Prajwal Reavanna: ಮೊಮ್ಮಗ ಪ್ರಜ್ವಲ್‌ನನ್ನು ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದು: ಸಿಎಂ ಸಿದ್ದರಾಮಯ್ಯ

ಹಾಸನ, ಮೇ, 01: ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯಾದಗಿರಿ ಜಿಲ್ಲೆ ದೇವತ್ಕಲ್‌ನಲ್ಲಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಹಾಗಾದರೆ ಆ ಹೇಳಿಕೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಇಡೀ ದೇಶಾದ್ಯಂತ ಸದ್ದು ಮಾಡುತ್ತಿದೆ. ಇನ್ನು ಈ ಸಂಬಂಧ ವಿಪಕ್ಷಗಳು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ. ಮತ್ತೊಂದೆಡೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿರುವ ಬಗ್ಗೆ ದೇವತ್ಕಲ್‌ನಲ್ಲಿ ಮಾತನಾಡಿದ ಸಿಎಂಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೇ ಪ್ರಜ್ವಲ್‌ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಮಾಡಿದ್ದಾರೆ.

Prajwal Reavanna Case CM Siddaramaiah allegation about H D Deve Gowda

ಲೋಕಸಭಾ ಚುನಾವಣೆ ಹೊತ್ತಲೇ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡುತ್ತಿದ್ದು, ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗುತ್ತಲೇ ಇದೆ. ಇನ್ನು ಈ ಪ್ರಕರಣವನ್ನು ಈಗಾಗಲೇ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿದೆ. ಆದರೆ, ಪ್ರಜ್ವಲ್‌ ರೇವಣ್ಣ ಇದೀಗ ವಿದೇಶದಲ್ಲಿದ್ದು, ಮೇ 3ಕ್ಕೆ ದೇಶಕ್ಕೆ ವಾಪಾಸಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿದ್ದರಾಮಯ್ಯ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, "ವೀಸಾ, ಪಾಸ್‌ಪೋರ್ಟ್‌ ಕೊಡುವವರು ಬಿಜೆಪಿಯವರೇ ತಾನೆ, ಸೆಕ್ಸ್‌ ಸ್ಕ್ಯಾಂಡಲ್‌ನಲ್ಲಿ ಸಿಲುಕಿರುವ ಬಗ್ಗೆ ಗೊತ್ತಿದ್ರೂ ಕೂಡ ಸಂಸದ ಪ್ರಜ್ವಲ್‌ ರೇವಣ್ಣಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಟಿಕೆಟ್‌ ಯಾಕೆ ಕೊಟ್ಟಿದ್ದಾರೆ?," ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಎಸ್‌ಐಟಿಯಿಂದ ಪಾರದರ್ಶನಿಕವಾಗಿ ತನಿಖೆ ಆಗುತ್ತದೆ ಎಂದು ಹೇಳಿದ್ದಾರೆ.

ಪೆನ್‌ಡ್ರೈವ್‌ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕನಾಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್‌​ಡ್ರೈವ್ ಕೊಟ್ಟಿದ್ದ. ಈ ಬಗ್ಗೆ ಆತನೇ ಹೇಳಿಕೊಂಡಿದ್ದಾನೆ. ಎಚ್‌.ಡಿ.ಕುಮಾರಸ್ವಾಮಿ ಕೇವಲ ರಾಜಕಾರಣಕ್ಕಾಗಿ ಡಿ.ಕೆ.ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+