Prajwal Revanna V/s Preetham Gowda: ಹಾಸನದಲ್ಲಿ ಕೊನೆಯಾಗಲ್ವಾ ಪ್ರಜ್ವಲ್, ಪ್ರೀತಂ ಗೌಡ ಭಿನ್ನಾಭಿಪ್ರಾಯ?
ಹಾಸನ, ಏಪ್ರಿಲ್.07: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಇರುವುದು ಕಾಣಿಸುತ್ತಲೇ ಇದೆ. ಒಮದಲ್ಲ ಒಂದು ಕಡೆ ಅದು ವೇದಿಕೆ ಮೇಲೆಯೇ ಬಹಿರಂಗವಾಗುತ್ತಿದೆ. ಗೌಡರ ಕೋಟೆ ಹಾಸನದಲ್ಲಿಯೂ ಪ್ರಜ್ವಲ್ ರೇವಣ್ಣ ಮತ್ತು ಪ್ರೀತಂ ಗೌಡ ನಡುವಿನ ಭಿನ್ನಾಭಿಪ್ರಾಯ ಎಲ್ಲರಿಗೂ ಗೊತ್ತಿರುವುದೆ.
ಆದರೆ, ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ಎರಡು ಪಕ್ಷಗಳ ಕಾರ್ಯಕರ್ತರ ಮೇಲೆ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರದೆ ಇರದು. ಇದೇ ಕಾರಣಕ್ಕೆ ಬಿಜೆಪಿ ಎಚ್ಚೆತ್ತಿಕೊಂಡಿದ್ದು, ಇಬ್ರಬ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಬಿಜೆಪಿ ಹೈಕಮಾಂಡ್‌ಗೆ ದೂರು ನೀಡಿದ್ದಾರೆ.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹಾಸನದಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಬಿಜೆಪಿ ಮತ್ತು ಜೆಡಿಎಸ್‌ನ ತುರ್ತು ಸಮನ್ವಯ ಸಭೆ ನಡೆಸಿದ್ದಾರೆ. ಹೀಗಾಗಿ ಇಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಇವರೇ ಶಮನಗೊಳಿಸುತ್ತಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ಪ್ರೀತಂ ಗೌಡ ಗೈರುಹಾಜರಾಗಿದ್ದರು.ಇತ್ತೀಚೆಗೆ ಹಾಸನದಲ್ಲಿ ಬಿಜೆಪಿ-ಜೆಡಿಎಸ್ ನಡೆಸಿದ ಜಂಟಿ ಸಮಾವೇಶದಲ್ಲಿ ಪ್ರೀತಂ ಗೌಡ ಕಾಣಿಸಿಕೊಂಡಿರಲಿಲ್ಲ. ಹೀಗಾಗಿಯೇ ಎಚ್‌ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್‌ಗೆ ದೂರವಾಣಿ ಮೂಲಕ ದೂರು ನೀಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮಾಜಿ ಶಾಸಕ ಪ್ರೀತಂಗೌಡ ಅವರ ಗೈರುಹಾಜರಿಯನ್ನು ರಾಧಾಮೋಹನ್ ದಾಸ್ ಅಗರ್‌ವಾಲ್ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರೀತಂ ಗೌಡ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯೂ ಆಗಿದ್ದಾರೆ. ಹೀಗಾಗಿ ಅವರಿಗೆ ಅವರದ್ದೇ ಆದ ಜವಾಬ್ದಾರಿಗಳು ಇವೆ ಎಂದಿದ್ದಾರೆ.

ಭಾನುವಾರ ಬಿಜೆಪಿ ವರಿಷ್ಠರ ನಿರ್ದೇಶನದ ಮೇರೆಗೆ ಮೈಸೂರಿನಲ್ಲಿ ರಾಧಾಮೋಹನ್ ದಾಸ್ ಅಗರ್ವಾಲ್ ಸಮ್ಮುಖದಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಪ್ರೀತಂ ಗೌಡ ಭೇಟಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಸಮನ್ವಯ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಕೋರಿಕೆಯ ಮೇರೆಗೆ ಭಿನ್ನಾಭಿಪ್ರಾಯವನ್ನು ಪರಿಹರಿಸಲು ಅಗರ್ವಾಲ್ ನಿರ್ಧರಿಸಿದ್ದಾರೆ.
ಇನ್ನು, ಸಭೆಯಲ್ಲಿ ಪ್ರೀತಂ ಗೌಡ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಹೊರಿಸಿದ ಆರೋಪಗಳನ್ನು ರಾಧಾಮೋಹನ್ ದಾಸ್ ಅಗರ್ವಾಲ್ ತಳ್ಳಿಹಾಕಿದ್ದಾರೆ. ಫೋನ್ ಮೂಲಕವೂ ಪ್ರೀತಂ ಗೌಡ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಪ್ರಜ್ವಲ್ ವಿಫಲರಾಗಿದ್ದಾರೆ ಎಂದು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಪ್ರಜ್ವಲ್ ರೇವಣ್ಣ ಅವರು ಪ್ರೀತಂ ಗೌಡ ಅವರನ್ನು ನಿರ್ಲಕ್ಷಿಸಿ ಅವರ ನಿಕಟವರ್ತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನ್ಯಾಯಸಮ್ಮತವಲ್ಲ. ಬಿಜೆಪಿ ನಾಯಕತ್ವವು ಯಾವುದೇ ಪದಾಧಿಕಾರಿಗಳನ್ನು ಅಥವಾ ನಾಯಕರನ್ನು ಎಂದಿಗೂ ನಿರ್ಲಕ್ಷಿಸಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ಭವಿಷ್ಯದಲ್ಲಿ ಪ್ರೀತಂ ಗೌಡ ಅವರು ಪ್ರಜ್ವಲ್ ರೇವಣ್ಣ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇದರ ಜೊತೆಗೆ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮುಂದುವರೆಯಲಿದೆ ಎಂಬ ಪ್ರಶ್ನೆಯೊಂದಕ್ಕೆ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಪಕ್ಷವು ಅಂತಹ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications