ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ: ಎಚ್ ಡಿ ದೇವೇಗೌಡ

|
Google Oneindia Kannada News

ಹಾಸನ, ಆಗಸ್ಟ್ 13: ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಖಚಿತ ಎಂದು ಜೆಡಿಎಸ್ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಈಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಪೂಜೆ ಸಲ್ಲಿಸಲು ಆಗಮಿಸಿದ್ದ ಸಂದರ್ಭದಲ್ಲಿ ಅವರು ಈ ಮಾಹಿತಿ ನೀಡಿದರು.

ಹುಟ್ಟುಹಬ್ಬ ಸಂಭ್ರಮದಲ್ಲಿ ಪ್ರಜ್ವಲ್ , ಚುನಾವಣೆ ಸ್ಪರ್ಧೆ ಬಗ್ಗೆ ಸುಳಿವು!ಹುಟ್ಟುಹಬ್ಬ ಸಂಭ್ರಮದಲ್ಲಿ ಪ್ರಜ್ವಲ್ , ಚುನಾವಣೆ ಸ್ಪರ್ಧೆ ಬಗ್ಗೆ ಸುಳಿವು!

2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧೆ ಖಚಿತ. ಆದರೆ, ಎಲ್ಲಿಂದ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧಾರ ಮಾಡಿಲ್ಲ ಎಂದು ತಿಳಿಸಿದರು.

ಶ್ರಾವಣದ ಮೊದಲ ಸೋಮವಾರದ ಪ್ರಯುಕ್ತ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಚಿವ ಎಚ್.ಡಿ. ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರ ಜತೆ ಅವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ರಾಜ್ಯ ರಾಜಕಾರಣದಲ್ಲಿ ಎಚ್‌ಡಿಕೆ

ರಾಜ್ಯ ರಾಜಕಾರಣದಲ್ಲಿ ಎಚ್‌ಡಿಕೆ

ಕುಮಾರಸ್ವಾಮಿ ಇಷ್ಟು ಬೇಗ ರಾಷ್ಟ್ರರಾಜಕಾರಣಕ್ಕೆ ಹೋಗುವುದಿಲ್ಲ. ಇನ್ನೂ ಹತ್ತು ವರ್ಷ ರಾಜ್ಯ ರಾಜಕಾರಣದಲ್ಲಿಯೇ ಇರುತ್ತಾರೆ ಎಂದು ದೇವೇಗೌಡ ತಿಳಿಸಿದರು.

ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿದೆ. ಅದನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಲೋಕಸಭೆ ಚುನಾವಣೆ ಮುಗಿದ ಬಳಿಕವೂ ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿಯೇ ನಡೆಯಲಿದೆ ಎಂದರು.

ಹಾಸನ ಬದಲಿಗೆ ಮಂಡ್ಯದಿಂದ ಪ್ರಜ್ವಲ್ ರೇವಣ್ಣ ಕಣಕ್ಕೆ?ಹಾಸನ ಬದಲಿಗೆ ಮಂಡ್ಯದಿಂದ ಪ್ರಜ್ವಲ್ ರೇವಣ್ಣ ಕಣಕ್ಕೆ?

ಮಂಡ್ಯದಿಂದ ಸ್ಪರ್ಧೆ?

ಮಂಡ್ಯದಿಂದ ಸ್ಪರ್ಧೆ?

ದೇವೇಗೌಡರ ಹೇಳಿಕೆ ಬಗ್ಗೆ ಪ್ರಜ್ವಲ್ ರೇವಣ್ಣ ಸಂತಸ ಹಂಚಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿರುವ ಪ್ರಜ್ವಲ್ ರೇವಣ್ಣ, ಮಂಡ್ಯದಿಂದ ಕಣಕ್ಕಿಳಿಯಲು ಬಯಕೆ ವ್ಯಕ್ತಪಡಿಸಿದ್ದರು. ಮಂಡ್ಯದಿಂದ ಸ್ಪರ್ಧಿಸಲು ಅವಕಾಶ ದೊರೆತರೆ ತಾವೇ ಪುಣ್ಯವಂತ ಎಂದಿರುವ ಪ್ರಜ್ವಲ್, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ ಎಂದಿದ್ದಾರೆ.

ತಾವು ರಾಜಕಾರಣದಿಂದ ಹಿಂದೆ ಸರಿದು ಹಾಸನ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಡುವ ಬಗ್ಗೆ ದೇವೇಗೌಡರು ಈ ಮೊದಲು ಸುಳಿವು ನೀಡಿದ್ದರು. ಆದರೆ, ಮುಂದಿನ ಚುನಾವಣೆಯಲ್ಲಿಯೂ ದೇವೇಗೌಡರು ಹಾಸನದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಜ್ವಲ್ ರೇವಣ್ಣ ಮಂಡ್ಯದಿಂದ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

2019ರ ಲೋಕಸಭಾ ಚುನಾವಣೆ: ದೇವೇಗೌಡ್ರ ಕುಟುಂಬದ ಮಹತ್ವದ ನಿರ್ಧಾರ?2019ರ ಲೋಕಸಭಾ ಚುನಾವಣೆ: ದೇವೇಗೌಡ್ರ ಕುಟುಂಬದ ಮಹತ್ವದ ನಿರ್ಧಾರ?

ಬಿಜೆಪಿಗೆ ಜೆಡಿಎಸ್ ಟಾರ್ಗೆಟ್

ಬಿಜೆಪಿಗೆ ಜೆಡಿಎಸ್ ಟಾರ್ಗೆಟ್

ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಮೋದಿ ಸೇರಿದಂತೆ ಬಿಜೆಪಿಗರಿಗೆ ಜೆಡಿಎಸ್‌ಅನ್ನು ತೆಗಳುವುದೇ ಕೆಲಸವಾಗಿದೆ. ಬಿಜೆಪಿಗೆ ಕುಮಾರಸ್ವಾಮಿಯೇ ಟಾರ್ಗೆಟ್ ಆಗಿದ್ದಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ದೇವೇಗೌಡ ಆರೋಪಿಸಿದರು.

ಲೋಕಸಭಾ ಚುನಾವಣೆ: ಹರಿದಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ!ಲೋಕಸಭಾ ಚುನಾವಣೆ: ಹರಿದಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ!

ಎಚ್‌ಡಿ ರೇವಣ್ಣ ಮುಖ್ಯಮಂತ್ರಿ?

ಎಚ್‌ಡಿ ರೇವಣ್ಣ ಮುಖ್ಯಮಂತ್ರಿ?

ಎಚ್.ಡಿ. ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಕೋಡಿಮಠದ ಸ್ವಾಮೀಜಿ ನುಡಿದ ಭವಿಷ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಗೌಡ, ಈಗ ಕುಮಾರಸ್ವಾಮಿ ಈಗ ಮುಖ್ಯಮಂತ್ರಿ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರೆ. ಆಗ ರೇವಣ್ಣ ರಾಜ್ಯ ರಾಜಕಾರಣ ನೋಡಿಕೊಳ್ಳಲಿದ್ದಾರೆ. ಮುಂದೆ ಉನ್ನತ ಹುದ್ದೆ ಅಲಂಕರಿಸಲಿದ್ದಾರೆ ಎಂದು ರೇವಣ್ಣ ಸಿ.ಎಂ. ಆಗಲಿದ್ದಾರೆ ಎಂಬುದಾಗಿ ಪರೋಕ್ಷವಾಗಿ ಹೇಳಿದರು.

ಜಾತಕ ವಿಮರ್ಶೆ: ಎಚ್.ಡಿ.ರೇವಣ್ಣ ರಾಜಕೀಯ ಔನ್ನತ್ಯಕ್ಕೆ ಕಾಲ ಸನ್ನಿಹಿತ ಜಾತಕ ವಿಮರ್ಶೆ: ಎಚ್.ಡಿ.ರೇವಣ್ಣ ರಾಜಕೀಯ ಔನ್ನತ್ಯಕ್ಕೆ ಕಾಲ ಸನ್ನಿಹಿತ

ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಇಲ್ಲ

ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಇಲ್ಲ

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಈ ಚುನಾವಣೆಗಳಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಆದರೆ, ಇದರಿಂದ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆ ಆಗುವುದಿಲ್ಲ. ಇಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿಗೆ ತೊಡಕು ಉಂಟಾಗದಂತೆ ಚುನಾವಣೆ ಎದುರಿಸಲಾಗುವುದು ಎಂದು ತಿಳಿಸಿದರು.

ಮೊದಲ ಬಾರಿಗೆ ಭೇಟಿ

ಮೊದಲ ಬಾರಿಗೆ ಭೇಟಿ

ಮುಖ್ಯಮಂತ್ರಿಯಾದ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ಹುಟ್ಟೂರಿಗೆ ಭೇಟಿ ನೀಡಿದರು. ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಅಲ್ಲಿಂದ ಅವರು ಧರ್ಮಸ್ಥಳಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

English summary
JDS chief HD DeveGowda said that Prajwal Revanna will contest in upcoming Lok Sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X