ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ದ ಎಫ್‌ಐಆರ್

ಹಾಸನ, ಡಿಸೆಂಬರ್ 04 : ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ಮುಖಂಡನ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಪೊಲೀಸರು ಸೂರಜ್ ರೇವಣ್ಣ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಹಾಸನದ ಚನ್ನರಾಯಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ಸೂರಜ್ ರೇವಣ್ಣ ವಿರುದ್ಧ ಎಫ್ ದಾಖಲು ಮಾಡಿದ್ದಾರೆ. ಕೆ. ಆರ್. ಪೇಟೆ ಗಡಿ ಭಾಗದ ನಂಬಿಹಳ್ಳಿಯಲ್ಲಿ ಬೆಂಗಳೂರಿನ ಪಾಲಿಕೆ ಸದಸ್ಯನ ಕಾರಿನ ಮೇಲೆ ದಾಳಿ ನಡೆಸಲಾಗಿದೆ ಎಂಬುದು ಆರೋಪ.

ಸೂರಜ್ ರೇವಣ್ಣ ಸೇರಿದಂತೆ ನಾಲ್ವರು ಯುವಕರು ಬೆಂಗಳೂರಿನ ಬಿಜೆಪಿ ಪಾಲಿಕೆ ಸದಸ್ಯನ ಕಾರಿನ ಮೇಲೆ ದಾಳಿ ಮಾಡಿ ಜಖಂಗೊಳಿಸಿದ್ದಾರೆ. ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಕಾರಿನಲ್ಲಿದ್ದವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

KR Pete By Elections FIR Against Suraj Revanna

ಕೆ. ಆರ್. ಪೇಟೆ ಕ್ಷೇತ್ರದ ಉಪ ಚುನಾವಣೆ ಡಿಸೆಂಬರ್ 5ರಂದು ನಡೆಯಲಿದೆ. ನಂಬಿಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದ ಪಾಲಿಕೆ ಸದಸ್ಯ ಮತ್ತು ಅವರ ಬೆಂಬಲಿಗರು ಕಾರಿನಲ್ಲಿ ಉಪ ಚುನಾವಣೆಗೆ ಹಣ ಹಂಚುತ್ತಿದ್ದರು ಎಂದು ಆರೋಪಿಸಲಾಗಿದೆ.

ಹಣ ಹಂಚುವ ಬಗ್ಗೆ ಮಾಹಿತಿ ಪಡೆದಿದ್ದ ಸೂರಜ್ ರೇವಣ್ಣ ಇತರ ಮೂವರ ಜೊತೆ ಹೋಗಿ ಕಾರಿನ ಮೇಲೆ ದಾಳಿ ಮಾಡಿದ್ದರು. ಕಾರನ್ನು ಜಖಂಗೊಳಿಸಿದ್ದಾರೆ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು.

ಕೆ. ಆರ್. ಪೇಟೆ ಕ್ಷೇತ್ರದ ಉಪ ಚುನಾವಣೆ ಗುರುವಾರ ನಡೆಯಲಿದೆ. ಬಿಜೆಪಿಯಿಂದ ನಾರಾಯಣ ಗೌಡ, ಕಾಂಗ್ರೆಸ್‌ನಿಂದ ಕೆ. ಬಿ. ಚಂದ್ರಶೇಖರ್, ಜೆಡಿಎಸ್‌ನಿಂದ ದೇವರಾಜ್ ಬಿ. ಎಲ್. ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+