ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷನಿಗೆ ಜೀವಾವಧಿ ಶಿಕ್ಷೆ
ಹಾಸನ, ಡಿಸೆಂಬರ್ 19 : ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜ ಅವರಿಗೆ ಕೊಲೆ ಪ್ರಕರಣದಲ್ಲಿ ಹಾಸನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
7 ವರ್ಷಗಳ ಹಿಂದೆ ಹೊಳೆನರಸೀಪುರದಲ್ಲಿ ಹಾಡುಹಗಲೇ ಕೊಲೆ ನಡೆದಿತ್ತು. ಹಾಸನ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪಟ್ಟಿ ಸೇರಿ 6 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 6 ಮಂದಿ ತಂಡ ತ್ರಿಣೇಶ್ ಎಂಬ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿತ್ತು. ಹೊಳೆನರಸೀಪುರ ನಗರ ಠಾಣೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಸರ್ಕಾರದ ಪರ ಜಯರಾಂ ಶೆಟ್ಟಿ ವಾದ ಮಂಡಿಸಿದ್ದಾರೆ. ಹೊಳೆನರಸೀಪುರ ಪುರ ಸಭೆ ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್ ಮೂಖಂಡನಾದ ಪುಟ್ಟರಾಜ ಅಲಿಯಾಸ್ ಪುಟ್ಟಿಯವರಿಗೆ ಹಾಸನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.












Click it and Unblock the Notifications