K.H.Muniyappa Car Accident: ಹಾಸನದ ಬಳಿ ಕೆ.ಎಚ್‌.ಮುನಿಯಪ್ಪ ಕಾರು ಅಪಘಾತ

K.H.Muniyappa: ಹಾಸನ ಸಮಾವೇಶ ಇಂದು (ಡಿಸೆಂಬರ್ 05) ಆರಂಭವಾಗಿದೆ. ಇನ್ನು ಸಮಾವೇಶಕ್ಕೆ ತೆರತ್ತಿದ್ದ ವೇಳೆ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರ ಕಾರು ಅಪಘಾತವಾದ ಘಟನೆ ನಡೆದಿದೆ. ಹಾಗಾದರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಬಳಿ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಬರುತ್ತಿದ್ದ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಕಾರು ಅಪಘಾತಕ್ಕೆ ಒಳಗಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

K H Muniyappa Car Accident near Hassan

ಹಾಸನ ಸಮಾವೇಶ: ಹಾಸನ ಸಮಾವೇಶ ಇಂದು ಆರಂಭವಾಗಿದೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಎರಡೂವರೆ ವರ್ಷಗಳ ನಂತರ ಅಧಿಕಾರ ಹಸ್ತಾಂತರಿಸುವ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರಕ್ಕೆ ಸಿದ್ದರಾಮಯ್ಯ ಬದ್ಧರಾಗುತ್ತಾರೆಯೇ ಎಂಬುದು ಇದೀಗ ಪ್ರಶ್ನೆ ಆಗಿದೆ.

2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹೈಕಮಾಂಡ್ ಮಟ್ಟದಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು ಎನ್ನುವ ಬಗ್ಗೆ ಸುದ್ದಿಯಾಗಿತ್ತು ಎಂದು ಡಿ.ಕೆ.ಶಿವಕುಮಾರ್ ಕೂಡ ಹೇಳಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಕೆ.ಆರ್.ಪೇಟೆಯಲ್ಲಿ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಒಪ್ಪಂದ ಆಗಿಲ್ಲ ಎಂದು ಹೇಳಿದರು.

ಆದರೆ ನಾವು ಹೈಕಮಾಂಡ್ ನಿರ್ಧಾರದಂತೆ ನಡೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು. ಇನ್ನು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಮ್ಮ ಸಿಎಂ ನಿರ್ಧಾರವೇ ಅಂತಿಮ, ಅದಕ್ಕೆ ನನ್ನ ಅಭ್ಯಂತರ ಇಲ್ಲ ಎಂದು ಹೇಳಿದ್ದರು.

ಇನ್ನು ಇಂದು ರ‍್ಯಾಲಿಯನ್ನು ಸಿದ್ದರಾಮಯ್ಯನವರ ಬೆಂಬಲಿಗರು ಶೋಷಿತ ಸಮುದಾಯಗಳ ಒಕ್ಕೂಟದ ಅಡಿಯಲ್ಲಿ ಮೊದಲು ಯೋಜನೆ ಮಾಡಲಾಗಿತ್ತು. ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರ ಸಂಕ್ಷಿಪ್ತ ರೂಪವಾದ ಅಹಿಂದ ಸಂಘಟನೆ ಸಿದ್ದರಾಮಯ್ಯ ಅವರನ್ನು ಬೆಂಬಲಿಸಲು ಈ ಸಮಾವೇಶ ಆಯೋಜನೆ ಮಾಡಲಾಗಿತ್ತು. ಇದಕ್ಕೆ ಸ್ವಾಭಿಮಾನಿ ಸಮಾವೇಶ ಎಂದು ಹೆಸರಿಸಲಾಗಿತ್ತು.

ಆದರೆ, ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರೊಬ್ಬರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಮಧೇಯ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಸ್ವಾಭಿಮಾನಿ ಮೈತ್ರಿಕೂಟ ಮತ್ತು ಕಾಂಗ್ರೆಸ್ ಆಶ್ರಯದಲ್ಲಿ ಸಮಾವೇಶ ನಡೆಯಲಿದೆ ಎಂದು ಹೇಳಿದ ಶಿವಕುಮಾರ್ ಅದನ್ನು ಕಾಂಗ್ರೆಸ್ ಪಕ್ಷದ ಸಮಾವೇಶವನ್ನಾಗಿ ಪರಿವರ್ತಿಸಿ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಎಂದು ಮರುನಾಮಕರಣ ಮಾಡಿದರು ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+