ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಜ್ವಲ್ ರೇವಣ್ಣಗೆ ಜಯ; ಎ. ಮಂಜು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

|
Google Oneindia Kannada News

ಹಾಸನ, ಜನವರಿ 17 : ಹಾಸನ ಕ್ಷೇತ್ರದ ಸಂಸದ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೆಮ್ಮದಿ ನೀಡಿದೆ. ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಶುಕ್ರವಾರ ಕರ್ನಾಟಕ ಹೈಕೋರ್ಟ್ 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಬಿಜೆಪಿಯ ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತು. ಎ. ಮಂಜು ಅರ್ಜಿ ಸಲ್ಲಿಸುವಾಗ ಪ್ರಮಾಣ ಪತ್ರವನ್ನು ಸಲ್ಲಿಸಿರಲಿಲ್ಲ.

ಪ್ರಜ್ವಲ್ ಸಂಸತ್ ಸ್ಥಾನ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಂಜುಪ್ರಜ್ವಲ್ ಸಂಸತ್ ಸ್ಥಾನ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಂಜು

ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಏಕ ಸದಸ್ಯ ಪೀಠ ಎ. ಮಂಜು ಸಲ್ಲಿಸಿದ್ದ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕರಿಸಲಾಗಿದೆ ಎಂದು ಹೇಳಿತು. ಚುನಾವಣಾ ಅಕ್ರಮದ ಆರೋಪ ಮಾಡುವಾಗ ಅರ್ಜಿದಾರರು ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿತು.

ಹಾಸನ : ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರಹಾಸನ : ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರ

ಅರ್ಜಿಯ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರ ವಾದ ಮಂಡನೆ ಮಾಡಿದ್ದ ವಕೀಲ ಎಂ. ಕೇಶವ ರೆಡ್ಡಿ, ಅರ್ಜಿದಾರ ಎ. ಮಂಜು ನಿಯಮಾನುಸಾರ ದಾಖಲೆ ಸಲ್ಲಿಸಿಲ್ಲ. ಅರ್ಜಿಯನ್ನು ತಿರಸ್ಕರಸಬೇಕು ಎಂದು ವಾದಿಸಿದ್ದರು. ನ್ಯಾಯಾಲಯ ವಾದವನ್ನು ಪುರಸ್ಕರಿಸಿತು.

ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಸಮನ್ಸ್‌: ಸಂಸದ ಸ್ಥಾನಕ್ಕೆ ಆಪತ್ತು?ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಸಮನ್ಸ್‌: ಸಂಸದ ಸ್ಥಾನಕ್ಕೆ ಆಪತ್ತು?

ಸುಳ್ಳು ಮಾಹಿತಿಯನ್ನು ನೀಡಿದ್ದಾರೆ

ಸುಳ್ಳು ಮಾಹಿತಿಯನ್ನು ನೀಡಿದ್ದಾರೆ

ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಬಿಜೆಪಿ ಅಭ್ಯರ್ಥಿ ಎ. ಮಂಜು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಅರ್ಜಿಯಲ್ಲಿನ ಆರೋಪವೇನು?

ಅರ್ಜಿಯಲ್ಲಿನ ಆರೋಪವೇನು?

ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿಗಳಿಕೆ ಮಾಡಿದ್ದಾರೆ. ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ್ದಾರೆ. ಹಲವು ಕಂಪನಿಗಳಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆದರೆ, ಆಸ್ತಿ ಘೋಷಣೆ ಮಾಡುವಾಗ ಪ್ರಮಾಣ ಪತ್ರದಲ್ಲಿ ಇದನ್ನು ಉಲ್ಲೇಖಿಸಿಲ್ಲ. ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಸರ್ಕಾರಿ ಹಣ ಖಾತೆಗೆ ಜಮಾ ಆಗಿದೆ

ಸರ್ಕಾರಿ ಹಣ ಖಾತೆಗೆ ಜಮಾ ಆಗಿದೆ

ಪ್ರಜ್ವಲ್ ರೇವಣ್ಣ ಹೆಸರಿಗೆ ಸರ್ಕಾರಿ ಆಸ್ತಿಯನ್ನು ರಿಜಿಸ್ಟರ್ ಮಾಡಿಸಲಾಗಿದೆ. 1.88 ಕೋಟಿ ಹಣವನ್ನು ಸರ್ಕಾರ ಅವರ ಖಾತೆಗೆ ವರ್ಗಾವಣೆ ಮಾಡಿದೆ. ಇದನ್ನು ಚುನಾವಣಾ ಅಫಿಡೆವಿಟ್‌ನಲ್ಲಿ ಮುಚ್ಚಿಟ್ಟಿದ್ದಾರೆ. ತಪ್ಪು ಮಾಹಿತಿ ನೀಡಿ ಚುನಾವಣಾ ಆಯೋಗ ಮತ್ತು ಜನರ ದಾರಿ ತಪ್ಪಿಸಿದ್ದಾರೆ ಎಂದು ಅರ್ಜಿಯಲ್ಲಿ ದೂರಿದ್ದರು.

ಹಾಸನ ಕ್ಷೇತ್ರದಲ್ಲಿ ಸೋಲು

ಹಾಸನ ಕ್ಷೇತ್ರದಲ್ಲಿ ಸೋಲು

2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದಲ್ಲಿ 6,75,512 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿ ಎ. ಮಂಜು 5,33,389 ಮತಗಳನ್ನು ಪಡೆದು ಸೋಲು ಕಂಡಿದ್ದರು. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಹಾಸನ ಒಂದು ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಜಯಗಳಿಸಿತ್ತು.

English summary
In a major relief to Hassan MP and JD(S) leader Prajwal Revanna Karnataka high court dismissed the petition filed by BJP leader A.Manju. Manju lost 2019 lok sabha election against Prajwal Revanna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X