ಹಾಸನ: ಬ್ರೇಕ್‌ ಫೇಲ್‌ ಆಗಿ ಕಂದಕಕ್ಕೆ ಉರುಳಿದ KSRTC ಬಸ್‌

ಹಾಸನ, ಸೆಪ್ಟೆಂಬರ್‌, 09: ಸಾರಿಗೆ (KSRTC) ಬಸ್ಸೊಂದು ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿದ ಘಟನೆ ಹಾಸನ ಜಿಲ್ಲೆಯ ಹೊಂಗಡಹಳ್ಳ ಸಮೀಪದ ಮಂಕನಹಳ್ಳಿ ಬಳಿ ನಡೆದಿದೆ.

KSRTC bus fell into ditch near Mankanahalli

ಮಂಕನಳ್ಳಿ ಬಳಿ ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್‌ ಕಂದಕಕ್ಕೆ ಉರುಳಿದ್ದು, ಈ ವೇಳೆ ಬಸ್‌ನಲ್ಲಿದ್ದ 4 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, 35 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಈ ಘಟನೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಇನ್ನು ದುಸ್ಥಿತಿಯಲ್ಲಿರುವ ಬಸ್‌ಗಳ ಚಾಲನೆಯೇ ಇಂತಹ ಅಪಘಾತಗಳಿಗೆ ಕಾರಣ ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ.

ನಾಲ್ವರು ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಕಾರು ಹಿಂಬಂದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರು.

ಶಂಶುದ್ದೀನ್ (40), ಮಲ್ಲಿಕಾ (37), ಖಲೀಲ್ (42), ತಬ್ರೇಜ್ (13) ಇವರು ಭೀಕರ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಇನ್ನು ರೆಹಾನ್ (14), ರೆಹಮಾನ್ (12), ಮುಬಿ (9) ಎನ್ನುವ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+