ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನ : ಮತ್ತೊಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭ

|
Google Oneindia Kannada News

ಹಾಸನ, ಮೇ 17 : ಹಾಸನ ಜಿಲ್ಲೆಯಲ್ಲಿ ಮತ್ತೊಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭವಾಗಿದೆ. ಈ ಶೈಕ್ಷಣಿಕ ವರ್ಷದಿಂದಲೇ 5 ಕೋರ್ಸ್ ಆರಂಭವಾಗಲಿದ್ದು, 300 ವಿದ್ಯಾರ್ಥಿಗಳು ಪ್ರವೇಶವನ್ನು ಪಡೆಯಬಹುದಾಗಿದೆ.

ಹಾಸನ ಜಿಲ್ಲೆಯ ಈ ಶೈಕ್ಷಣಿಕ ವರ್ಷದಿಂದಲೇ ಮೊಸಳೆ ಹೊಸಳ್ಳಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭವಾಗಲಿದೆ. ದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಸಮಿತಿ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಿದೆ.

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಶಿರಾದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಆರಂಭವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಶಿರಾದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಆರಂಭ

5 ಕೋರ್ಸ್‍ಗಳನ್ನು ಹೊಸ ಇಂಜಿನಿಯರಿಂಗ್ ಕಾಲೇಜಿಗೆ ಮಂಜೂರು ಮಾಡಲಾಗಿದೆ. ಬೋಧಕ/ ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.
ರಂಗಸ್ವಾಮಿ ಅವರನ್ನು ಪ್ರಾಂಶುಪಾಲರಾಗಿ ನೇಮಕ ಮಾಡಲಾಗಿದೆ.

5 ಸಾವಿರ ಉಪನ್ಯಾಸಕ, 708 ಪ್ರಾಂಶುಪಾಲ ಹುದ್ದೆಗೆ ಅರ್ಜಿ ಹಾಕಿ5 ಸಾವಿರ ಉಪನ್ಯಾಸಕ, 708 ಪ್ರಾಂಶುಪಾಲ ಹುದ್ದೆಗೆ ಅರ್ಜಿ ಹಾಕಿ

New engineering

ಬಿ.ಇ., ಸಿ.ವಿಲ್, ಮೆಕಾನಿಕಲ್, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಸೈನ್ಸ್ ಕೋರ್ಸ್‍ಗಳಿಗೆ ತಲಾ 60 ವಿದ್ಯಾರ್ಥಿಗಳಂತೆ ಮೊದಲ ವರ್ಷಕ್ಕೆ 300 ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಖಾಸಗಿ ಎಂಜಿನಿಯರಿಂಗ್ ಕಾಲೇಜು ಶುಲ್ಕ ಮತ್ತೊಮ್ಮೆ ಹೆಚ್ಚಲಿದೆಯೇ?ಖಾಸಗಿ ಎಂಜಿನಿಯರಿಂಗ್ ಕಾಲೇಜು ಶುಲ್ಕ ಮತ್ತೊಮ್ಮೆ ಹೆಚ್ಚಲಿದೆಯೇ?

ಕಾಲೇಜು ಪ್ರಾರಂಭಿಕ ವರ್ಷದಲ್ಲಿ ಅಗತ್ಯವಿರುವ 14 ಮಂದಿ ಬೋಧಕ ಸಿಬ್ಬಂದಿಗಳನ್ನು ಹಾಸನ, ಮಂಡ್ಯ ರಾಮನಗರ ಸೇರಿದಂತೆ ವಿವಿಧ ಕಾಲೇಜುಗಳಿಂದ ನಿಯೋಜಿಸಲಾಗಿದ್ದು, ಶೈಕ್ಷಣಿಕ ವರ್ಷದ ಪಠ್ಯ ಹಾಗೂ ಪ್ರಾಯೋಗಿಕ ಬೋಧನೆಗಳಿಗೆ ಯಾವುದೇ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಈ ಕಾಲೇಜು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ತಿಕ ವಿಶ್ವವಿದ್ಯಾನಿಲಯದ ಅಂಗ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲಿದೆ. ವಿದ್ಯಾರ್ಥಿಗಳು ಕೌನ್ಸಿಲಿಂಗ್ ವೇಳೆ ಮೇಲ್ಕಂಡ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಹುದಾಗಿದೆ.

English summary
New engineering college open in Hosahalli, Hassan, Karnataka from 2019-20 academic year. 300 students can join for 5 course.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X