Prajwal Revanna Case: ದೇವೇಗೌಡ ಅವರು ಹೇಳಿದ್ದಾದ್ರೂ ಏನು?

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವುದಾಗಿ ಸರ್ಕಾರ ತೀರ್ಮಾನ ಮಾಡಿದೆ. ಈ ಬಗ್ಗೆ ಜಿ.ಟಿ.ದೇವೇಗೌಡರು ಹೇಳಿದ್ದಾದ್ರೂ ಏನು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.

ಹಾಸನ ಪೆನ್‌ಡ್ರೈವ್ ಪ್ರಕರಣ ಇಡೀ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ಅವರೇ ಪ್ರಜ್ವಲ್‌ ಅವರನ್ನು ಕರೆತಂದು ವಿಚಾರಣೆ ಮಾಡಲಿದ್ದಾರೆ ಅಂತಲೂ ಈಗಾಗಲೇ ಗೃಹ ಸಚಿವರು ತಿಳಿಸಿದ್ದಾರೆ.

Prajwal Revanna case What did G T Devegowda Say

ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧದ ಆರೋಪಗಳ ತನಿಖೆಗೆ ಎಸ್‌ಐಟಿ ತಂವನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು ಅಂತಾ ಪ್ರಜಾವಾಣಿ ವರದಿ ಮಾಡಿದೆ.

ಭಾನುವಾರ (ಏಪ್ರಿಲ್‌ 27) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಸಿಐಡಿ, ಎಸ್‌ಐಟಿ ಎಲ್ಲವೂ ಸರ್ಕಾರದ ಕೈಯಲ್ಲಿ ಇದೆ. ತನಿಖೆಯಿಂದ ಸತ್ಯ ಹೊರಬರಲಿದೆ. ಮತ್ತೊಂದೆಡೆ ಚುನಾವಣೆ ಸಮಯದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುತ್ತಾರೆ. ನಾವು ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವ ಹೊಂದಿದ್ದೇವೆ ಅಂತಲೂ ಹೇಳಿದ್ದಾರೆ.

ಘಟನೆ ಹಿನ್ನೆಲೆ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಹಲವು ಅಶ್ಲೀಲ ವಿಡಿಯೋಗಳು ರಾಜ್ಯಾದ್ಯಂದ ಹರಿದಾಡುತ್ತಿವೆ ಎಂದು ಸಾಮಾಜಿಕ ಜಲತಾಣದಲ್ಲಿ ಚರ್ಚೆ ಆಗುತ್ತಿತ್ತು. 2,000ಕ್ಕೂ ಹೆಚ್ಚು ವಿಡಿಯೋಗಳಿವೆ ಅಂತಲೂ ಸಾಮಾಜಿಕ ಜಾಲತಾಣಗಳಲ್ಲಿ ಸದ್ದಾಗುತ್ತಿದ್ದು, ಹಲವು ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಟ್ವಿಟರ್ ಸೇರಿದಂತೆ ಸಾಮಾಜಿಕ ಜಲಾತಣಗಳ ಮೂಲಕವೂ ವಿಡಿಯೋ ವೈರಲ್ ಆಗುತ್ತಿವೆ. ಆದರೆ ಇದು ಮಾರ್ಫ್ ಮಾಡಲಾದ ವಿಡಿಯೋ ಎಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದರು. ಮತ್ತೊಂದೆಡೆ ಇದು ನೈಜ ವಿಡಿಯೋ ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಇನ್ನು ಇದು ರಾಜ್ಯ ಮಹಿಳಾ ಆಯೋಗದ ಕೈ ಸೇರಿದ್ದು, ಇದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮುಖ್ಯಮಂತ್ರಿ ಅವರಿಗೆ ಬರೆದಿದ್ದರು.

ಇನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಬರೆದ ಪತ್ರಕ್ಕೆ ಸ್ಪಂದಿಸಿ, ಈ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+