ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿರಾಡಿ ಘಾಟ್ ರಸ್ತೆ : 45ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ

By Gururaj
|
Google Oneindia Kannada News

ಹಾಸನ, ಆಗಸ್ಟ್ 21 : ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. 45ಕ್ಕೂ ಹೆಚ್ಚು ಕಡೆಗಳಲ್ಲಿ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದಿದೆ.

ನಾಲ್ಕು ಜೆಸಿಬಿ, ಎರಡು ಹಿಟಾಚಿ ಯಂತ್ರಗಳ ಸಹಾಯದಿಂದ ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಅಪಾಯಕಾರಿ ಪ್ರದೇಶದಲ್ಲಿ ಕಬ್ಬಿಣದ ತಡೆಗೋಡೆ ನಿರ್ಮಾಣ ಕೆಲಸವೂ ಸಾಗುತ್ತಿದೆ.

ಮಳೆ, ಭೂ ಕುಸಿತ : ಎಲ್ಲಾ ವಾಹನಗಳಿಗೆ ಶಿರಾಡಿ ಘಾಟ್ ರಸ್ತೆ ಬಂದ್ ಮಳೆ, ಭೂ ಕುಸಿತ : ಎಲ್ಲಾ ವಾಹನಗಳಿಗೆ ಶಿರಾಡಿ ಘಾಟ್ ರಸ್ತೆ ಬಂದ್

ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ 2 ಕಡೆ, ಚೌಡೇಶ್ವರಿ ದೇವಸ್ಥಾನದ ಬಳಿ 2 ಕಡೆ ಗುಡ್ಡ ಕುಸಿದಿದೆ. ಕೆಂಪುಹೊಳೆ ಹರಿಯುವ ಪ್ರದೇಶದಲ್ಲಿ 19 ಕಡೆ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ನೀರಿನ ಜೊತೆ ಗುಡ್ಡದಿಂದ ಮಣ್ಣು ಸಹ ಹರಿದು ಬರುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿದೆ.

More than 45 landslide case reported in Shiradi Ghat road

ಸಕಲೇಶಪುರ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಪ್ರಕರಣಗಳು ನಡೆಯುತ್ತಲೇ ಇವೆ. ಆದ್ದರಿಂದ, ಬೆಂಗಳೂರು-ಮಂಗಳೂರು ನಡುವಿನ ಸಂಚಾರವನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿರ್ಬಂಧಿಸಲಾಗಿದೆ.

ಶಿರಾಡಿ ಘಾಟ್‌ನಲ್ಲಿ ಮತ್ತೆ ವಾಹನ ಸಂಚಾರ ಬಂದ್?ಶಿರಾಡಿ ಘಾಟ್‌ನಲ್ಲಿ ಮತ್ತೆ ವಾಹನ ಸಂಚಾರ ಬಂದ್?

'ಮುಂದಿನ ಆದೇಶದ ತನಕ ಯಾವುದೇ ವಾಹನ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವಂತಿಲ್ಲ' ಎಂದು ಸಕಲೇಶಪುರದ ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಾರೆ.

ಶಿರಾಡಿ ಘಾಟ್‌ ಬಂದ್‌: ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಟ್ರಾಫಿಕ್‌ ಜಾಮ್‌ಶಿರಾಡಿ ಘಾಟ್‌ ಬಂದ್‌: ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಟ್ರಾಫಿಕ್‌ ಜಾಮ್‌

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ಗಳು ಶಿರಾಡಿ ಘಾಟ್‌ಗೆ ಭೇಟಿ ನೀಡಿದ್ದು, ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಮಳೆ ನಿಂತ ಬಳಿಕ ಮಣ್ಣನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೆಂಪುಹೊಳೆ ಹರಿಯುವ ಅಂಚಿನಲ್ಲಿ ಗುಡ್ಡ ಕುಸಿತ ಕಡಿಮೆ ಮಾಡಲು ಮರಳು ಮೂಟೆಗಳನ್ನು ಹಾಕಲಾಗುತ್ತಿದೆ. ಹೆಚ್ಚು ಗುಡ್ಡ ಕುಸಿದಿರುವ ಪ್ರದೇಶದಲ್ಲಿ ಏಕ ಮುಖ ಸಂಚಾರದ ವ್ಯವಸ್ಥೆ ಮಾಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

English summary
All vehicle banned in Shiradi Ghat road till further order. More than 45 landslide case reported after heavy rain. Shiradi Ghat main road which will connect Bengaluru and Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X