ಕಾಂಗ್ರೆಸ್‌ ಅಭ್ಯರ್ಥಿ ಬಾಗೂರು ಮಂಜೇಗೌಡ ಕಾರಿನ ಮೇಲೆ ಕಲ್ಲು ತೂರಾಟ

ಹಾಸನ, ಮೇ12: ಮತದಾನಕ್ಕಾಗಿ ಮತಗಟ್ಟೆಯೆಡೆಗೆ ತೆರಳುವ ಮಾರ್ಗಮಧ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

ಶನಿವಾರ ಬೆಳಗ್ಗೆ ಕಾಂಗ್ರೆಸ್‌ ಅಭ್ಯರ್ಥಿ ಬಾಗೂರು ಮಂಜೇಗೌಡ ಅವರು ಮತದಾನಕ್ಕಾಗಿ ಮತಗಟ್ಟೆಗೆ ತೆರಳುತ್ತಿರುವಾಗ ಮಾರ್ಗ ಮಧ್ಯದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಾರಿನ ಗಾಜುಗಳು ಪುಡಿ ಪುಡಿಯಾಗಿದೆ. ಕಾರು ಚಾಲಕರನಿಗೂ ಸಣ್ಣ ಪುಟ್ಟ ಗಾಯಗಳಾಗಿದೆ.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

Karnataka assembly election 2018: Stone pelting on Congress candidate Manje gowda car

ಮಂಜೇಗೌಡರು ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಮುಂದಾಗಿದ್ದಾರೆ. ಹಾಗೂ ಕಲ್ಲು ತೂರಾಟ ನಡೆಸಿದವರು ಜೆಡಿಎಸ್‌ನ ಕಾರ್ಯಕರ್ತರು ಎಂದು ಹೇಳಿಕೆ ನೀಡಿದ್ದಾರೆ. ಇಷ್ಟು ಹೊತ್ತು ಬಿರುಸಿನ ಶಾಂತಿಯುತ ಮತದಾನ ನಡೆಯುತ್ತಿತ್ತು, ಇದೀಗ ಈ ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+