ಜು.17ರಂದು ಹಾಸನದಲ್ಲಿ ಉದ್ಯೋಗ ಮೇಳ

ಹಾಸನ, ಜುಲೈ 11 : ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜುಲೈ 17ರಂದು ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ. 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕೌಶಲ್ಯ ದಿನದ ಪ್ರಯುಕ್ತ ಜುಲೈ 17ರ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಹಾಸನ, ಮೈಸೂರು ಮತ್ತು ಬೆಂಗಳೂರಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.

ನೇರ ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತಿರ್ಣ, ಪಿ.ಯು.ಸಿ, ಪದವಿ, ಐ.ಟಿ.ಐ, ಡಿಪ್ಲೊಮೋ, ಎಂ.ಬಿ.ಎ. ಇಂಜಿನಿಯರಿಂಗ್, ನರ್ಸಿಂಗ್, ಡ್ರೈವರ್ ನಲ್ಲಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

Job fair in Hassan District Employment Exchange office on July 17

ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್, ಸ್ವವಿವರದ ಪ್ರತಿಗಳೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಿ ಮೇಳದ ಉಪಯೋಗ ಪಡೆದುಕೊಳ್ಳಬಹುದಾಗಿದೆ.

ಉದ್ಯೋಗ ಮೇಳದ ಬಗ್ಗೆ ಹೆಚ್ಚಿ ಮಾಹಿತಿ ಅಗತ್ಯವಿದ್ದಲ್ಲಿ ಉದ್ಯೋಗಾಧಿಕಾರಿಯಾದ ಬಿ.ವಿಜಯಲಕ್ಷ್ಮಿ ಅವರನ್ನು ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಖುದ್ದಾಗಿ ಭೇಟಿ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+