರಜ್ ರೇವಣ್ಣ ಹೇಳಿದ್ರು ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.
ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕೊ ಲೀಗಲ್ ಕೇಸ್ ಸೀಲ್ ಇರೊ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಮೊದಲು ಐದು ಕೋಟಿಗೆ ಬೇಡಿಕೆ ಇಟ್ಟಿದ್ದ ಯುವಕ, ಮೂರು ಕೋಟಿ ,ಅಥವಾ ಕಡೆಗೆ ಎರಡುವರೆ ಕೋಟಿಯಾದ್ರು ಕೊಡಿಸಿ ಎಂದಿದ್ದರು ಎಂದು ಹೇಳಲಾಗಿದೆ.
ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ದೂರಲಾಗಿದೆ. ನಿಮ್ಮ ಬಾಸ್ ಹಣ ಕೊಡದೇ ಇದ್ದರೆ, ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗ್ತೇನೆ, ಸೂರಜ್ ರೇವಣ್ಣ ಗೌರವ ಹಾಳು ಮಾಡೊದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications