ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಮತ್ತೆ ಗುಡ್ಡ ಕುಸಿತ
ಹಾಸನ, ಜುಲೈ 03 : ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸಕಲೇಶಪುರದಿಂದ ಸಿಬ್ಬಂದಿ ಮಣ್ಣನ್ನು ತೆರವುಗೊಳಿಸಲು ತೆರಳಿದ್ದಾರೆ.
ಮಂಗಳವಾರ ಮಧ್ಯಾಹ್ನ ಮಂಗಳೂರು-ಹಾಸನ ರೈಲು ಮಾರ್ಗದ ಶಿರವಾಗಿಲು ಸಮೀಪ ಗುಡ್ಡ ಕುಸಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರವಾಗಿಲು ಬಳಿ ಗುಡ್ಡ ಕುಸಿದಿದೆ.
ರೈಲ್ವೆ ಹಳಿಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದರಿಂದ ಮಂಗಳೂರು-ಹಾಸನ ನಡುವಿನ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಗುಡ್ಡ ಕುಸಿದುಬಿದ್ದಿದ್ದರಿಂದ ಮಂಗಳೂರಿನಿಂದ ಹೊರಟಿದ್ದ ರೈಲನ್ನು ಕುಕ್ಕೆ ಸುಬ್ರಮಣ್ಯದಲ್ಲಿ ನಿಲ್ಲಿಸಲಾಗಿದೆ. ಸುಮಾರು 1 ಗಂಟೆಗಳಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಜೂನ್ 11ರಂದು ಸಹ ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ಇದರಿಂದಾಗಿ ಒಂದು ದಿನ ಮಟ್ಟಿಗೆ ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು.
ಜೂನ್ ತಿಂಗಳಿನಲ್ಲಿ ಮೂರು ಬಾರಿ ಈ ಮಾರ್ಗದಲ್ಲಿ ಗುಡ್ಡ ಕುಸಿತವಾಗಿತ್ತು. ಈಗ ಜುಲೈ ತಿಂಗಳಿನಲ್ಲಿಯೂ ಗುಡ್ಡ ಕುಸಿದಿದ್ದು, ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ.












Click it and Unblock the Notifications