Prajwal Revanna Pendrive case: ಸಿಬಿಐಗೆ ಕರ್ನಾಟಕ ಸರ್ಕಾರದ ಮನವಿ ಏನು?
Prajwal Revanna Pendrive case: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಾದ ಬೆನ್ನಲ್ಲೇ ಜೆಡಿಎಸ್ ನಾಯಕ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರು. ಇದೀಗ, ಅವರನ್ನು ಪತ್ತೆ ಹಚ್ಚಲು ಇತರ ರಾಷ್ಟ್ರಗಳ ನೆರವು ಕೋರುವಂತೆ ಕರ್ನಾಟಕ ಸರ್ಕಾರ ಕೇಂದ್ರ ತನಿಖಾ ದಳವನ್ನು (ಸಿಬಿಐ) ಒತ್ತಾಯಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಶ್ಲೀ ವಿಡಿಯೋ ಪ್ರಕರಣ ಬಟಾ ಬಯಲಾಗುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದರು ಎಂದು ಹೇಳಲಾಗಿತ್ತು. ಈ ಪ್ರಕರಣ ಆರೋಪ ಹೊತ್ತಿರುವ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡುತ್ತಲೇ ಬಂದಿದೆ. ಆದರೂ ಇನ್ನೂ ವಿಚಾರಣಗೆ ಹಾಜರಾಗದೇ ಅವರು ಬೇರೆ ದೇಶಗಳನ್ನು ಸುತ್ತುತ್ತಿದ್ದಾರೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ಲಭ್ಯವಾಗಿದ್ದು, ಆದ್ದರಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಮಾಜಿ ಪ್ರಧಾನಿ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಚೆಲ್ಲಾಡಿದ್ದು, ಈ ವಿಚಾರ ಲೋಕಸಭಾ ಚುನಾವಣೆಯ ಮಧ್ಯದಲ್ಲಿ ಭಾರೀ ಗದ್ದಲ ಎಬ್ಬಿಸಿ ಅವರು ದೇಶ ತೊರೆದು ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಪ್ರಕರಣದಲ್ಲಿ ಸಂತ್ರಸ್ತರಿಗೆ ಎಲ್ಲ ಸಹಾಯವನ್ನು ನೀಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ "ಸಂತ್ರಸ್ತರಿಗೆ ಎಲ್ಲ ಬೆಂಬಲವನ್ನು ನೀಡುವಂತೆ ನಾನು ವಿನಂತಿಸುತ್ತೇನೆ" ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲು ಸಂಸದರು ಚಿತ್ರೀಕರಿಸಿದ್ದಾರೆ ಎನ್ನಲಾದ ಸ್ಪಷ್ಟ ವೀಡಿಯೋಗಳು ಹಾಸನ ಕ್ಷೇತ್ರದಲ್ಲಿ ಈಗಾಗಲೇ ವ್ಯಾಪಕವಾಗಿ ಚೆಲ್ಲಾಡಿವೆ. ಇದರ ಬೆನ್ನಲ್ಲೇ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದರು. "2019 ಮತ್ತು 2022ರ ನಡುವೆ ತನಗೆ ಹಲವಾರು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ," ಎಂದು ಮಹಿಳೆಯು ಆರೋಪಿಸಿದ್ದಾರೆಂದು ತಿಳಿದುಬಂದಿದೆ.
ಅಷ್ಟೇ ಅಲ್ಲದೆ, ಪ್ರಜ್ವಲ್ ರೇವಣ್ಣ ಅವರು ತಮ್ಮ ಮಗಳ ಜೊತೆ ವಿಡಿಯೋ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ ಮತ್ತು ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ.












Click it and Unblock the Notifications