Prajwal Revanna Case: ಹಾಸನದ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡ: ಸಂತ್ರಸ್ತರ ಜೊತೆ ಸ್ಥಳ ಮಹಜರು
ಹಾಸನ, ಮೇ 04: ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದ್ದು, ಎಸ್‌ಐಟಿ ತಂಡ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತ ಮಹಿಳೆಯೊಂದಿಗೆ ಆಗಮಿಸಿರುವ ಎಸ್‌ಐಟಿ ತಂಡ ಸ್ಥಳ ಮಹಜರು ನಡೆಸಿದ್ದಾರೆ.
ಸಂತ್ರಸ್ತ ಮಹಿಳೆಯೊಂದಿಗೆ ಡಿವೈಎಸ್‌ಪಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಆಗಮಿಸಿದ್ದು, ಎಸ್‌ಐಟಿ ತಂಡ ಪಂಚನಾಮೆ ಬಳಿಕ ಸ್ಥಳದಲ್ಲಿಯೇ ಸಂತ್ರಸ್ತರ ಮಹಿಳೆಯರ ಹೇಳಿಕೆ ಪಡೆಯುವ ಸಾಧ್ಯತೆ ಇದೆ.

ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿರುವ ಹಿನ್ನೆಲೆಯಲ್ಲಿ ಮನೆಯೊಳಗೆ ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್ ರೂಂನಲ್ಲಿ ಸ್ಥಳ ಮಹಜರು ನಡೆಯಲಿದೆ. ಹಾಸನದ ಎಂಪಿ ಹೌಸ್ ಹಾಗೂ ಕೆಲವು ಕಡೆಯಲ್ಲಿ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ ರೇವಣ್ಣ ನಿವಾಸ ಸ್ಥಳ ಮಹಜರು ಬಳಿಕ ಉಳಿದ ಸ್ಥಳಗಳಲ್ಲಿಯೂ ಸಂತ್ರಸ್ತ ಮಹಿಳೆಯೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ಇನ್ನು ಹೊಳೆನರಸೀಪುರ ಪಟ್ಟಣದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದ್ದು, ರೇವಣ್ಣ ಪತ್ನಿ ಭವಾನಿ ರೇವಣ್ಣ ಮನೆಯೊಳಗೆ ಇದ್ದಾರೆ. ಅಲ್ಲದೇ ಮಾಜಿ ಸಚಿವ ರೇವಣ್ಣ ಪರವಾದ ವಕೀಲರು ಹಾಗೂ ಕೆಲ ಜೆಡಿಎಸ್ ಮುಖಂಡರು ಕೂಡ ನಿವಾಸದ ಬಳಿ ಆಗಮಿಸಿದ್ದಾರೆ. ಸದ್ಯ ಎಸ್‌ಐಟಿ ತಂಡ ತನಿಖೆ ಮುಂದುವರಿಸಿದೆ.
ಹೆಚ್.ಡಿ ರೇವಣ್ಣಗೆ ಲುಕ್‌ಔಟ್ ನೋಟಿಸ್
ಈ ಪ್ರಕರಣದಲ್ಲಿ ಎ1 ಆರೋಪಿ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಎ2 ಆರೋಪಿ ಪ್ರಜ್ವಲ್ ರೇವಣ್ಣ ಎಂದು ದಾಖಲಿಸಲಾಗಿದೆ. ಆದರೆ ಪ್ರಕರಣ ಸಂಬಂಧ ಈವರೆಗೂ ಯಾರೋಬ್ಬ ಆರೋಪಿಯ ಬಂಧನವಾಗಿಲ್ಲ. ಪ್ರಕರಣದ ಎ1 ಆರೋಪಿ ಹಾಗೂ ಎ2 ಆರೋಪಿ ಬಂಧನವಾಗಿಲ್ಲ. ಎ2 ಆರೋಪಿ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದೇ ಜರ್ಮಿನಿಯಲ್ಲಿರುವ ಕಾರಣ ಲುಕ್‌ಔಟ್ ನೋಟಿಸ್ ನೀಡಲಾಗಿತ್ತು. ಇದೀಗ ಹೆಚ್.ಡಿ ರೇವಣ್ಣ ಕೂಡ ದಿಢೀರ್ ನಾಪತ್ತೆ ಆಗಿದ್ದು, ವಿಚಾರಣೆಗೆ ನೋಟಿಸ್ ನೀಡಿದರೂ ಯಾವುದೇ ಉತ್ತರವಿಲ್ಲ. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಎಸ್‌ಐಟಿ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ.












Click it and Unblock the Notifications