ಹಾಸನದಲ್ಲಿ ಸೆ.22ರ ಶುಕ್ರವಾರ ಉದ್ಯೋಗ ಮೇಳ
ಹಾಸನ, ಸೆಪ್ಟೆಂಬರ್ 21 : ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆ.22ರಂದು ಉದ್ಯೋಗ ಮೇಳ ನಡೆಯಲಿದೆ. ಹಾಸನ ಮತ್ತು ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.
ಸೆ.22ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ಮಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆರಂಭವಾಗಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ನರ್ಸಿಂಗ್‌ನಲ್ಲಿ ತೇರ್ಗಡೆಯಾದ 18 ರಿಂದ 35 ವರ್ಷದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್ ಕಾರ್ಡ್, ಸ್ವವಿವರದ ಬಯೋಡೇಟ ಪ್ರತಿಗಳೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬೇಕು ಎಂದು ಮನವಿ ಮಾಡಲಾಗಿದೆ.
ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ : ಹಿಂದೂಸ್ತಾನ್ ಏರೋನ್ಯಾಟಿಕ್ ಲಿಮಿಟೆಡ್ ಬೆಂಗಳೂರು ಅಪ್ರೆಂಟೀಸ್ (ಶಿಶಿಕ್ಷು) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ. ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಯೊಂದಿಗೆ ಐಟಿಐ ನಲ್ಲಿ ಫಿಟ್ಟರ್, ಮಿಷನಿಸ್ಟ್, ಟರ್ನರ್, ವೆಲ್ಡರ್, ಎಲೆಕ್ಟ್ರಿಷಿಯನ್, ಶೀಟ್ ಮೆಟಲ್ ವರ್ಕರ್, ಕಾರ್ಪೆಂಟೆರ್, ಫೌಂಡ್ರಿಮೆನ್ ಹಾಗೂ ಪಾಸಾ ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಸ್ಟೈಫಂಡ್ ನೀಡಲಾಗುತ್ತದೆ.
Recommended Video

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 6/10/2017. ಅರ್ಜಿ ಜೊತೆಗೆ ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಅಂಕಪಟ್ಟಿ, ಪ.ಜಾತಿ/ಪ.ಪಂಗಡ/ಓ.ಬಿ.ಸಿ ಸರ್ಟಿಫೀಕೆಟ್ ಹಾಗೂ ಒಂದು ಪಾಸ್ ಪೋರ್ಟ್ ಭಾವಚಿತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು.












Click it and Unblock the Notifications