Prajwal Revanna: ಜೈಲಿನಿಂದ ಪ್ರಜ್ವಲ್ ರೇವಣ್ಣ ರೀಲಿಸ್ ಕುರಿತು ಮಾಹಿತಿ ಇಲ್ಲಿದೆ
ಹಾಸನ, ಮಾರ್ಚ್ 10: ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ತೀವ್ರ ಸದ್ದು ಮಾಡಿತ್ತು. ಇದೀಗ ಜೈಲಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಯಾವಾಗ ಹೊರಗೆ ಬುರತ್ತಾರೆ ಎಂಬುದರ ಬಗ್ಗೆ ಸೋದರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಯುವಕ ಧನು ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಈ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಸೂರಜ್ ರೇವಣ್ಣ,ಪ್ರಜ್ವಲ್ ರೇವಣ್ಣ ಅವರು ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಏನು ತಲೆಕೆಡೆಸಿಕೊಳ್ಳಬೇಡಿ. ನಾವು, ನೀವು ಎಲ್ಲರೂ ಒಟ್ಟಿಗೆ ಸ್ವಾಗತ ಮಾಡೋಣ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ. ಮುಂದಕ್ಕೂ ರಾಜಕೀಯ ಏನು ಅನ್ನೋದು ನನಗೂ ಗೊತ್ತಿದೆ ಎಂದು ಸೂರಜ್ ರೇವಣ್ಣ ಅವರು ಸ್ಟೋಟಕ ಹೇಳಿಕೆಯನ್ನ ನೀಡಿದ್ದಾರೆ.

ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ಹೊರಬರ್ತಾರೆ, ತಲೆಕೆಡಿಸಿಕೊಳ್ಳಬೇಡಿ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ ಆಗುತ್ತೆ ಎಂದು ಭವಿಷ್ಯ ನುಡಿದರು. ಕೆಲವೇ ತಿಂಗಳಲ್ಲಿ ಸರ್ಕಾರ ಬದಲಾಗುತ್ತದೆ. ಆನಂತರ ಅಲ್ಲಿದ್ದವರೆಲ್ಲರೂ ಹೆಚ್‌ಡಿ ರೇವಣ್ಣ ಜೈ ಅಂತಾರೆ. ಕ್ರಿಕೆಟ್ ಪಂದ್ಯಾವಳಿಯಿಂದ ಒಂದು ಸಂಘಟನೆ ಮನೋಭಾವ ನಿಮ್ಮಲ್ಲಿ ಬರಲ್ಲ. ನಾವು ದಿನ ಬೆಳಗ್ಗೆ ಆದರೆ ನಿಮ್ಮ ಜೊತೆ ಎಲ್ಲಾ ಕಾರ್ಯಕ್ರಮಗಳನ್ನು ಭಾಗವಹಿಸುತ್ತೇವೆ ಎಂದು ತಿಳಿಸಿದರು.
ಇನ್ನ ರೇವಣ್ಣ ಅವರು ಎಲ್ಲಾ ಹಳ್ಳಿಗಳಿಗೂ ರಸ್ತೆಗಳನ್ನು ಮಾಡಿದರು. ಈಗೀನ ಜನರೇಷನ್‌ನಲ್ಲಿ ಎಲ್ಲಾ ಹಳ್ಳಿಗಳಲ್ಲೂ ದೇವಾಲಯ ನಿರ್ಮಾಣ ಮಾಡ್ತಿದ್ದಾರೆ. ನಮ್ಮ ಗ್ರಾಮಕ್ಕೆ ಯಾರು ಹಿತ, ಯಾರು ಅಹಿತ ಅಂತ ಯೋಚನೆ ಮಾಡಬೇಕು. ಶಾಸ್ವತವಾಗಿ ನಿಮ್ಮ ಗ್ರಾಮದ ಕೆಲಸ ಮಾಡಿದವರನ್ನು ಏಕೆ ನೆನಪಿಸಿಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಯುವಕರು ಎಲ್ಲರೂ ಒಂದಾಗಿ ಒಗ್ಗಟ್ಟಾಗಿ ಒಂದು ಕಡೆ ಇರಬೇಕು. ಇನ್ನೊಂದು ನಾಲ್ಕೈದು ತಿಂಗಳಲ್ಲಿ ಸರ್ಕಾರ ಚೇಂಜ್ ಆಗುತ್ತದ. ಆ ಕಡೆ ಹೋಗಿರುವವರ ಕಥೆ ಏನು ಎಂದು ಸೂರಜ್ ರೇವಣ್ಣ ವ್ಯಂಗ್ಯ ಮಾಡಿದರು.
ಇನ್ನೂ ಸೂರ್ಯ ಹುಟ್ಟೋದು ಮಾತ್ರವಲ್ಲ, ಸೂರ್ಯ ಪ್ರಜ್ವಲಿಸುತ್ತಾನೆ ಅನ್ನೋದು ನೆನಪಿರಲಿ, ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಗೌಡರ ಕುಟುಂಬ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಹಿಂಸಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಗೆ ಅಧಿಕಾರ ಶಾಶ್ವತವಲ್ಲ ಎಂದು ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಎಚ್ಚರಿಕೆ ನೀಡಿದ್ದರು.
ಯಾವುದೂ ಶಾಶ್ವತವಲ್ಲ. ಯಾವ ಸರ್ಕಾರವೂ ಶಾಶ್ವತವಲ್ಲ. ನಾನು, ನನ್ನಿಂದ ಎಲ್ಲಾ ಅಂತ ಹೇಳುವವರು ಒಮ್ಮೆ ಸ್ಮಶಾನಕ್ಕೆ ಹೋಗಿ ಬನ್ನಿ. ಎಂಥೆಂತವರು ಏನೇನ್ ಆಗಿದ್ದಾರೆ ಅನ್ನೋದು ಗೊತ್ತಾಗುತ್ತೆ. ನಾವು ಮಾಡುವ ಒಳ್ಳೆಯ ಕೆಲಸ ಮಾತ್ರ ಈ ಭೂಮಿ ಮೇಲೆ ಉಳಿಯುತ್ತದೆ. ಈ ದ್ವೇಷದ ರಾಜಕಾರಣ ಉಳಿಯಲ್ಲ, ಅದನ್ನು ಬಿಟ್ಟು ದಿನ ಬೆಳಗ್ಗೆಯಾದರೆ ರೇವಣ್ಣ ಕುಟುಂಬವನ್ನು ಹೇಗೆ ತುಳಿಯೋದು? ದೇವೇಗೌಡರ ಕುಟುಂಬವನ್ನು ಹೇಗೆ ಮುಗಿಸೋದು ಎಂಬುದನ್ನು ಮಾಡ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಸೂರಜ್ ರೇವಣ್ಣ ವಾಗ್ದಾಳಿ ನಡೆಸಿದ್ದರು.












Click it and Unblock the Notifications