ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಷತ್ ಚುನಾವಣೆ; ಸೂರಜ್ ರೇವಣ್ಣ ನಾಮಪತ್ರ ಸಲ್ಲಿಕೆ

By ಹಾಸನ ಪ್ರತಿನಿಧಿ
|
Google Oneindia Kannada News

ಹಾನನ, ನವೆಂಬರ್ 19; ವಿಧಾನ ಪರಿಷತ್ ಚುನಾವಣೆ ಮೂಲಕ ಎಚ್. ಡಿ. ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದೆ. ಮಾಜಿ ಸಚಿವ ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಹಾಸನದ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸುವ ಮೂಲಕ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ಮುಂದುವರೆದಿದೆ. ಎಚ್. ಡಿ. ರೇವಣ್ಣ, ತಾಯಿ ಭವಾನಿ ರೇವಣ್ಣ, ಸೋದರ ಪ್ರಜ್ವಲ್ ರೇವಣ್ಣನ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸಿದರು.

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆ

ಚುನಾವಣಾಧಿಕಾರಿಗಳೂ ಆದ ಹಾಸನ ಜಿಲ್ಲಾಧಿಕಾರಿಗೆ ಸೂರಜ್ ನಾಮಪತ್ರ ಸಲ್ಲಿಸಿದರು. ತಂದೆ ಜೊತೆಗೆ ಒಂದು, ತಾಯಿ ಜೊತೆಗೆ ಇನ್ನೊಂದು ಒಟ್ಟು ಎರಡು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು.

ಪರಿಷತ್ ಚುನಾವಣೆ; ಜೆಡಿಎಸ್ ಹೊಸ ಕಾರ್ಯತಂತ್ರ! ಪರಿಷತ್ ಚುನಾವಣೆ; ಜೆಡಿಎಸ್ ಹೊಸ ಕಾರ್ಯತಂತ್ರ!

Legislative Council Election Suraj Revanna Files Nomination

ಸೂರಜ್ ರೇವಣ್ಣ ನಾಮಪತ್ರಕ್ಕೆ ಸೂಚಕರಾಗಿ ಶಾಸಕ ಶಿವಲಿಂಗೇಗೌಡ, ಬಾಲಕೃಷ್ಣ, ಲಿಂಗೇಶ್, ಎ. ಟಿ. ರಾಮಸ್ವಾಮಿ, ಎಚ್. ಡಿ. ರೇವಣ್ಣ ಸಹಿ ಹಾಕಿದರು. ನಾಮಪತ್ರ ಸ್ವೀಕರಿಸಿದ ಚುನಾವಣಾ ಅಧಿಕಾರಿ ಆರ್. ಗಿರೀಶ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

ಪರಿಷತ್ ಚುನಾವಣೆ; ಡಾ. ಸೂರಜ್ ರೇವಣ್ಣ ಸ್ಪರ್ಧೆ ಖಚಿತಪರಿಷತ್ ಚುನಾವಣೆ; ಡಾ. ಸೂರಜ್ ರೇವಣ್ಣ ಸ್ಪರ್ಧೆ ಖಚಿತ

ಇದೇ ಮೊದಲ ಬಾರಿಗೆ ಸೂರಜ್ ರೇವಣ್ಣ ಚುನಾವಣಾ ಕಣಕ್ಕಿಳಿದಿದ್ದಾರೆ. ಈ ಮೊದಲು ವಿಧಾನ ಪರಿಷತ್ ಚುನಾವಣೆಗೆ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಭವಾನಿ ಬದಲು ಅವರ ಮಗ ಸೂರಜ್ ರೇವಣ್ಣಗೆ ಟಿಕೆಟ್ ನೀಡಲಾಗಿದೆ.

ಸೂರಜ್ ರೇವಣ್ಣ ಪರಿಚಯ; ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಎಚ್. ಡಿ. ರೇವಣ್ಣ ಮತ್ತು ಭವಾನಿ ರೇವಣ್ಣ ದಂಪತಿಯ ಮಗ. 2020ರಲ್ಲಿ ಹಾಸನ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಆದರೆ, ಇದುವರೆಗೂ ವಿಧಾನಸಭೆ, ವಿಧಾನ ಪರಿಷತ್, ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರಗಳಲ್ಲಿ ಪಾಲ್ಗೊಳ್ಳುತ್ತಿದ್ದ ಸೂರಜ್ ರೇವಣ್ಣ ಇದೀಗ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.

ಕುಟುಂಬ ರಾಜಕಾರಣ; ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭಾ ಸದಸ್ಯರು. ಪುತ್ರರಾದ ರೇವಣ್ಣ ಮತ್ತು ಎಚ್. ಡಿ. ಕುಮಾರಸ್ವಾಮಿ ಮತ್ತು ಸೊಸೆ ಅನಿತಾ ಕುಮಾರಸ್ವಾಮಿ ಶಾಸಕರಾಗಿದ್ದಾರೆ.

ರೇವಣ್ಣ ಪತ್ನಿ ಭವಾನಿ ರೇವಣ್ಣ ರಾಜ್ಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಸಾಕಷ್ಟು ಬಾರಿ ಪ್ರಯತ್ನ ಪಟ್ಟರೂ ಇನ್ನೂ ಅದಕ್ಕೆ ಕಾಲ ಕೂಡಿ ಬಂದಿಲ್ಲ. ಆದರೆ ಅವರು ಹೊಳೆನರಸೀಪುರದ ಹಳೇಕೋಟೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು.

ಎಚ್. ಡಿ. ರೇವಣ್ಣ, ಭವಾನಿ ರೇವಣ್ಣ ದಂಪತಿಗಳ ಪುತ್ರ ಪ್ರಜ್ವಲ್ ರೇವಣ್ಣ 2019ರ ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ.

ಸೂರಜ್ ರೇವಣ್ಣ ವೃತ್ತಿಯಲ್ಲಿ ವೈದ್ಯರಾಗಿದ್ದು, ಇದೀಗ ವಿಧಾನ ಪರಿಷತ್ ಚುನಾವಣೆ ಮೂಲಕ ರಾಜಕೀಯಕ್ಕೆ ಬಂದಿದ್ದಾರೆ. ಈ ಮೂಲಕ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ಮಂದುವರೆದಿದೆ.

English summary
JD(S) supremo H. D. Deve Gowda grandson Suraj Revanna submitted his nomination papers as JD(S) candidate for legislative council election from Hassan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X