ಫೇಸ್‌ಬುಕ್, ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡು ಕಾಮೆಂಟ್ ಬಾಕ್ಸ್ ಕ್ಲೋಸ್ ಮಾಡಿದ ಸಂಸದ ಪ್ರಜ್ವಲ್ ರೇವಣ್ಣ
ಹಾಸನ, ಮೇ, 01: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಚೆಲ್ಲಾಡುತ್ತಿದೆ. ಇನ್ನು ಇದೀಗ ವಿದೇಶದಲ್ಲಿರುವ ಪ್ರಜ್ವಲ್ ತಮ್ಮ ಫೇಸ್‌ಬುಕ್, ಟ್ವಿಟರ್ ಖಾತೆಯಲ್ಲಿ ಎಸ್‌ಐಟಿ ತನಿಖೆ ಬಗ್ಗೆ ಪೋಸ್ಟ್‌ವೊಂದನ್ನು ಹಂಚಿಕೊಂಡು ಕಾಮೆಂಟ್ ಸೆಕ್ಷನ್ ಅನ್ನು ಕ್ಲೋಸ್ ಮಾಡಿಕೊಂಡಿದ್ದಾರೆ. ಹಾಗಾದರೆ ಯಾಕೆ ಹಾಗೂ ಇದರಲ್ಲೇನಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
"ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ," ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಆದರೆ ಈ ತಾವು ಬರೆದುಕೊಂಡಿರುವ ಈ ಪೋಸ್ಟ್‌ನಲ್ಲಿ ಕಾಮೆಂಟ್ ಬಾಕ್ಸ್ ಅನ್ನು ಕ್ಲೋಸ್ ಮಾಡಿಕೊಂಡಿದ್ದಾರೆ. ಇದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನು ವಕೀಲರ ಪತ್ರದಲ್ಲಿ, ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ಅವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿದ ನೋಟಿಸ್ ಅನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಶ್ರೀ ಪ್ರಜ್ವಲ್ ಅವರ ಕುಟುಂಬಂದಿಂದ ಬಂದ ಮಾಹಿತಿ ಪ್ರಕಾರ, ಕಲಂ 41 (ಎ) ಸಿ.ಆರ್.ಪಿ.ಸಿ ದಿನಾಂಕ: 30-04-2024ರ ತಮ್ಮ ನೋಟಿಸ್‌ನಲ್ಲಿ ತಾವು ದಿನಾಂಕ 01-05-2024ರಂದು ತಮ್ಮ ಮನೆ ಮುಂದೆ ಹಾಜರಾಗಲು ತಿಳಿಸಿರುತ್ತೀರಿ.
ಆದರೆ ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು, ಅವರರಿಗೆ ನೋಟಿಸ್ ಬಗ್ಗೆ ವಿಷಯ ತಿಳಿಸಲಾಗಿದೆ. ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ ಎಂದು ತಿಳಿಸಲಾಗಿದೆ.












Click it and Unblock the Notifications