Prajwal Revanna 1st Reaction: ಪೆನ್‌ಡ್ರೈವ್ ಬಗ್ಗೆ ವಿದೇಶದಿಂದಲೇ ಪ್ರಜ್ವಲ್ ರೇವಣ್ಣ ಫಸ್ಟ್ ರಿಯಾಕ್ಷನ್

ಪೆನ್‌ಡ್ರೈವ್ ಬಗ್ಗೆ ವಿದೇಶದಿಂದಲೇ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಶ್ಲೀಲ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನ್‌ಗೆ ಎಸ್ಕೇಪ್ ಆಗಿದ್ದರು. ಆದರೀಗ ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡುತ್ತಿದ್ದಂತೆ ಪ್ರಜ್ವಲ್ ರೇವಣ್ಣ 'ಎಕ್ಸ್'ನಲ್ಲಿ ಮನವಿ ಮಾಡಿದ್ದಾರೆ.

ಎಸ್‌ಐಟಿ ನೋಟೀಸ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ತಾವು ಬೆಂಗಳೂರಿನಲ್ಲಿ ಇಲ್ಲದ ಕಾರಣ ಖುದ್ದಾಗಿ ಬಂದು ತನಿಖೆಗೆ ಹಾಜರಾಗಲು ಕಾಲಾವಕಾಶ ನೀಡಬೇಕು ಎಂದು ತಮ್ಮ ವಕೀಲರ ಮೂಲಕ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ 'ಎಕ್ಸ್'ನಲ್ಲಿ ಹೀಗೆ ಬರೆದಿದ್ದಾರೆ- 'ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ' ಎಂದು ಬರೆದಿದ್ದಾರೆ. ಜೊತೆಗೆ ಮನವಿ ಪತ್ರವನ್ನು 'ಎಕ್ಸ್‌'ನಲ್ಲಿ ಹಂಚಿಕೊಂಡಿದ್ದಾರೆ.

Prajwal Revanna Case Prajwal Revanna s first reaction from abroad about pen drive

ಎಸ್‌ಐಟಿ ವಿಚಾರಣೆಗೆ ಖುದ್ದಾಗಿ ಹಾಜರಾಗಲು ಕಾಲಾವಕಾಶವನ್ನು ನೀಡುವಂತೆ ಪ್ರಜ್ವಲ್ ರೇವಣ್ಣ ತಮ್ಮ ವಕೀಲರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಇದನ್ನು ತಮ್ಮ 'ಎಕ್ಸ' ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಾಗಾದರೆ ಮನವಿ ಪತ್ರದಲ್ಲಿ ಏನಿದೆ.

'ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಮನೆಯ ಮೇಲೆ ತಮ್ಮ ಕಚೇರಿಯಿಂದ ಕಳುಹಿಸಿರುವ ನೋಟೀಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲಂ 41 (ಎ) ಸಿ.ಆರ್‌.ಪಿ.ಸಿ ದಿನಾಂಕ 30-4-2024ರ ತಮ್ಮ ನೋಟೀಸ್ ನಲ್ಲಿ ತಾವು ದಿನಾಂಕ:1-5-2024 ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟೀಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ'' ಎಂದು ವಕೀಲರಾದ ಅರುಣ್ ಜಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+