Get Updates
Get notified of breaking news, exclusive insights, and must-see stories!

Prajwal Revanna: ದೇವೇಗೌಡರ ತವರು ನೆಲ ಹಾಸನದಲ್ಲಿ ಮೈತ್ರಿ ಕಿರಿಕ್, ಪ್ರಜ್ವಲ್ ಗೆಲ್ಲೋದು ಸುಲಭವಲ್ಲ!

ಹಾಸನ, ಮಾರ್ಚ್ 22: ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಪ್ರಯತ್ನ ಪಡುತ್ತಿವೆ. ಆದರೆ, ಬಿಜೆಪಿ ಟಿಕೆಟ್ ಹಂಚಿಕೆಯಿಂದಾಗಿ ಈಗಾಗಲೇ ಮೈತ್ರಿಯಲ್ಲಿ ಬಿರುಕು ಕಾಣಿಸುತ್ತಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳು ಜೆಡಿಎಸ್ ಪಾಲಿಗೆ ಎಂದು ಹೇಳಲಾಗಿದೆ. ಆದರೆ, ಇಲ್ಲಿಯೂ ಎರಡು ಪಕ್ಷಗಳ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಐದು ಬಾರಿ ಪ್ರತಿನಿಧಿಸಿದ್ದ ಹಾಸನ ಲೋಕಸಭೆ ಕ್ಷೇತ್ರದ ಹಾಲಿ ಸಂಸದ ಮತ್ತು ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿಯೇ ಜೆಡಿಎಸ್ ಹಿರಿಯ ನಾಯಕ ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಗುರುವಾರ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

Lok Sabha Election 2024 Local BJP leaders annoyed about JDS candidate Prajwal Revanna

ಹಾಸನದಲ್ಲೂ ಮೈತ್ರಿ ನಂಟು ಕಗ್ಗಂಟು!

ತಮ್ಮ ಕ್ಷೇತ್ರದಲ್ಲೇ ಹೀಗೆ ಅಪಸ್ಪರ ಎದುರಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪ ಸಮಾಧಾನ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಬಿಜೆಪಿ ಗೆಲುವಿಗೆ ಜೆಡಿಎಸ್ ಜೊತೆ ಬಿಜೆಪಿ ಕೆಲಸ ಮಾಡಲಿದೆ ಎಂಬ ಭರವಸೆ ನೀಡಿದ್ದಾರೆ.

ಭಿನ್ನಾಭಿಪ್ರಾಯದ ಬಗ್ಗೆ ಮಾತನಾಡಿರುವ ಪ್ರಜ್ವಲ್ ರೇವಣ್ಣ, "ನಾವು ಅವರ ಬೆಂಬಲ ಮತ್ತು ಆಶೀರ್ವಾದವನ್ನು ಕೋರಿದ್ದೇವೆ. ಇದು ಅವರದೇ ಚುನಾವಣೆ ಎಂಬಂತೆ ಕೆಲಸ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ನಾವು ನೋಡಲು ಬಯಸುತ್ತೇವೆ. ನಾನು ಅದಕ್ಕೆ ಕೊಡುಗೆ ನೀಡಲು ಬಯಸುತ್ತೇನೆ" ಎಂದು ಹೇಳಿದ್ದಾರೆ.

Lok Sabha Election 2024 Local BJP leaders annoyed about JDS candidate Prajwal Revanna

ಪ್ರಜ್ವಲ್ ರೇವಣ್ಣ ಬಗ್ಗೆ ಮಾಜಿ ಶಾಸಕ ಪ್ರೀತಂ ಗೌಡ ಅಸಮಾಧಾನ

ಹಾಸನ ಜೆಡಿಎಸ್‌ನ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಆದರೆ, ಸಂಸದ ಪ್ರಜ್ವಲ್ ರೇವಣ್ಣ ಸ್ಥಳೀಯ ಬಿಜೆಪಿ ನಾಯಕರಿಂದ ಅದರಲ್ಲೂ ಹಾಸನದ ಮಾಜಿ ಶಾಸಕ ಪ್ರೀತಂ ಗೌಡರಿಂದ ಪ್ರತಿರೋಧ ಎದುರಿಸುತ್ತಿದ್ದಾರೆ. "ಪ್ರೀತಂ ಗೌಡ ಸ್ವಲ್ಪ ಅಸಮಾಧಾನಗೊಂಡಿದ್ದರು. ನಾವು ಅದನ್ನು ಮಾತನಾಡಿದ್ದೇವೆ. ಒಮ್ಮೆ ಜಂಟಿ ಪ್ರಚಾರ ಸಭೆ ನಡೆದರೆ ಎಲ್ಲವೂ ಸರಿಹೋಗುತ್ತದೆ" ಎಂದು ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರೀತಂ ಗೌಡ ಅವರು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿ ನಿಲ್ಲಬೇಕು. ಆದರೆ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ನಾನು ಪಕ್ಷದ ಕಾರ್ಯಕರ್ತರಿಗೆ ಒತ್ತಡ ಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪರೋಕ್ಷವಾಗಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಸಾಧ್ಯವಿಲ್ಲ ಎಂಬುದು ಇದರ ಅರ್ಥ.

ಹಾಸನ ಜೆಡಿಎಸ್‌ನ ಭದ್ರಕೋಟೆ ಎಂದು ಗುರುತಿಸಲಾಗಿದೆ. ಈ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ನಾಲ್ಕು, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಎರಡು ಕ್ಷೇತ್ರಗಳನ್ನು ಹೊಂದಿದೆ. ಮಾಜಿ ಸಂಸದ ದಿವಂಗತ ಜಿ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಕಳೆದ ವರ್ಷ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಎಚ್ ಡಿ ರೇವಣ್ಣ ವಿರುದ್ಧ ಕೇವಲ 3,152 ಮತಗಳಿಂದ ಶ್ರೇಯಸ್ ಪಟೇಲ್ ಸೋಲು ಕಂಡಿದ್ದರು. ರೇವಣ್ಣ ಅವರಿಗೆ 88,108 (ಶೇಕಡಾ 47.51) ಬಂದಿದ್ದರೆ ಶ್ರೇಯಸ್ 84,951 (ಶೇ 45.81) ಮತಗಳನ್ನು ಪಡೆದಿದ್ದರು.

ಪ್ರಜ್ವಲ್ ಬದಲಿಗೆ ಹೊಸ ಅಭ್ಯರ್ಥಿಗಾಗಿ ಮನವಿ!

ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಮತ್ತೆ ಸ್ಪರ್ಧಿಸುವುದು ಸ್ಪಷ್ಟವಾದ ನಂತರ, ಸ್ಥಳೀಯ ಬಿಜೆಪಿ ಮುಖಂಡರು ಹೊಸ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂದು ಪಕ್ಷಕ್ಕೆ ಮನವಿ ಸಲ್ಲಿಸಿದರು. ಇದಕ್ಕೆ ಕಾರಣವೆಂದರೇ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಆಡಳಿತ ವಿರೋಧಿ ಹೋರಾಟ ನಡೆಸುತ್ತಿದ್ದಾರೆ ಎಂಬುದು ಅವರ ವಾದ.

ಕಳೆದ ವರ್ಷ ಹೊಳೆನರಸೀಪುರದಲ್ಲಿ ರೇವಣ್ಣ ವಿರುದ್ಧ ಸೋತಿದ್ದ ಬಿಜೆಪಿಯ ಜಿ.ದೇವರಾಜೇಗೌಡ ಮತ್ತು ಬೆಂಬಲಿಗರು, ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವುದು ದೂರದ ಮಾತು. ಬಿಜೆಪಿ ನಾಯಕರೇ ಈ ಬಗ್ಗೆ ಸೂಚನೆ ನೀಡಿದರೂ ಕೂಡ ಅವರು ಪ್ರಚಾರದಲ್ಲಿ ಭಾಗಿಯಾಗುವುದು ಅಸಾಧ್ಯ ಎನ್ನಲಾಗುತ್ತಿದೆ.

ಎಚ್‌ಡಿ ಕುಮಾರಸ್ವಾಮಿ ಅಥವಾ ಎಚ್‌ಡಿ ದೇವೇಗೌಡ ಹಾಸನದಿಂದ ಸ್ಪರ್ಧಿಸಲು ನಮ್ಮ ಅಭ್ಯಂತರವಿಲ್ಲ. ಪ್ರಜ್ವಲ್ ರೇವಣ್ಣ ಅವರು ಎದುರಿಸುತ್ತಿರುವ ಆಡಳಿತ ವಿರೋಧಿ ನೀತಿಯಿಂದ ಈ ಸ್ಥಾನವನ್ನು ಕಳೆದುಕೊಳ್ಳಬಹುದು ಎಂಬ ಕಾರಣಕ್ಕೆ ನಾವು ಅವರನ್ನು ವಿರೋಧೀಸುತ್ತಿದ್ದೇವೆ. ಅಲ್ಲದೆ, ಅವರ 2019 ರ ಆಯ್ಕೆಯ ವಿರುದ್ಧದ ಪ್ರಕರಣವು ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ ಎಂದು ಹೇಳುತ್ತಾರೆ ಬಿಜೆಪಿಯ ಜಿ.ದೇವರಾಜೇಗೌಡ.

ಇಂತಹ ಸ್ಥಿತಿಯಲ್ಲಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಕೂಡ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಮೈತ್ರಿ ಮಾಡಿಕೊಂಡು ಆಂತರಿಕ ಕಲಹದಲ್ಲೇ ಕಾಲ ಕಳೆಯುತ್ತಿರುವ ಬಿಜೆಪಿ ಆಡಳಿತರೂಢ ಕಾಂಗ್ರೆಸ್‌ಗೆ ಲಾಭ ಮಾಡಿಕೊಡುತ್ತಿರುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಇದೇ ವೇಳೆ ಎಲ್ಲವೂ ಸರಿಯಾಗುತ್ತದೆ ಎಂಬ ಭರವಸೆಯಲ್ಲಿ ಇದೆ ಜೆಡಿಎಸ್.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+