ಮೋದಿ ಜೀವಕ್ಕೆ ಗಂಡಾಂತರವಿದೆ ಎಂದ ಬ್ರಹ್ಮಾಂಡ ಗುರೂಜಿ
ಹಾಸನ, ಅಕ್ಟೋಬರ್ 12: ಹಾಸನಾಂಬಾ ದೇಗುಲ ದರ್ಶನಕ್ಕೆ ಆಗಮಿಸಿರುವ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ. ಪ್ರಧಾನಿಯ ಈ ಗಂಡಾಂತರಕ್ಕೆ ವೃಶ್ಚಿಕ ರಾಶಿ ದೋಷವೇ ಕಾರಣ, ದೇವರ ಮೊರೆ ಹೋಗಿ ಪೂಜೆ, ಹೋಮ ಮಾಡಿ ಪರಿಹಾರ ಕಂಡುಕೊಳ್ಳದೇ ಹೋದ್ರೆ ಮೃತ್ಯು ಕೂಡ ಎದುರಾಗಬಹುದು ಎಂದಿದ್ದಾರೆ.

ಕುಮಾರಸ್ವಾಮಿ ಕಿಂಗ್ ಮೇಕರ್: ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ, ಮುಂದಿನ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಂಗ್ ಮೇಕರ್ ಆಗಲಿದ್ದಾರೆ. ಅವರಿಗಿದ್ದ ಆರೋಗ್ಯ ದೋಷ ನಾಶವಾಗಿದೆ. ತಂದೆಯವರ ಮಾತು ಕೇಳಿದರೆ ಮತ್ತೊಮ್ಮೆ ಸಿಎಂ ಆಗುವ ಸಾಧ್ಯತೆಯೂ ಇದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಉತ್ತಮ ಯೋಗವಿದೆ. ಆದರೆ, ಸ್ವಂತ ಬುದ್ಧಿ ಬಳಸಿಕೊಳ್ಳಬೇಕು. ಅಕ್ಕ ಪಕ್ಕದವರ ಮಾತು ಕೇಳಿದರೆ ಅನಾಹುತ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದ್ದಾರೆ.











Click it and Unblock the Notifications