Hassan Tragedy: ಹಾಸನ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್: ಮೃತರ ಕುಟುಂಬಗಳು, ಗಾಯಾಳುಗಳಿಗೆ ಪರಿಹಾರ ಘೋಷಣೆ
PM Modi on Hassan Tragedy: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ದುರ್ಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ದುರಂತ ನಡೆದಿದೆ. ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಟ್ರಕ್ ಹರಿದು ಘೋರ ದುರಂತ ಸಂಭವಿಸಿದೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇದೀಗ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.
ಹಾಸನದಲ್ಲಿ ಸಂಭವಿಸಿದ ದುರಂತ ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂಬುದು ನನ್ನ ಆಶಯ. ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನು ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ ಎನ್ನುವ ಮಾಹಿತಿ ಇದೆ.
ಗಣೇಶ ಮೆರವಣಿಗೆ ಸಾಗುತ್ತಿದ್ದ ವೇಳೆ ರಸ್ತೆಯ ಒಂದು ಬದಿಯಿಂದ ದಿಢೀರ್ ಡಿವೈಡರ್ ಮೇಲೆ ಟ್ರಕ್ ಹರಿದಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಟ್ರಕ್ ಹರಿದಿದ್ದು, ಟ್ರಕ್‌ನಡಿ ಸಿಲುಕಿದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ 5 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
The mishap in Hassan, Karnataka, is heart-rending. In this tragic hour, my thoughts are with the bereaved families. I hope those who have been injured recover at the earliest.
— PMO India (@PMOIndia) September 13, 2025
An ex-gratia of Rs. 2 lakh from PMNRF would be given to the next of kin of each deceased. The injured…
ಇದೀಗ ಮೃತ ಗುರು ಪತ್ತೆಯಾದ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ ಐವರು ಹೊಸಹಳ್ಳಿ ಗ್ರಾಮದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಆಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೃತರ ಗುರುತು ಪತ್ತೆ: ಮೃತರನ್ನು ಚಿಕ್ಕಮಗಳೂರು ಮಣೆನಹಳ್ಳಿ ಮರ್ಲೆ ಗ್ರಾಮದ ಸುರೇಶ್, ಹೊಳೆನರಸೀಪುರ ತಾಲ್ಲೂಕಿನ ರಾಜೇಶ್ (17), ಕೆ.ಬಿ.ಪಾಳ್ಯ, ಡನಾಯಕನಹಳ್ಳಿ ಕೊಪ್ಪಲು ಗ್ರಾಮದ ಈಶ್ವರ (17), ಮುತ್ತಿಗೆಹೀರಳ್ಳಿ ಗ್ರಾಮದ ಗೋಕುಲ (17), ಕಬ್ಬಿನಹಳ್ಳಿ ಗ್ರಾಮದ ಕುಮಾರ್ (25), ಪ್ರವೀಣ್ (25), ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ ಮಿಥುನ್ (23), ಹಾಸನ ತಾಲ್ಲೂಕು ಬಂಟರಹಳ್ಳಿ ಗ್ರಾಮದ ಪ್ರಭಾಕರ್ (55), ಬಳ್ಳಾರಿ ಮೂಲದ ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಮೃತದೇಹಗಳನ್ನು ಹಿಮ್ಸ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಇಂದು (ಸೆಪ್ಟೆಂಬರ್ 13) ಮರಣೋತ್ತರ ಪರೀಕ್ಷೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯಾವಗಿದೆ.
ಈಗಾಗಲೇ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5,00,000 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದಾರೆ. ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು ಈ ದುರಂತ ಸಂಭವಿಸಿದೆ. ಇತ್ತೀಚೆಗಷ್ಟೇ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲೂ ತೂರಾಟ ನಡೆದಿದ್ದು, ಈ ಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಈ ಭೀಕರ ದುರಂತ ನಡೆದಿದೆ. ಇನ್ನು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications