ಹಾಸನದಲ್ಲಿ ಉರುಳಿಬಿದ್ದ ಕೆಎಸ್‌ಆರ್‌ಟಿಸಿ ಬಸ್: ಓರ್ವ ಪ್ರಯಾಣಿಕ ಸಾವು
ಹಾಸನ, ನವೆಂಬರ್ 25: ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ 25ಕ್ಕೂ ಹೆಚ್ಚು ಮಂದಿಯನ್ನು ಹೊತ್ತಿದ್ದ ಬಸ್ಸು ಬರುತ್ತಿತ್ತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಹಿರಿಸಾವೆ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.
ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಹಿರೆಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಭಿಷೇಕ್ (28) ಎಂದು ಗುರುತಿಸಲಾಗಿದೆ.












Click it and Unblock the Notifications