ಹಾಸನ: ಕೆಎಸ್‌ಆರ್‌ಟಿಸಿ-ಸ್ಕೂಟರ್ ನಡುವೆ ಭೀಕರ ಅಪಘಾತ: ಮೂವರು ಸಾವು
ಹಾಸನ, ಸೆಪ್ಟೆಂಬರ್ 28: ರಸ್ತೆ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿವೆ. ಇನ್ನು ಇದೀಗ ಕೆಎಸ್‌ಆರ್‌ಟಿಸಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವ ಭೀಕರ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಯಡೇಗೌಡನಹಳ್ಳಿ ಬಳಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್-ಸ್ಕೂಟಿ ನಡುವಿನ ಭೀಕರ ಅಪಘಾತ ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್-ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇರ್ಫಾನ್, ತರುಣ್, ರೇವಂತ್ ಎಂಬುವರು ಅಪಘಾತದಲ್ಲಿ ಮೃತಪಟ್ಟವರು. ಹೊಳೆನರಸೀಪುರ ತಾಲ್ಲೂಕಿನ ಯಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದ ಭೀಕರ ಅಪಘಾತ ಸಂಭವಿಸಿದೆ. ಮೂವರು ಯುವಕರು ಒಂದೇ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಇನ್ನು ಅಪಘಾತದಲ್ಲಿ ಮೃತಪಟ್ಟ ಮೂವರು ಯುವಕರು ಸುಮಾರು 25 ವರ್ಷದವರಾಗಿದ್ದರು ಎನ್ನಲಾಗುತ್ತಿದೆ. ಈ ಘಟನೆ ಹಾಸನ-ಮೈಸೂರು ರಸ್ತೆಯಲ್ಲಿ ಘಟನೆ ನಡೆದಿದ್ದು, ಹಳ್ಳಿ ಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಆಗಿದೆ ಎನ್ನಲಾಗುತ್ತಿದೆ. ಇನ್ನು ಆಗಾಗ ಪೊಲೀಸರು ವಾಹನ ಸವಾರರಿಗೆ ಜಾಗೃತಿ ಮೂಡಿಸುವಂತಹ ಕೆಲಸಗಳನ್ನು ಮಾಡುತ್ತಲಿರುತ್ತಾರೆ.
ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವಾಗ ಹೆಲ್ಮೆಟ್ ಧರಿಸಿ ಚಾಲನೆ ಮಾಡಿ. ಮೂವರನ್ನು ಕೂರಿಸಿಕೊಂಡು ಬೈಕ್ ಚಾಲನೆ ಮಾಡಬೇಡಿ ಅಂತಾ ಜಾಗೃತಿ ಮೂಡಿಸುತ್ತಲೇ ಇರುತ್ತಾರೆ. ಆದರೆ, ಕೆಲವರು ಮಾತ್ರ ಕ್ಯಾರೆ ಅನ್ನದೇ ತಮ್ಮಿಷ್ಟದಂತೆ ವಾಹನ ಚಾಲನೆ ಮಾಡಿ ಆಪತ್ತು ತಂದುಕೊಳ್ಳುವ ಘಟನೆಗಳು ನಡೆಯುತ್ತಲೇ ಇವೆ.
ಬಸ್-ಟ್ರಕ್ ಭೀಕರ ಅಪಘಾತ: ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ವೇಳೆ 6 ಜನ ಸಾವಪ್ಪಿದ್ದು, 10 ಜನ ಗಾಯಗೊಂಡಿರುವ ಘಟನೆ ಒಡಿಶಾದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಇಂದು ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದು, 10 ಜನ ಗಾಯಗೊಂಡಿದ್ದರು. ಅಪಘಾತದಲ್ಲಿ ಸಾವನ್ನಪ್ಪಿದ 6 ಜನರಲ್ಲಿ ಮೂವರು ಮಹಿಳೆಯರಾಗಿದ್ದಾರೆ. ಕೆ ಬಲಂಗ್ ಪೊಲೀಸ್ ಠಾಣೆ ಬಳಿಯ ರಾಷ್ಟ್ರೀಯ ಹೆದ್ದಾರಿ 520ರಲ್ಲಿ ಅಪಘಾತ ಸಂಭವಿಸಿತ್ತು.
5 ಮಂದಿ ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೋರ್ವ ಚಿಕಿತ್ಸೆ ಪಡೆಯುತ್ತಿರುವಾಗಲೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ಪಶ್ಚಿಮ ವಲಯದ ಡಿಐಜಿ ಬ್ರಿಜೇಶ್ ಕುಮಾರ್ ರೈ ಮಾಹಿತಿ ನೀಡಿದ್ದಾರೆ ಅಂತಾ ವರದಿಯಾಗಿದೆ. ಬಸ್ ರೂರ್ಕೆಲಾದಿಂದ ಕೊಯ್ಡಾಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಸ್ತೆಯ ಒಂದು ಬದಿಯನ್ನು ದುರಸ್ತಿ ಹಿನ್ನೆಲೆ ಮುಚ್ಚಲಾಗಿತ್ತು. ಈ ಹಿನ್ನೆಲೆ ಬಸ್ ತಪ್ಪು ಪಥದಲ್ಲಿ ಪ್ರಯಾಣ ಮಾಡುತ್ತಿತ್ತು ಎಂದು ಪೊಲೀಸರ ಮೂಲಗಳಿಂದ ತಿಳಿದುಬಂದಿದೆ.












Click it and Unblock the Notifications