ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಪತನದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ
Recommended Video

ಅರಸೀಕೆರೆ, ಅಕ್ಟೋಬರ್ 11: ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಶ್ರೀಗಳು ತಾಳೆಗರಿ ಹಿಡಿದು ನುಡಿಯುವ ಒಗಟಿನ ಮಾತಿಗೆ ನಾನಾ ಅರ್ಥಗಳನ್ನು ಕಲ್ಪಿಸಲಾಗುತ್ತದೆ. ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ಬಗ್ಗೆ ಭವಿಷ್ಯ ನುಡಿದಿದ್ದ ಶ್ರೀಗಳು ಇಂದು ಸರ್ಕಾರ ಪತನದ ಬಗ್ಗೆ ಏನು ಹೇಳಿದ್ದಾರೆ ಮುಂದೆ ಓದಿ..
"ಬಿತ್ತಿದ ಬೆಳಸು ಪರರು ಕೊಯ್ದಾರು" ಎಂದು ಶ್ರೀಗಳು ಹೇಳಿದ್ದರು. ಅದರಂತೆ, ಬಿತ್ತಿದ ಬೀಜ, ಬೆಳೆದು ಬಂದ ಪೈರು ಇದು ಮುಂದಿನ ಅಸೆಂಬ್ಲಿ ಚುನಾವಣೆಯ ಭವಿಷ್ಯ ಎಂದು ಶ್ರೀಗಳು ಹೇಳಿದ್ದರು. ಇದರಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಬೆಳೆದ ಬೆಳೆಯನ್ನು ಪರರು(ಜೆಡಿಎಸ್) ಕೊಯ್ದುಕೊಂಡಿದ್ದಾರೆ ಎಂದು ಅರ್ಥೈಸಲಾಗಿತ್ತು.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವರಾಗಿದ್ದ ಎನ್ ಮಹೇಶ್ ಅವರು ಇಂದು ಅನೇಕ ಕಾರಣಗಳನ್ನು ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದು, ಮೈತ್ರಿ ಸರ್ಕಾರದ ಭವಿಷ್ಯ ಇನ್ನೆರಡು ತಿಂಗಳು ಮಾತ್ರ ಎಂದಿದ್ದಾರೆ.

ಈ ಹಿಂದೆ ಕೋಡಿಮಠಶ್ರೀಗಳು ನೀಡಿದ್ದ ಭವಿಷ್ಯ
'ಭ್ರಾತೃ ಬೆಂಕಿ ಹಿಡಿದಾನು...' ಕೋಡಿಮಠಶ್ರೀಗಳ ಭವಿಷ್ಯ ನಿಜವಾಯ್ತೆ! "ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ, ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನು...' ಭ್ರಾತೃ ಬೆಂಕಿ ಹಿಡಿಯುತ್ತಾನೆ ಎಂಬುದಕ್ಕೆ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ರೇವಣ್ಣ ಬಂಡಾಯ ಏಳುತ್ತಾರೆ ಎಂದೂ ಕೆಲವರು ವಿಶ್ಲೇಷಿಸಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ಸಂಕಷ್ಟದಲ್ಲಿ ಸಿಲುಕಿದರೆ ಸೋದರನಾಗಿ ಬೆಳಕು ತೋರಿಸಿ ರಕ್ಷಿಸುತ್ತಾರೆ ಎಂಬ ಅರ್ಥವನ್ನು ಹೇಳಿದ್ದರು. ಆದರೆ, ಇದು ಕುಮಾರಸ್ವಾಮಿ-ರೇವಣ್ಣ ಅವರ ಬದಲಿಗೆ ಜಾರಕಿಹೊಳಿ ಸೋದರರ ಬಗ್ಗೆ ನುಡಿದಿದ್ದು ಎನ್ನಲಾಗಿತ್ತು.

ಎಂಟನೇ ಸ್ಥಾನದ ಶನಿಯ ಪ್ರಭಾವ
ಬಂಧು-ಮಿತ್ರರಲ್ಲಿ ವಿರಸ, ಸಾಮಾಜಿಕವಾಗಿ ಇವರಿಗಿಂತ ಕೆಳ ಸ್ಥಾನದಲ್ಲಿ ಇರುವವರಿಂದ ಅವಮಾನ, ಅನಾರೋಗ್ಯ ಸಮಸ್ಯೆ, ನಂಬಿದವರಿಂದಲೇ ವಿಶ್ವಾಸ ದ್ರೋಹ ಈ ಎಲ್ಲವೂ ಕಾಣುತ್ತಿದೆ. ಅದಕ್ಕೆ ಕಾರಣ ಆರನೇ ಮನೆಗೆ ಪ್ರವೇಶಿಸುವ ಗುರು ಹಾಗೂ ಚಂದ್ರನಿಗೆ ಏಳನೇ ಸ್ಥಾನ ಹಾಗೂ ಲಗ್ನಕ್ಕೆ ಎಂಟನೇ ಸ್ಥಾನದ ಶನಿಯ ಪ್ರಭಾವ. ಜತೆಗೆ ವಿಪತ್ ತಾರೆಯ ನಕ್ಷತ್ರದಲ್ಲಿ ನಡೆಯುತ್ತಿರುವ ಬುಧ ದಶೆ ಹಾಗೂ ರಾಹು ಭುಕ್ತಿಯ ಪ್ರಭಾವದಿಂದ ಇಷ್ಟೆಲ್ಲ ಅನುಭವಿಸಬೇಕಾಗುತ್ತದೆ. ಇನ್ನು ಇವರು ಒತ್ತಡಗಳಿಂದ ಸರಕಾರ ವಿಸರ್ಜಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ತನಗೆ ಲಭಿಸದಿದ್ದರೆ ಇನ್ನೊಬ್ಬರಿಗೂ ಸಿಗಬಾರದು ಎಂಬ ಕಾರಣಕ್ಕೆ ಹಾಗೆ ಮಾಡುವ ಸಾಧ್ಯತೆ ಇದೆ. ಬಾಧಕಾಧಿಪತಿ ಶನಿಯು ರವಿಯ ಜತೆ ಇರುವುದು ಇದಕ್ಕೆ ಕಾರಣ ಎಂದು ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಅವರು ಅಭಿಪ್ರಾಯಪಟ್ಟಿದ್ದರು.

ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಸಾಧ್ಯತೆ
ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಸಾಧ್ಯತೆ ಬಗ್ಗೆ ಹೇಳಿದ್ದ ಶ್ರೀಗಳು, ಈ ಹಿಂದೆ ಗುಜರಾತ್ ಹಾಗೂ ಉತ್ತರಪ್ರದೇಶ ಚುನಾವಣೆ ಬಗ್ಗೆ ಕೂಡಾ ಇದೇ ರೀತಿ ವ್ಯಾಖ್ಯಾನ ನೀಡಿದ್ದರು. ಇದಾದ ನಂತರ ಈ ವರ್ಷದ ಆದಿಯಲ್ಲಿ, 'ಕಷ್ಟಪಟ್ಟು ದುಡಿಯುವವರು ಒಬ್ಬರು, ಅದರ ಲಾಭವನ್ನು ತೆಗೆದುಕೊಳ್ಳುವವರು ಇನ್ನೊಬ್ಬರು' ಎಂದು ಉತ್ತರಪ್ರದೇಶ ಮತ್ತು ಗುಜರಾತ್ ಚುನಾವಣೆಯನ್ನು ಉಲ್ಲೇಖಿಸಿ ಶ್ರೀಗಳು ಹೇಳಿದ್ದರು. ಇವಿಎಂ ಯಂತ್ರಗಳು ದೋಷಪೂರಿತ ಎನ್ನುವುದು ನನ್ನ ಮಾತಿನ ಉದ್ದೇಶ ಎಂದು ಶ್ರೀಗಳು ಅದಾದ ನಂತರ ಹೇಳಿದ್ದರು. ಎರಡೂ ರಾಜ್ಯಗಳಲ್ಲಿ ಸೋತ ನಂತರ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಇವಿಎಂ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದನ್ನು ಸ್ಮರಿಸಿಕೊಳ್ಳಬಹುದಾಗಿದೆ.

ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು
ವರ್ಷಾಂತ್ಯದವರೆಗೂ ಮಳೆಯಾಗಲಿದೆ. ದ್ವೇಷ - ಅಸೂಯೆ ಹೆಚ್ಚಳವಾಗುತ್ತದೆ. 2 ತಿಂಗಳು ಕಾದು ನೋಡಿ ಎಂದು ಶ್ರೀಗಳು ತಿಳಿಸಿದರು.ರಾಜ್ಯ ಸರಕಾರದ ಸದ್ಯದ ಸ್ಥಿತಿಯ ಬಗ್ಗೆ ಹೇಳಬೇಕು ಅಂದರೆ, ಚಂದ್ರ ಗ್ರಹಣವು ಅಪಾಯದ ಮುನ್ಸೂಚನೆಯಂತೆ ಕಾಣುತ್ತಿದೆ. ಭಿನ್ನಾಭಿಪ್ರಾಯ ದೊಡ್ಡ ಮಟ್ಟದಲ್ಲಿ ಭುಗಿಲೆದ್ದು, ಸರಕಾರದ ಮುಖ್ಯ ವ್ಯಕ್ತಿಯೊಬ್ಬರ ಆರೋಗ್ಯದ ಮೇಲೂ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಸರಕಾರಕ್ಕೆ ಅಳಿವು- ಉಳಿವಿನ ಪ್ರಶ್ನೆ ಎದುರಾಗುತ್ತದೆ. ಮನಸ್ಸಿನ ಕಹಿ ನಿವಾರಿಸಿಕೊಳ್ಳಲಿಲ್ಲ ಅಂದರೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ಮಾತು ಹಲವು ಬಾರಿಗೆ ಕೇಳಿ ಬಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications