ಆಗಸ್ಟ್ 11ರಿಂದ 13ರವರೆಗೆ ರಾಷ್ಟ್ರಮಟ್ಟದ ಜೈನ ಮಹಿಳಾ ಸಮಾವೇಶ
ಶ್ರವಣಬೆಳಗೊಳ (ಹಾಸನ), ಆಗಸ್ಟ್ 8: ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ-2018ರ ಅಂಗವಾಗಿ ಆಗಸ್ಟ್ 11ರಿಂದ 13ರವರೆಗೆ ಶ್ರವಣಬೆಳಗೊಳದಲ್ಲಿ ಮೂರು ದಿನಗಳ ಕಾಲ ರಾಷ್ಟ್ರಮಟ್ಟದ ಜೈನ ಮಹಿಳಾ ಸಮಾವೇಶ ಆಯೋಜಿಸಲಾಗಿದೆ.
ಸಂಸ್ಕೃತಿ ರಕ್ಷಣೆ ನಮ್ಮ ಕರ್ತವ್ಯ ಎಂಬ ಧ್ಯೇಯ ವಾಕ್ಯದೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ಬಾಹುಬಲಿ ಮಹಾಸ್ತಕಾಭಿಷೇಕ ಮಹೋತ್ಸವ ರಾಷ್ಟ್ರ ಮಟ್ಟದ ದಿಗಂಬರ ಜೈನ ವ್ಯವಸ್ಥಾಪಕ ಸಮಿತಿಯು ಈ ಸಮ್ಮೇಳನ ಆಯೋಜಿಸಿದ್ದು, ಶ್ರವಣಬೆಳಗೊಳದ ಗೊಮ್ಮಟನಗರದಲ್ಲಿ ನಿರ್ಮಿಸಿರುವ ಪಟ್ಟಮಹಾದೇವಿ ಶಾಂತಲಾ ಸಭಾಮಂಟಪದಲ್ಲಿ ನಡೆಯಲಿದೆ.

ಸಮ್ಮೇಳನದ ಅಧ್ಯಕ್ಷರನ್ನಾಗಿ ಧರ್ಮಸ್ಥಳದ ಹೇಮಾವತಿ ವೀರೇಂದ್ರ ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ಆ.11ರಂದು ಬೆಳಗ್ಗೆ 10.15ಕ್ಕೆ ಆಚಾರ್ಯರು ಮತ್ತು ಮುನಿಶ್ರೀಗಳ ಸಾನ್ನಿಧ್ಯದಲ್ಲಿ ಪುದುಚೆರಿಯ ರಾಜ್ಯಪಾಲರಾದ ಡಾ. ಕಿರಣ್ ಬೇಡಿ ಅವರು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಸಚಿವೆ ಉಮಾಶ್ರೀ ಅವರು ವಿದ್ಯಾರ್ಥಿನಿ ನಿಲಯದ ಉದ್ಘಾಟನೆ ನೆರವೇರಿಸುವರು.
ಹರಿಯಾಣ ಸಚಿವೆ ಕವಿತಾ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ತಾರಾ ಎ.ಮಂಜು ಮತ್ತು ಭೋಪಾಲದ ಡಾ. ಸುಧಾ ಮಲೈಯಾ ಅವರು ಮಾಧವಿ-4 ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಮ್ಮೇಳನದ ಮೂರೂ ದಿನಗಳು ವಿವಿಧ ವಿಚಾರ ಗೋಷ್ಠಿಗಳು ನಡೆಯಲಿವೆ.
ಸಾಧಕ ಮಹಿಳೆಯರಿಗೆ ಆದರ್ಶ ಮಹಿಳೆ ಪ್ರಶಸ್ತಿ
ಸಮ್ಮೇಳನದ ಕೊನೆಯ ದಿನವಾದ ಆ.13ರಂದು ಬೆಳಗ್ಗೆ 11.30ಕ್ಕೆ ವಿವಿಧ ವರ್ಗಗಳ ಸಾಧಕ ಮಹಿಳೆಯರಿಗೆ ಆದರ್ಶ ಮಹಿಳೆ ಪ್ರಶಸ್ತಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಜೈನ ಮಹಿಳೆಯರಿಗೆ ಆದರ್ಶ ಜೈನ ಮಹಿಳೆ ಪ್ರಶಸ್ತಿ ಹಾಗೂ ಜೈನ ಸಮಾಜದ ಅಭ್ಯುದಯಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ದೇಶದ ವಿವಿಧ ಜೈನ ಮಹಿಳಾ ಸಂಸ್ಥೆಗಳಿಗೆ ಗೌರವ ಪುರಸ್ಕಾರ ಪ್ರದಾನ ಸಮಾರಂಭ ನಡೆಯಲಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ, ಡಾ. ಕಮಲಾ ಹಂಪನಾ, ಸಾಲುಮರದ ತಿಮ್ಮಕ್ಕ ಸೇರಿದಂತೆ 12 ಮಹಿಳೆಯರಿಗೆ ಆದರ್ಶ ಮಹಿಳೆ ಪ್ರಶಸ್ತಿ, ಭಾರತೀಯ ಸೇನೆಯ ಮೇಜರ್ ನೀಲಂ ಘೋರವಾಡೆ, ಸಾಹಿತಿ ಸುನಿತಾ ಜೈನ್, ಡಾ. ಸರಯೂ ದೋಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಇಪ್ಪತ್ತೆಂಟು ಜೈನ ಮಹಿಳೆಯರಿಗೆ ಆದರ್ಶ ಜೈನ ಮಹಿಳೆ ಪ್ರಶಸ್ತಿ ಹಾಗೂ ಒಂಬತ್ತು ಜೈನ ಮಹಿಳಾ ಸಂಸ್ಥೆಗಳಿಗೆ ಗೌರವ ಪುರಸ್ಕಾರ ಪ್ರದಾನ ಮಾಡಲಾಗುವುದು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications