ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾಡಿ ಘಾಟ್‌ನಲ್ಲಿ 10 ದಿನದೊಳಗೆ ಲಘು ವಾಹನ ಸಂಚಾರಕ್ಕೆ ಅವಕಾಶ: ರೇವಣ್ಣ

|
Google Oneindia Kannada News

ಹಾಸನ, ಸೆಪ್ಟೆಂಬರ್‌ 01: ಭಾರಿ ಮಳೆಯಿಂದ ಹಾನಿಗೊಳಗಾಗಿ ರಿಪೇರಿ ಕಾರ್ಯ ನಡೆಯುತ್ತಿದ್ದ ಶಿರಾಡಿ ಘಾಟ್ ರಸ್ತೆಯನ್ನು 10 ದಿನಗಳ ಒಳಗಾಗಿ ಲಘು ವಾಹನ ಸಂಚಾರಕ್ಕೆ ಮುಕ್ತ ಮಾಡಲಾಗುತ್ತದೆ ಎಂದು ಸಚಿವ ರೇವಣ್ಣ ಹೇಳಿದ್ದಾರೆ.

ಲೋಕೋಪಯೋಗಿ ಸಚಿವ ರೇವಣ್ಣ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಈ ವಿಷಯವನ್ನು ಹೇಳಿದರು. ಸ್ಥಳೀಯ ಅಧಿಕಾರಿಗಳು ಅಂಗೀಕರಿಸಿದ ಬಳಿಕವಷ್ಟೆ ಲಘು ವಾಹನಗಳು ಶಿರಾಡಿ ಘಾಟ್‌ ರಸ್ತೆ ಬಳಸಬಹುದಾಗಿದೆ ಎಂದು ಅವರು ಹೇಳಿದರು.

ಭಾರಿ ಮಳೆಯಿಂದಾಗಿ, ಭೂಕುಸಿತ ಉಂಟಾಗಿ ಶಿರಾಡಿ ಘಾಟ್ ರಸ್ತೆ ಬಹಳಷ್ಟು ಹಾನಿಯಾಗಿತ್ತು. ಹೀಗಾಗಿ ಒಂದು ತಿಂಗಳಿನಿಂದಲೂ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಲಾಗಿತ್ತು.

ಶಿರಾಡಿ ಘಾಟ್ ನಲ್ಲಿ ಕಾಸಿದ್ದವನೇ ಬಾಸ್, ಡಿಸಿ ಅಲ್ಲ ಅವ್ನ ಅಪ್ಪನಿಗೆ ಹೇಳುಶಿರಾಡಿ ಘಾಟ್ ನಲ್ಲಿ ಕಾಸಿದ್ದವನೇ ಬಾಸ್, ಡಿಸಿ ಅಲ್ಲ ಅವ್ನ ಅಪ್ಪನಿಗೆ ಹೇಳು

ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತ್ವರಿತವಾಗಿ ಕಾಮಗಾರಿ ಮುಗಿಸಲು ಸೂಚಿಸಿದ್ದು ಇನ್ನು 10 ದಿನಗಳ ಒಳಗಾಗಿ ಲಘು ವಾಹನ ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತವಾಗಲಿದೆ ಎಂದರು.

ಶಿರಾಡಿ ಘಾಟ್ ರಸ್ತೆ : 45ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತಶಿರಾಡಿ ಘಾಟ್ ರಸ್ತೆ : 45ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ

ಈಗ ಲಘುವಾಹನಗಳಿಗಷ್ಟೆ ಅನುಮತಿ

ಈಗ ಲಘುವಾಹನಗಳಿಗಷ್ಟೆ ಅನುಮತಿ

ರಿಪೇರಿ ಕಾರ್ಯ ಇನ್ನೂ ಮುಗಿದಿಲ್ಲ, ಹಾಗಾಗಿ 10 ದಿನಗಳ ಬಳಿಕವೂ ಕೇವಲ ಲಘು ವಾಹನಗಳಿಗೆ ಮಾತ್ರವೇಅವಕಾಶ ನೀಡಲಾಗುತ್ತದೆ. ವೋಲ್ವೋ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅವರು ಮಾಹಿತಿ ನೀಡಿದರು.

ಭಾರಿ ವಾಹನಗಳಿಂದ ಹಣ ವಸೂಲಿ

ಭಾರಿ ವಾಹನಗಳಿಂದ ಹಣ ವಸೂಲಿ

ಈ ಮಧ್ಯೆ ಶಿರಾಡಿ ಘಾಟ್‌ನಲ್ಲಿ ಭಾರಿ ವಾಹನಗಳಿಂದ ಹಣ ವಸೂಲಿ ಮಾಡಿ ರಸ್ತೆ ಬಳಸುವುದಕ್ಕೆ ಅನುಮತಿ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಹ ವೈರಲ್ ಆಗಿದೆ.

45ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ

45ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ

ಶಿರಾಡಿ ಘಾಟ್ ರಸ್ತೆಯಲ್ಲಿ 45ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿದು ರಸ್ತೆಗೆ ಭಾರಿ ಹಾನಿ ಆಗಿತ್ತು. ಹಲವೆಡೆ ರಸ್ತೆ ಬಿರುಕು ಬಿಟ್ಟು ವಾಹನ ಸಂಚಾರ ಇರಲಿ ಮಾನವ ಸಂಚಾರವೇ ಕಷ್ಟ ಎಂಬ ಪರಿಸ್ಥಿತಿ ಈ ಬಾರಿ ನಿರ್ಮಾಣವಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಶಿರಾಡಿ ಘಾಟ್ ಬಂದ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿ ಬಾರಿ ಮಳೆಗಾಲಕ್ಕೆ ಹೀಗೆ ರಸ್ತೆ ಬಂದ್ ಮಾಡುವುದು ಅಧಿಕಾರಿಗಳಿಗೆ ಸಾಮಾನ್ಯವಾಗಿದೆ ಎಂದು ದೂರಿದ್ದರು. #connectustomangalore ಹ್ಯಾಷ್‌ಟ್ಯಾಗ್ ಅಡಿಯಲ್ಲಿ ಟ್ವಿಟ್ಟರ್ ಆಂಧೋಲನವೂ ನಡೆದಿದೆ.

English summary
Light motor vehicles can use Shiradi Ghat road for 10 days says Public service minister HD Revanna. Shiradi Ghat road is under repair it has been destroyed by the heavy rain earlier.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X