Get Updates
Get notified of breaking news, exclusive insights, and must-see stories!

Karnataka elections 2023: ಹಾಸನ ಜಿಲ್ಲೆಯ ಕ್ಷೇತ್ರವಾರು ಮತದಾರರ ವಿವರಗಳನ್ನು ತಿಳಿಯಿರಿ

ಹಾಸನ, ಏಪ್ರಿಲ್‌, 05: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯು ಈಗಿನಿಂದಲೇ ಜಾರಿಯಲ್ಲಿರುತ್ತದೆ ಎಂದು ಮಂಗಳವಾರ (ಏಪ್ರಿಲ್‌ 04) ತಿಳಿಸಿದ್ದರು. ಹಾಗೆಯೇ ಜಿಲ್ಲೆಯಲ್ಲಿನ ಮತದಾರರ ವಿವರವನ್ನು ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಏಪ್ರಿಲ್‌ 20ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾವಾಗಿದ್ದು, ಏಪ್ರಿಲ್‌ 21 ನಾಮಪತ್ರಗಳ ಪರೀಶೀಲನೆ ಕೊನೆ ದಿನವಾಗಿದೆ. ಏಪ್ರಿಲ್‌ 24ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಏಣಿಕೆ ಕಾರ್ಯ ನಡೆಯಲಿದೆ. ಹಾಗೂ ಮೇ 15ರಂದು ಚುನಾವಣೆ ಪ್ರಕ್ರಿಯೆ ಪುರ್ಣಗೂಳ್ಳುತ್ತದೆ ಎಂದು ತಿಳಿಸಿದರು.

Karnataka Assembly Elections 2023: Hassan district Voters And Polling Booth

ಕ್ಷೇತ್ರವಾರು ಅಧಿಕಾರಿಗಳ ನೇಮಕ

ಶ್ರವಣಬೆಳಗೋಳ ಕ್ಷೇತ್ರಕ್ಕೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್ ಅವರನ್ನು ಚುನಾವಣಾಧಿಕಾರಿಯಾಗಿ ಹಾಗೂ ಚನ್ನರಾಯಪಟ್ಟಣ ತಹಶೀಲ್ದಾರರಾದ ಗೋವಿಂದರಾಜು ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ಅರಸೀಕೆರೆ ಕ್ಷೇತ್ರಕ್ಕೆ ಕೃಷಿ ಇಲಾಖೆ ಜಂಟಿ ನಿರ್ದೇಶಕರು ರಾಜಸುಲೋಚನ ಅವರನ್ನು ಚುನಾವಣಾಧಿಕಾರಿ ಹಾಗೂ ಅರಸೀಕೆರೆ ತಾಲೂಕು ತಹಶೀಲ್ದಾರರನ್ನು ಸಹಾಯಕ ಚುನಾವಣಾಧಿಕಾರಿ ವಿದ್ಯಾ ರಾಠೋಡ್ ಅವರನ್ನು ನೇಮಿಸಲಾಗಿದೆ ಎಂದು ಹೇಳಿದರು.

ಬೇಲೂರು ಕ್ಷೇತ್ರಕ್ಕೆ ಹಾಗೂ ಉಪ ನಿಬಂಧಕರು ಸಹಕಾರ ಸಂಘಗಳ ಇಲಾಖೆ ಶಂಕರ ಅವರನ್ನು ಚುನಾವಣಾಧಿಕಾರಿಯಾಗಿ ಹಾಗೂ ಬೇಲೂರು ತಾಲೂಕು ತಹಶೀಲ್ದಾರರಾದ ಮಮತಾ ಎಂ ಅವರನ್ನು ಸಹಾಯಕ ಚುನಾವಣಾಧಿಕಾರಿ ನೆಮಿಸಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಪ್ರಾದೇಶಿಕ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರನ್ನು ಚುನಾವಣಾಧಿಕಾರಿಯಾಗಿ ಹಾಗೂ ಹಾಸನ ತಾಲೂಕು ತಹಶೀಲ್ದಾರ್ ಶ್ವೇತಾ ಅವರನ್ನು ಸಹಾಯಕ ಚುನಾವಣಾಧಿಕಾರಿ ಆಗಿ ನೇಮಿಸಲಾಗಿದೆ ಎಂದರು.

ಇನ್ನು ಹಾಸನ ಉಪವಿಭಾಗಾಧಿಕಾರಿಗಳಾದ ಕೃಪಾಲಿನಿ ಅವರನ್ನು ಚುನಾವಣಾಧಿಕಾರಿಯಾಗಿ, ಹೊಳೆನರಸೀಪುರ ತಾಲೂಕು ತಹಶೀಲ್ದಾರ್ ವಿಶ್ವನಾಥ್‍ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕರಾದ ಸುರೇಶ್ ಅವರನ್ನು ಚುನಾವಣಾಧಿಕಾರಿಯಾಗಿ ಹಾಗೂ ಅರಕಲಗೂಡು ತಾಲೂಕು ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ್ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಿದ್ದಾರೆ ಎಂದು ತಿಳಿಸಿದರು.

Karnataka Assembly Elections 2023: Hassan district Voters And Polling Booth

ಸಕಲೇಶಪುರ ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್ ಚುನಾವಣಾಧಿಕಾರಿಯಾಗಿ ಹಾಗೂ ಸಕಲೇಶಪುರ ತಹಶೀಲ್ದಾರ್ ಜಿ. ಮೇಘನಾ ಅವರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಿಸಲಾಗಿದೆ ಎಂದು ತಿಳಿಸಿದರು.

ಮತದಾರರ ಸಂಪೂಣ ವಿವರ

ಹಾಗೆಯೇ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ಒಟ್ಟು 2,03,026 ಮತದಾರರಿದ್ದಾರೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ 276 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ಒಟ್ಟು 2,14,020 ಮತದಾರರಿದ್ದಾರೆ. ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ 1,96,053 ಮತದಾರರಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ 276 ಮತಗಟ್ಟೆಗನ್ನು ಸ್ಥಾಪಿಸಲಾಗಿದ್ದು, ಇಲ್ಲಿ 2,23,021 ಮತದಾರರಿದ್ದಾರೆ.

ಇನ್ನು ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ 325 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ 2,18,097 ಮತದಾರರಿದ್ದಾರೆ. ಅರಕಲಗೂಡು ವಿಧಾನಸಭಾ ಕ್ಷೇತ್ರದಲಿ 287 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, ಇಲ್ಲಿ ಒಟ್ಟು 2,25,746 ಮತದಾರರಿದ್ದಾರೆ. ಸಕಲೇಶಪುರದಲ್ಲಿ 287 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 2,03,631 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

33 ಚೆಕ್‌ ಪೋಸ್ಟ್‌ಗಳ ಸ್ಥಾಪನೆ

ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ವಿಧಾನಸಭಾ ಕ್ಷೇತ್ರಗಳ ಹಂತದಲ್ಲಿ ಮಾದರಿ ನೀತಿ ಸಂಹಿತೆ ತಂಡದ ನೋಡಲ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ತಂಡಗಳು, ವಿಡಿಯೋ ಸರ್ವೆಲೆನ್ಸ್ ತಂಡಗಳು, ಜಿಲ್ಲೆಯ ಗಡಿ ಭಾಗಗಳಲ್ಲಿ ಕಣ್ಗಾವಲು ದಳಗಳನ್ನು ನೇಮಿಸಲಾಗಿರುತ್ತದೆ. ಹಾಗೂ ಜಿಲ್ಲೆಯ ಗಡಿ ಭಾಗಗಳಲ್ಲಿ ಒಟ್ಟು 33 ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಿಗೆ, ಆಸ್ತಿಗಳಿಗೆ ಯಾವುದೇ ರೀತಿಯಿಂದ ಹಾನಿಗೊಳಗಾಗದಂತೆ ಹಾಗೂ ನಾಶಪಡಿಸಿದಲ್ಲಿ ಮಾದರಿ ನೀತಿ ಸಂಹಿತೆ ಹಾಗೂ ಸಿಆರ್‌ಪಿಸಿ ಕಾಯ್ದೆಗಳನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಸಾರ್ವಜನಿಕ ಕಚೇರಿ, ಸಾರ್ವಜನಿಕ ವೆಬ್‍ಸೈಟ್, ಸಾರ್ವಜನಿಕ ಆಸ್ತಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಬ್ಯಾನರ್, ಬಂಟಿಂಗ್ಸ್, ಚುನಾವಣಾ ಪ್ರಚಾರ ಸಾಮಾಗ್ರಿಗಳು ಇದ್ದಲ್ಲಿ ಅವುಗಳನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿರುವುದರಿಂದ ಸರ್ಕಾರದ ವತಿಯಿಂದ ಯಾವುದೇ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವಂತಿರುವುದಿಲ್ಲ. ಮತ್ತು ಹೊಸ ಕಾಮಗಾರಿಗಳ ಬಗ್ಗೆ ಟೆಂಡರ್ ಕರೆಯುವಂತಿಲ್ಲ ಎಂದು ತಿಳಿಸಿದ್ದಾರೆ.

ಕಾನೂನು ರೀತಿಯಲ್ಲಿ ಸೂಕ್ತ ಕ್ರಮ

ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆಗಾಗಿ ನಿತ್ಯವು ಪರಿಶೀಲನೆ ನಡೆಸಲಾಗುತ್ತಿದೆ. ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಾಗೂ ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿಗಳಿಗೆ ವರದಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳ ಹಂತದಲ್ಲಿ ಸಾರ್ವಜನಿಕರು ದೂರುಗಳನ್ನು ದಾಖಲಿಸುವ ಮೊಬೈಲ್ ಅಪ್ಲಿಕೇಷನ್ ಅನ್ನು ಜಾರಿ ಮಾಡಲಾಗಿದೆ. ಈ ಅಪ್ಲಿಕೇಷನ್ ಮೂಲಕ ಸಾರ್ವಜನಿಕರು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯ ಕುರಿತು ನೇರವಾಗಿ ದೂರುಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಹೇಳಿದರು.

ನೀತಿ ಸಂಹಿತೆ ಪಾಲಿಸುವಂತೆ ಸೂಚನೆ

ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಆಯಾ ಚುನಾವಣಾಧಿಕಾರಿಗಳ ಹಂತದಲ್ಲಿಯೇ ರಾಜಕೀಯ ಪಕ್ಷಗಳು ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸಲು ಅನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಚುನಾವಣಾ ಪ್ರಚಾರಕ್ಕಾಗಿ ವಾಹನ ಬಳಕೆ ಹಾಗೂ ಹೆಲಿಕಾಪ್ಟರ್ ಲ್ಯಾಂಡಿಂಗ್ ಅನುಮತಿಯನ್ನು ಜಿಲ್ಲಾ ಚುನಾವಣಾಧಿಕಾರಿ ಹಂತದಲ್ಲಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

1950 ಜಿಲ್ಲಾ ಮಾಹಿತಿ ಕೇಂದ್ರ ಮತದಾರರ ಸಹಾಯವಾಣಿ 1950 ಕೆಂದ್ರವನ್ನು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ. ಈ ಕೇಂದ್ರಕ್ಕೆ ಮತದಾರರು, ಸಾರ್ವಜನಿಕರು ಉಚಿತ ಕರೆಗಳನ್ನು ಮಾಡಬಹುದಾಗಿದ್ದು, ಮತದಾರರ ಪಟ್ಟಿಗೆ ಸಂಬಂಧಿಸಿದ ಹಾಗೂ ಇತರೆ ಚುನಾವಣೆ ಸಂಬಂಧ ಮಾಹಿತಿಗಳನ್ನು ಪಡೆದುಕೊಳ್ಳಬಹುಗಿದೆ ಎಂದು ತಿಳಿಸಿದರು.

ಕಂಟ್ರೋಲ್ ರೂಂ ಸ್ಥಾಪನೆ

ಚುನಾವಣಾ ದೂರುಗಳ ನಿರ್ವಹಣೆ ಹಾಗೂ ಚುನಾವಣಾ ಕಂಟ್ರೋಲ್ ರೂಂ ಸ್ಥಾಪಸಲಾಗಿದೆ. ಜಿಲ್ಲೆಯಲ್ಲಿ ಮತದಾರರ ಕುಂದು ಕೊರತೆ ಆಲಿಸಲು, ದೂರು ಸ್ವೀಕರಿಸಲು ಹಾಗೂ ಸಲಹೆ ಸೂಚನೆಗಳನ್ನು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆಯೂ ಕೆಲಸ ನಿರ್ವಹಿಸಲು ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ಜನರು ದೂರವಾಣಿಗಳ ಸಂಖ್ಯೆ- 08172-265028/ 267345 ಹಾಗೂ ಟೋಲ್ ಫ್ರೀ ಸಂಖ್ಯೆ 1950ಕ್ಕೆ ಸಂಪರ್ಕಿಸಬಹುದಾಗಿದೆ.

ಅಂಚೆ ಮತಪತ್ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ವಿಶೇಷ ಚೇತನರು, 80 ವರ್ಷ ವಯೋಮಾನದವರು, ಕೋವಿಡ್-19 ಸೋಂಕಿತರಿಗೆ ಅಂಚೆ ಮತಪತ್ರದ ಮೂಲಕ ಮತ ಚಲಾವಣೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.

ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ತಕ್ಷಣದಿಂದ ಸಾರ್ವಜನಿಕ ಸ್ಥಳಗಳ ವಿರೂಪಗೊಳಿಸುವ ಕಾಯ್ದೆ ಪ್ರಕಾರ ನಿಯಮಾವಳಿಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಶಕ್ಕೆ ಪಡೆದ ನಗದಿನ ವಿವರ

ಮಾರ್ಚ್‌ 16ರಿಂದ ಇದುವೆರೆಗೆ ಜಿಲ್ಲೆಯಲ್ಲಿ 51,85,090 ನಗದು, 18,93,236 ಮೌಲ್ಯದ 9562.42 ಲೀಟರ್‌ಗಳಷ್ಟು ಅಕ್ರಮ ಮದ್ಯ, 14,850 ಮೌಲ್ಯದ 144.01 ಗ್ರಾಂ ಡ್ರಗ್ಸ್, ನಾರ್ಕೋಟಿಕ್ಸ್, 66 ಎಫ್.ಐ.ಆರ್ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಆನಂದ್, ಜಿಲ್ಲಾ ವಾರ್ತಾ ಅಧಿಕಾರಿ ವಿನೋದ್ ಚಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.

Karnataka Assembly Elections 2023: Hassan district Voters And Polling Booth, here see complte details,

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+