Elephant Arjuna Death: ಕಾಡಾನೆ ಕಾರ್ಯಾಚರಣೆ ವೇಳೆ ಅವಘಡ: ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು

ಹಾಸನ, ಡಿಸೆಂಬರ್‌ 04: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದ್ದು, ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ.

ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಅರಣ್ಯದಲ್ಲಿ ಕಾಡಾನೆ ಹಿಡಿದು, ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಸಮಯದಲ್ಲಿ ಕಾಡಾನೆ ದಾಳಿ ಆರಂಭಿಸಿದೆ. ಒಂಟಿಸಲಗ ದಾಳಿ ಮಾಡುತ್ತಿದ್ದಂತೆಯೇ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ.

Mysore Dasara Elephant Arjuna Died By Wild Elephant Attack During Forest Dept Operation In Sakleshpur

ಆದರೆ ಅರ್ಜುನ ಹೋರಾಕ್ಕಿಳಿದಿದೆ. ಎರಡು ಆನೆಗಳು ಕಾದಾಟ ಆರಂಭಿಸುತ್ತಿದ್ದಂತೆಯೇ ಅರ್ಜುನನ ಮಾವುತರು ಮೇಲಿನಿಂದ ಇಳಿದು ಓಡಿದ್ದಾರೆ. ಕೊನೆಯಲ್ಲಿ ಕಾಡಾನೆ ಅರ್ಜುನ ಹೊಟ್ಟೆಯ ಭಾಗಕ್ಕೆ ತಿವಿದಿದೆ. ಆನೆಗಳಲ್ಲಿ ಕಾದಾಟದಲ್ಲಿ ಅರ್ಜುನ ಸಾವನ್ನಪ್ಪಿದೆ.

ಹಾಸನ ಜಿಲ್ಲೆಯ ಮಲೆನಾಡು ಭಾಗದ ಜನರ ನಿದ್ದಗೆಡಿಸಿರುವ ಕಾಡಾನೆ ಉಪಟಳಕ್ಕೆ ಬ್ರೇಕ್‌ ಹಾಕಲು ನವೆಂಬರ್ 24 ರಿಂದ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾಡಾನೆ ಸ್ಥಳಾಂತರ ಕಾರ್ಯಾಚರಣೆ ವೇಳೆ ಇಂದು ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Mysore Dasara Elephant Arjuna Died By Wild Elephant Attack During Forest Dept Operation In Sakleshpur

ಕುಮಾರಸ್ವಾಮಿ ಸಂತಾಪ

ಅರ್ಜುನ ಸಾವಿನ ಬಗ್ಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ನೋವು ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು.

ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ. ಅರ್ಜುನ ಮಾತ್ರ ಒಂಟಿ ಸಲಗದ ಜೊತೆ ವಿರೋಚಿತವಾಗಿ ಸೆಣಸಾಡಿತ್ತು.

ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ. ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜೊತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ. ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+